ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

180ಕ್ಕೂ ಹೆಚ್ಚು ಅಪ್ರಾಪ್ತೆಯರಿಗೆ ಲೈಂಗಿಕ ದೌರ್ಜನ್ಯ ಎಸಗಿದ ಮೊಹಮ್ಮದ್ ಅಯಾಜ್ ವಿರುದ್ಧ ಬುಲ್ಡೋಜರ್ ಕ್ರಮ; ಅಕ್ರಮವಾಗಿ ನಿರ್ಮಿಸಿದ ಮನೆಯ ಭಾಗ ನೆಲಸಮ

ಸುಮಾರು 180ಕ್ಕೂ ಹೆಚ್ಚು ಮಂದಿ ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ದೌರ್ಜನ್ಯ ನೀಡಿರುವ ಆರೋಪಿ ವಿರುದ್ಧ ಬುಲ್ಡೋಜರ್ ಕ್ರಮ ಕೈಗೊಳ್ಳಲಾಗಿದೆ. ಆರೋಪಿಯನ್ನು ಬಂಧಿಸಲಾಗಿದ್ದು, ಇದಕ್ಕೂ ಮುನ್ನ ಆರೋಪಿಯ ಮನೆಯ ಅಕ್ರಮ ಭಾಗಗಳನ್ನು ಕೆಡವಲಾಗಿದೆ. ಈ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಪರತ್ವಾಡ ನಗರದಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯ ಆರೋಪಿ ವಿರುದ್ಧ ಬುಲ್ಡೋಜರ್ ಕ್ರಮ

ಸಂಗ್ರಹ ಚಿತ್ರ -

ಅಮರಾವತಿ: ಅಪ್ರಾಪ್ತರಿಗೆ ಲೈಂಗಿಕ ದೌರ್ಜನ್ಯ (physical abusing) ಎಸಗಿದ ಆರೋಪಿ ವಿರುದ್ಧ ಬುಲ್ಡೋಜರ್ ಕ್ರಮ (Bulldozer action) ಕೈಗೊಂಡಿರುವ ಘಟನೆ ಮಹಾರಾಷ್ಟ್ರದಲ್ಲಿ (Maharastra) ನಡೆದಿದೆ. ಅಮರಾವತಿ ಜಿಲ್ಲೆಯ ಪರತ್ವಾಡ ನಗರದಲ್ಲಿ 19 ವರ್ಷದ ಮೊಹಮ್ಮದ್ ಅಯಾಜ್‌ ಎಂಬಾತ ಸುಮಾರು 180ಕ್ಕೂ ಹೆಚ್ಚು ಅಪ್ರಾಪ್ತ ವಯಸ್ಕರಿಗೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಅಪ್ರಾಪ್ತರನ್ನು ಪ್ರೀತಿಯ ಬಲೆಯಲ್ಲಿ ಸಿಲುಕಿಸಿ ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಿಸಿದ ಆರೋಪದ ಮೇಲೆ ಮೊಹಮ್ಮದ್ ಅಯಾಜ್‌ನನ್ನು ಪೊಲೀಸರು ಶನಿವಾರ ಬಂಧಿಸಿದರು. ಇದಕ್ಕೂ ಮೊದಲು ಆತನ ಮನೆಯ ಅಕ್ರಮ ಭಾಗಗಳನ್ನು ಕೆಡವಲಾಗಿದೆ.

ಪರತ್ವಾಡ ನಗರದ ನಿವಾಸಿ ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ವಿರುದ್ಧ ಲೈಂಗಿಕ ದೌರ್ಜನ್ಯ, ಲೈಂಗಿಕ ಕಿರುಕುಳ ಮತ್ತು ಅಶ್ಲೀಲ ವಿಡಿಯೊ ರೆಕಾರ್ಡ್ ಮಾಡಿರುವ ದೂರು ದಾಖಲಿಸಲಾಗಿದೆ. ಆತನ ಬಂಧನಕ್ಕೂ ಮೊದಲು ಆತನ ಒಂದು ಅಂತಸ್ತಿನ ಮನೆಯ ಅಕ್ರಮ ಭಾಗಗಳನ್ನು ಕೆಡವಲಾಗಿದೆ. ಅಚಲ್ಪುರ್ ಮುನ್ಸಿಪಲ್ ಕೌನ್ಸಿಲ್‌ನ ತಂಡವು ಅಕ್ರಮ ರಚನೆಯ ವಿರುದ್ಧ ಕಾರ್ಯಾಚರಣೆ ನಡೆಸಿತು. ಈ ಸಂದರ್ಭದಲ್ಲಿ ಬಿಜೆಪಿ ಶಾಸಕ ಪ್ರವೀಣ್ ತಯಾಡೆ ಉಪಸ್ಥಿತರಿದ್ದರು.

Physical Abuse: ಬಾಲಕಿ ಮೇಲೆ ಅತ್ಯಾಚಾರವೆಸಗಿ ಗರ್ಭಪಾತ ಮಾಡಿಸಿದ ಪಾಪಿ ಶಿಕ್ಷಕ!

ಅತಿಕ್ರಮಣಕ್ಕೆ ಸಂಬಂಧಿಸಿ ಈ ಹಿಂದೆಯೇ ಪುರಸಭೆ ವತಿಯಿಂದ ಅಯಾಜ್ ಕುಟುಂಬಕ್ಕೆ ನೊಟೀಸ್ ನೀಡಲಾಗಿತ್ತು. ಬುಲ್ಡೋಜರ್ ಕ್ರಮ ಕೈಗೊಳ್ಳುವಾಗ ಮನೆಯ ಆವರಣದ ಹೊರಗೆ ಭಾರೀ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು.

ಮೊಹಮ್ಮದ್ ಅಯಾಜ್ ಅಲಿಯಾಸ್ ತನ್ವೀರ್ ಅಪ್ರಾಪ್ತ ವಯಸ್ಸಿನ ಹುಡುಗಿಯರನ್ನು ಪ್ರೀತಿಯ ಬಲೆಯಲ್ಲಿ ಬೀಳಿಸಿ ಮುಂಬೈ ಮತ್ತು ಪುಣೆಗೆ ಕರೆದೊಯ್ದು 350 ಕ್ಕೂ ಹೆಚ್ಚು ಅಶ್ಲೀಲ ವಿಡಿಯೊಗಳನ್ನು ಚಿತ್ರೀಕರಿಸಿದ್ದಾನೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಶನಿವಾರ ಆತನನ್ನು ಬಂಧಿಸಿದ್ದಾರೆ.

ಅಪ್ರಾಪ್ತ ವಯಸ್ಸಿನ ಯುವತಿಯರ ವಿಡಿಯೊಗಳನ್ನು ಮಾಡಿ ಬಳಿಕ ಅವರಿಗೆ ಬ್ಲ್ಯಾಕ್‌ಮೇಲ್ ಮಾಡಿ ವೇಶ್ಯಾವಾಟಿಕೆ ನಡೆಸಲು ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಅಯಾಜ್ ನ ಕೆಲವು ಚಿತ್ರ, ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದ್ದು, ಇದು ಆತನ ವಿರುದ್ಧ ಕ್ರಮ ಕೈಗೊಳ್ಳಲು ಕಾರಣವಾಯಿತು. ಬಿಜೆಪಿ ಸಂಸದರೊಬ್ಬರ ದೂರಿನ ಮೇರೆಗೆ ಪೊಲೀಸರು ಕ್ರಮ ಕೈಗೊಂಡಿದ್ದರು.

ಯಾರು ಮೊಹಮ್ಮದ್ ಅಯಾಜ್?

ಮೊಹಮ್ಮದ್ ಅಯಾಜ್ ಎಐಎಂಐಎಂನ ಪದಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದನು. ಆತ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿರುವ ಹಲವು ವಿಡಿಯೊ, ಚಿತ್ರಗಳಲ್ಲಿ ಎಐಎಂಐಎಂನ ಅಮರಾವತಿ ಅಧ್ಯಕ್ಷ ಹಾಜಿ ಇರ್ಫಾನ್ ಖಾನ್ ಅವರಿಂದ ಪತ್ರವನ್ನು ಸ್ವೀಕರಿಸುತ್ತಿರುವಂತೆ ಮತ್ತು ಪಕ್ಷದ ರಾಲಿಗಳಲ್ಲಿ ಭಾಗವಹಿಸಿರುವುದನ್ನು ಕಾಣಬಹುದಾಗಿದೆ. ಆತನ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಗಳು ಕೇಳಿ ಬಂದ ಮೇಲೆ ಹಲವು ಚಿತ್ರ, ವಿಡಿಯೊಗಳನ್ನು ಅಳಿಸಿ ಹಾಕಲಾಗಿದೆ. ಪಕ್ಷದೊಂದಿಗೆ ಆತ ಯಾವುದೇ ಸಂಬಂಧ ಹೊಂದಿಲ್ಲ ಎಂದು ಪಕ್ಷದ ಅಮರಾವತಿಯ ಜಿಲ್ಲಾಧ್ಯಕ್ಷ ಸಯ್ಯದ್ ಮುಜೀಬ್ ಟು;ತಿಳಿಸಿದ್ದಾರೆ.

ಎಚ್ಐವಿ ಹರಡುವ ಕಾರ್ಖಾನೆಯಾಯಿತಾ ಪಾಕಿಸ್ತಾನ ಆಸ್ಪತ್ರೆ ? ಸಿರಿಂಜ್ ಮರುಬಳಕೆ, ವೈದ್ಯರ ನಿರ್ಲಕ್ಷ್ಯದಿಂದ ಆತಂಕ

ಅಯಾಜ್ ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದು, ಬಳಿಕ ಆತನನ್ನು ಏಳು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಮೂವರು ಶಂಕಿತರನ್ನು ಬಂಧಿಸಲಾಗಿದೆ. ಅಯಾಜ್ ಮತ್ತು ಉಜರ್ ಎಂಬವರು ತಮ್ಮ ಅಪರಾಧಗಳನ್ನು ಒಪ್ಪಿಕೊಂಡಿದ್ದಾರೆ. ಅಯಾಜ್ ನ ಮೊಬೈಲ್ ಫೋನ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.