ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಉದ್ಯಮಿ ಸಿಜೆ ರಾಯ್ ಅಸಹಜ ಸಾವು; ನ್ಯಾಯಾಂಗ ತನಿಖೆಗೆ ಕೇರಳ ಸಿಎಂ ಪಿಣರಾಯ್ ವಿಜಯನ್ ಆಗ್ರಹ

ಆದಾಯ ತೆರಿಗೆ ಇಲಾಖೆ ದಾಳಿಯ ವೇಳೆ ಉದ್ಯಮಿ ಸಿಜೆ ರಾಯ್ ಅವರ ಆತ್ಮಹತ್ಯೆ ದೇಶದ ತೆರಿಗೆ ಆಡಳಿತಕ್ಕೆ ಒಂದು ಕಪ್ಪು ಚುಕ್ಕೆ. ಈ ಘಟನೆಯ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪತ್ರ ಬರೆದಿದ್ದಾರೆ.

ಉದ್ಯಮಿ ಸಿಜೆ ರಾಯ್ ಸಾವಿನ ತನಿಖೆಗೆ  ಕೇರಳ ಸಿಎಂ ಆಗ್ರಹ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (ಸಂಗ್ರಹ ಚಿತ್ರ) -

ಕೇರಳ: ಖ್ಯಾತ ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ (CJ Roy death case) ಸಂಬಂಧಿಸಿ ನ್ಯಾಯಾಂಗ ತನಿಖೆ (judicial probe) ನಡೆಸುವಂತೆ ಒತ್ತಾಯಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ (Kerala Chief Minister Pinarayi Vijayan) ಅವರು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Finance Minister Nirmala Sitharaman) ಅವರಿಗೆ ಪತ್ರ ಬರೆದಿದ್ದಾರೆ. ಭಾನುವಾರ ಬರೆದಿರುವ ಈ ಪತ್ರದಲ್ಲಿ ಅವರು ತನಿಖೆ ವೇಳೆ ಅಗತ್ಯ ಪ್ರೋಟೋಕಾಲ್ ಗಳನ್ನು ಪಾಲಿಸದಿರುವುದು ಸ್ಪಷ್ಟವಾಗಿದೆ ಎಂದು ತಿಳಿಸಿದ್ದಾರೆ. ತೆರಿಗೆ ಇಲಾಖೆ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾಗಲೇ ವ್ಯಕ್ತಿಯೊಬ್ಬರು ಬಂದೂಕಿನಿಂದ ಸ್ವತಃ ಗುಂಡು ಹಾರಿಸಿಕೊಳ್ಳುವುದೆಂದರೆ ಆತಂಕಕಾರಿ ವಿಚಾರ ಎಂದು ಅವರು ಹೇಳಿದ್ದಾರೆ.

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ಒಂದು ಗಂಭೀರವಾಗಿ ಪರಿಗಣಿಸಬೇಕಾದ ವಿಷಯವಾಗಿದೆ. ಐಟಿ ಅಧಿಕಾರಿಗಳು ಶೋಧ ಕಾರ್ಯಾಚರಣೆ ನಡೆಸುವ ವೇಳೆ ರಾಯ್ ಅವರನ್ನು ಬೇರೆ ಕೋಣೆಗೆ ಸ್ಥಳಾಂತರಿಸಿದ್ದಾರೆ ಎಂದು ವರದಿಗಳು ಹೇಳಿವೆ. ಈ ಸಂದರ್ಭದಲ್ಲಿ ಅವರು ಬಂದೂಕಿನಿಂದ ಸ್ವತಃ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ. ಇದು ಆತಂಕಕಾರಿ. ಇಲ್ಲಿ ಗಂಭೀರ ಲೋಪವಾಗಿದೆ ಮತ್ತು ಅಗತ್ಯ ಪ್ರೋಟೋಕಾಲ್‌ಗಳನ್ನು ಪಾಲಿಸದಿರುವುದು ಸ್ಪಷ್ಟವಾಗಿದೆ ಎಂದು ಅವರು ಹೇಳಿದರು.

ಕೊನೆಗೊಳ್ಳಲಿದೆ ರಾಷ್ಟ್ರಪತಿ ಆಳ್ವಿಕೆ ಅವಧಿ; ಮಣಿಪುರದ ಎನ್‌ಡಿಎ ಶಾಸಕರು ದೆಹಲಿಗೆ ದೌಡು

ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ಶೋಧ ಕಾರ್ಯಾಚರಣೆ ವೇಳೆ ಉದ್ಯಮಿ ಸಿಜೆ ರಾಯ್ ಅವರ ಅಸ್ವಾಭಾವಿಕ ಸಾವು ದೇಶದ ತೆರಿಗೆ ಆಡಳಿತಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ ಎಂದು ಹೇಳಿರುವ ಪಿಣರಾಯಿ ವಿಜಯನ್, ಈ ಬಗ್ಗೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ತೆರಿಗೆ ಇಲಾಖೆ ಅಧಿಕಾರಿಗಳ ದಾಳಿ ವೇಳೆ ಕಾನೂನು ನಿಬಂಧನೆಗಳನ್ನು ಅನುಸರಿಸಿದ್ದಾರೆ ಎನ್ನುವ ಅಧಿಕೃತ ಸ್ಪಷ್ಟೀಕರಣ ಸ್ಪಷ್ಟವಾಗಿಲ್ಲ. ಹೀಗಾಗಿ ಕೇಂದ್ರ ಸರ್ಕಾರವು ವಿಳಂಬವಿಲ್ಲದೆ ಈ ಕುರಿತು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು. ನಿಗದಿತ ಸಮಯದೊಳಗೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಆದೇಶಿಸಬೇಕು. ಭವಿಷ್ಯದಲ್ಲಿ ಇಂತಹ ದುರಂತ ಸಂಭವಿಸದಂತೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಅವರು ಹೇಳಿದರು.

Union Budget 2026: ಅತಿ ಚಿಕ್ಕ ಅವಧಿಯ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ಐಟಿ ಅಧಿಕಾರಿಗಳ ದಾಳಿ ವೇಳೆ ಸಿಜೆ ರಾಯ್ ಅವರು ಶೋಧ ಕಾರ್ಯಕ್ಕೆ ಸಂಪೂರ್ಣವಾಗಿ ಸಹಕರಿಸಿದ್ದಾರೆ. ಆದರೆ ಐಟಿ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಕುಟುಂಬದವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಹೀಗಾಗಿ ನಿಷ್ಪಕ್ಷಪಾತ ತನಿಖೆ ನಡೆಯಲಿ. ಈ ಕುರಿತು ಎಲ್ಲಾ ಸಂಗತಿಗಳನ್ನು ತಿಳಿದುಕೊಳ್ಳುವ ಹಕ್ಕು ಕುಟುಂಬಕ್ಕೆ ಇದೆ ಎಂದು ಅವರು ಹೇಳಿದ್ದಾರೆ.