Actress Ramya: ನಟಿ ರಮ್ಯಾಗೆ ಅಶ್ಲೀಲ ಮೆಸೇಜ್; ಮತ್ತೋರ್ವನನ್ನು ಬಂಧಿಸಿದ ಸಿಸಿಬಿ
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದವರನ್ನು ಸಿಸಿಬಿ ಪೊಲೀಸರು ಹುಡುಕಿ ಬಂಧಿಸುತ್ತಿದ್ದಾರೆ. ಈವರೆಗೆ ಐವರನ್ನು ಬಂಧಿಸಿದ್ದು, ಇದೀಗ ಕೊಪ್ಪಳ ಮೂಲದ ಯುವಕನನ್ನು ಅರೆಸ್ಟ್ ಮಾಡಲಾಗಿದೆ. ಮೆಸೇಜ್ ಮಾಡಿದ್ದ ಒಟ್ಟು 48 ಜನರ ಐಪಿ ಅಡ್ರೆಸ್ ಗಳನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ ಇದುವರೆಗೂ ಒಟ್ಟು 15 ಜನರನ್ನು ಗುರುತಿಸಲಾಗಿದೆ.


ಬೆಂಗಳೂರು: ನಟಿ ರಮ್ಯಾಗೆ (Actress Ramya) ಅಶ್ಲೀಲ ಮೆಸೇಜ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಮಂಜುನಾಥ ಎಂದು ಗುರುತಿಸಲಾಗಿದ್ದು, ಈತ ಕೊಪ್ಪಳ ಮೂಲದವನು ಎಂದು ತಿಳಿದು ಬಂದಿದೆ. ಇದುವರೆಗೆ ಅಶ್ಲೀಲ ಕಮೆಂಟ್ ಮಾಡಿದ ಐದು ಆರೋಪಿಗಳನ್ನು ಈವರೆಗೆ ಬಂಧಿಸಲಾಗಿದೆ. ಬಂಧಿತರನ್ನ ರಾಜೇಶ್, ಓಬಣ್ಣ, ಗಂಗಾಧರ್, ಭುವನ್ ಎಂದು ಗುರುತಿಸಲಾಗಿದೆ. ಸಿಸಿಬಿ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ಕಮೆಂಟ್ ಮಾಡಿದ ಪ್ರತಿಯೊಬ್ಬರ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ.
ಮೆಸೇಜ್ ಮಾಡಿದ್ದ ಒಟ್ಟು 48 ಜನರ ಐಪಿ ಅಡ್ರೆಸ್ ಗಳನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದಾರೆ ಇದುವರೆಗೂ ಒಟ್ಟು 15 ಜನರನ್ನು ಗುರುತಿಸಿದ್ದು, ಐವರನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಚಿಕ್ಕಮಗಳೂರು, ಕೋಲಾರ, ಭಾಗದವರೇ ಹೆಚ್ಚು ಅಶ್ಲೀಲವಾಗಿ ಮೆಸೇಜ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಸಾಮಾನ್ಯವಾಗಿ ಕಮೆಂಟ್ ಮಾಡಿದವರಿಗೆ ಕರೆಸಿ ವಾರ್ನಿಂಗ್ ಕೊಡಲಾಗುತ್ತಿದೆ. ಉಳಿದ ಕೆಲವರು ಐಪಿ ಅಡ್ರೆಸ್ ಬ್ಲಾಕ್ ಮಾಡಿಕೊಂಡು ಮನೆ ಬಿಟ್ಟು ಪರಾರಿಯಾಗಿದ್ದಾರೆ. ನಾರ್ಮಲ್ ಆಗಿ ಕಮೆಂಟ್ ಮಾಡಿದವರು ಈ ಬಗ್ಗೆ ಕ್ಷಮೆ ಕೇಳಿದ್ದಾರೆ. ಅರಿವಿಲ್ಲದೆ ಮೆಸೇಜ್ ಮಾಡಿದರೆ ಬಗ್ಗೆ ಕೆಲವರು ಕ್ಷಮೆ ಕೇಳಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ರೇಣುಕಾಸ್ವಾಮಿ ಕುಟುಂಬದ ಪರವಾಗಿ ನಿಂತ ಕಾರಣಕ್ಕೆ ನಟಿ ರಮ್ಯಾಗೆ ದರ್ಶನ್ ಅಭಿಮಾನಿಗಳು ಅಶ್ಲೀಲ ಮೆಸೇಜ್ ಕಳುಹಿಸಿದ್ದರು. ಇದರ ಬೆನ್ನಲ್ಲೇ ದರ್ಶನ್ ಫ್ಯಾನ್ಸ್ ವಿರುದ್ಧ ಗರಂ ಆದ ನಟಿ ಅಶ್ಲೀಲ ಮೆಸೇಜ್ ಕಳುಹಿಸಿದ್ದವರ ಖಾತೆಗಳನ್ನು ಬಹಿರಂಗಗೊಳಿಸಿದ್ದರು. ಜೊತೆಗೆ 43 ಅಕೌಂಟ್‌ಗಳ ವಿರುದ್ಧ ದೂರು ದಾಖಲಿಸಿದ್ದರು.
ಇದರ ಬೆನ್ನಲ್ಲೇ ಕಿಡಿಗೇಡಿಗಳ ಪತ್ತೆಗಾಗಿ 6 ತಂಡವನ್ನ ರಚನೆ ಮಾಡಲಾಗಿತ್ತು. ಇದೀಗ ಪೊಲೀಸರು ಕೆಲವರನ್ನು ಬಂಧಿಸಿದ್ದು, ಇನ್ನೂ ಹಲವರಿಗಾಗಿ ಬಲೆ ಬೀಸಿದ್ದಾರೆ. ರಮ್ಯಾ ದೂರಿನನ್ವಯ ಸಿಸಿಬಿಯವರು ಹಲವರನ್ನ ಗುರುತಿಸಿದ್ದಾರೆ. ಕೆಲವರ ಸ್ಪಷ್ಟ ಮಾಹಿತಿ ಸಿಕ್ಕಿದೆ, ಇಬ್ಬರನ್ನ ಅರೆಸ್ಟ್ ಮಾಡಿದ್ದೇವೆ. ಇನ್ನೂ ಹನ್ನೊಂದು ಜನರ ಮಾಹಿತಿ ಸಿಕ್ಕಿದ್ದು ತನಿಖೆ ನಡೆಯುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದ್ದ ಕಾಮೆಂಟ್‌ಗಳನ್ನೂ ವೆರಿಫೈ ಮಾಡಿದ್ದೇವೆ ಎಂದು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ತಿಳಿಸಿದ್ದಾರೆ.