ಭೀಮಾ ತೀರದಲ್ಲಿ ಮತ್ತೆ ರಕ್ತದ ಓಕುಳಿ: ಟಂ-ಟಂ ಚಾಲಕನಿಗೆ ಮಾರಣಾಂತಿಕ ಹಲ್ಲೆ
ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಪ್ರಜ್ವಲ್ ತಂದೆ ಮಲ್ಕಪ್ಪ ಹೊಸಮನಿ ಹಾಗೂ ಪ್ರೀತಮ್ ಹೊಸಮನಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದತ್ತುವನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
-
ಟಂ-ಟಂ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ
ಚಿಕಿತ್ಸೆ ಫಲಿಸದೆ ಯುವಕ ಸಾವು
ಅಫಜಲಪುರ: ತಾಲೂಕಿನ ದೇವಲಗಾಣಗಾಪುರ ಗ್ರಾಮದಲ್ಲಿ ಟಂ-ಟಂ ಚಾಲಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ಆತಂಕಕ್ಕೆ ಕಾರಣವಾಗಿದೆ. ಶುಕ್ರವಾರ ನಸುಕಿನ ಜಾವ ಸುಮಾರು 2.17 ಗಂಟೆ ಸುಮಾರಿಗೆ ಸಂಗಮ ರಸ್ತೆಯಲ್ಲಿರುವ ಅವಧೂತ ಆಶ್ರಮದ ಸಮೀಪ ಈ ಘಟನೆ ನಡೆದಿದೆ. ಚಾಲಕನನ್ನು ದೇವಲಗಾಣಗಾಪುರ ಗ್ರಾಮದ ದತ್ತು (19) ತಂದೆ ಯಶವಂತ ಮಾಗಣಗೇರೆ ಎಂದು ಗುರುತಿಸಲಾಗಿದೆ. ಆತ ವೃತ್ತಿಯಲ್ಲಿ ಟಂ-ಟಂ ಚಾಲಕ.
ಇದನ್ನೂ ಓದಿ: Kalaburagi News: ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ: ಬಿಜೆಪಿ ಶಾಸಕರು, ಮುಖಂಡರ ಬಂಧನ
ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಗ್ರಾಮದ ಪ್ರಜ್ವಲ್ ತಂದೆ ಮಲ್ಕಪ್ಪ ಹೊಸಮನಿ ಹಾಗೂ ಪ್ರೀತಮ್ ಹೊಸಮನಿ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ. ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದ ದತ್ತುವನ್ನು ಮೊದಲಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
“ದಿಟ್ಟಿಸಿ ನೋಡಿದ ವಿಚಾರ”ವನ್ನು ನೆಪವನ್ನಾಗಿ ಮಾಡಿಕೊಂಡು ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳು ಯುವಕ ನೀಡಿದ್ದ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಸಂಬಂಧ ದೇವಲಗಾಣಗಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆ ಹಾಗೂ ಬಂಧನಕ್ಕೆ ಬಲೆ ಬೀಸಿದ್ದಾರೆ.