Bomb Threat: ಬೆಂಗಳೂರಿನ 40 ಶಾಲೆಗಳಿಗೆ ಬಾಂಬ್ ಬೆದರಿಕೆ
Bomb Threat: ಬೆಂಗಳೂರು ನಗರದ ಆರ್ ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿಷಯ ತಿಳಿದ ತಕ್ಷಣ ಎಲ್ಲ ಶಾಲೆಗಳಿಗೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಬೆಂಗಳೂರು: ಬೆಂಗಳೂರಿನ (Bengaluru) ಪ್ರಮುಖ 40 ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ (Bomb Threat) ಬೆದರಿಕೆಯೊಡ್ಡಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರ್. ಆರ್ ನಗರ ಹಾಗೂ ಕೆಂಗೇರಿ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ (Private Schools) ಬಾಂಬ್ ಬೆದರಿಕೆಯೊಡ್ಡಲಾಗಿದೆ. ಸ್ಥಳಕ್ಕೆ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಗಳೂರು ನಗರದ ಆರ್ ಆರ್ ನಗರ, ಕೆಂಗೇರಿ ಸೇರಿದಂತೆ ಒಟ್ಟು 40 ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದಿದ್ದು, ವಿಷಯ ತಿಳಿದ ತಕ್ಷಣ ಎಲ್ಲ ಶಾಲೆಗಳಿಗೆ ಪೊಲೀಸರು ಮತ್ತು ಬಾಂಬ್ ನಿಷ್ಕ್ರಿಯ ದಳದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅದೇ ರೀತಿಯಾಗಿ ದೆಹಲಿಯ ಒಟ್ಟು 10 ಶಾಲೆಗಳಲ್ಲಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದೆ.
ಇತ್ತೀಚೆಗೆ ರಾಜ್ಯದಲ್ಲಿ ಬಾಂಬ್ ಬೆದರಿಕೆ ಪ್ರಕರಣಗಳು ಹೆಚ್ಚಾಗಿವೆ. ಹುಬ್ಬಳ್ಳಿ ವಿಮಾನ ನಿಲ್ದಾಣವನ್ನು (Hubballi Airport) ಸ್ಫೋಟಿಸುವುದಾಗಿ (bomb threat) ಇತ್ತೀಚೆಗೆ ಬಾಂಬ್ ಬೆದರಿಕೆ ಹಾಕಲಾಗಿತ್ತು. ಕೆಲ ಕಾಲ ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು. ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರವನ್ನು (Bhatkal city) ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಖಾಲಿದ್ ಅಲಿಯಾಸ್ ನಿತಿನ್ ಶರ್ಮಾ (Khalid alias Nitin Sharma) ಎಂಬಾತನನ್ನು ಉತ್ತರ ಕನ್ನಡ ಪೊಲೀಸರು (Uttara Kannada Police) ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ: Bomb Threat: 24 ಗಂಟೆಯೊಳಗೆ ಭಟ್ಕಳ ಪಟ್ಟಣ ಸ್ಫೋಟಿಸುತ್ತೇವೆ: ಪೊಲೀಸ್ ಠಾಣೆಗೆ ಬಾಂಬ್ ಬೆದರಿಕೆ ಸಂದೇಶ