ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮರಳು ಗಣಿಗಾರಿಕೆ ವಿವಾದ; ಬಿಜೆಪಿ ನಾಯಕ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟು ಹತ್ಯೆ ಮಾಡಿದ ಪಾಪಿಗಳು!

ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ವಿವಾದದ ಹಿನ್ನೆಲೆ ಬಿಜೆಪಿ ನಾಯಕ ಭರತ್ ಸಿಂಗ್ ಅಲಿಯಾಸ್ ಲಲ್ಲಾ ಸಿಂಗ್ ಸೇರಿದಂತೆ ಮೂವರನ್ನು ಫಾರ್ಚುನರ್ ಕಾರಿನಲ್ಲೇ ಜೀವಂತವಾಗಿ ಸುಟ್ಟು ಹತ್ಯೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಬಿಜೆಪಿ ನಾಯಕ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟು ಹತ್ಯೆ ಮಾಡಿದ ಪಾಪಿಗಳು!

ಘಟನೆಯ ದೃಶ್ಯ -

Profile
Sushmitha Jain Jun 18, 2026 4:37 PM

ರಾಯ್ಪುರ ಜೂನ್ 18, 2026: ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ ಮರಳು ಗಣಿಗಾರಿಕೆ ಸಂಬಂಧಿತ ವಿವಾದ ಭೀಕರ ಹತ್ಯಾಕಾಂಡ (Triple Murder)ಕ್ಕೆ ತಿರುಗಿದ್ದು, ಬಿಜೆಪಿ (BJP) ನಾಯಕ ಹಾಗೂ ಮಾಜಿ ಜನಪದ ಪಂಚಾಯತ್ ಅಧ್ಯಕ್ಷ ಭರತ್ ಸಿಂಗ್ ಅಲಿಯಾಸ್ ಲಲ್ಲಾ ಸಿಂಗ್ ಸೇರಿದಂತೆ ಮೂವರು ಜೀವಂತ ದಹನ ಗೊಂಡು ಮೃತಪಟ್ಟಿರುವ ಘಟನೆ ನಡೆದಿದೆ.

ಸೋನ್ಹಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ನೌಗೈನ್ ಗ್ರಾಮದಲ್ಲಿ ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ. ಮರಳು ಗಣಿ ಸಂಬಂಧಿತ ವಿವಾದ ಬಗೆಹರಿಸಲು ತೆರಳಿದ್ದ ಭರತ್ ಸಿಂಗ್ ಅವರನ್ನು ಪೂರ್ವಯೋಜಿತವಾಗಿ ಬಲೆಗೆ ಬೀಳಿಸಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಪ್ರಾಥಮಿಕ ಮಾಹಿತಿ ಪ್ರಕಾರ, ಭರತ್ ಸಿಂಗ್ ಪ್ರಯಾಣಿಸುತ್ತಿದ್ದ ಫಾರ್ಚುನರ್ ಎಸ್‌ಯುವಿಯನ್ನು ಟ್ರಕ್‌ಗಳ ಮೂಲಕ ಮುಂಭಾಗ ಹಾಗೂ ಹಿಂಭಾಗದಿಂದ ಸುತ್ತುವರಿದು ತಪ್ಪಿಸಿಕೊಳ್ಳಲು ಅವಕಾಶ ನೀಡದೆ ತಡೆಹಿಡಿಯಲಾಗಿದೆ. ಬಳಿಕ ವಾಹನದ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲಾಗಿದೆ ಎನ್ನಲಾಗಿದೆ.

ಘಟನೆಯಲ್ಲಿ ಭರತ್ ಸಿಂಗ್ ಸ್ಥಳದಲ್ಲೇ ಸುಟ್ಟು ಕರಕಲಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ವೀರೇಂದ್ರ ಸಿಂಗ್ ಚಿಕಿತ್ಸೆ ವೇಳೆ ಮೃತಪಟ್ಟಿದ್ದಾರೆ. ನಾಗೇಂದ್ರ ಸಿಂಗ್ ಎಂಬ ಶಿಕ್ಷಕ ಹಾಗೂ ಭರತ್ ಸಿಂಗ್ ಅವರ ಸಂಬಂಧಿಯೂ ಘಟನೆಯಲ್ಲಿ ಸಾವನ್ನಪ್ಪಿದ್ದಾರೆ. ಇನ್ನೋರ್ವ ಗಾಯಾಳು ಮಯಾಂಕ್ ಸಿಂಗ್ ಬಿಲಾಸ್ಪುರದ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ. ತಲೆ ಹಾಗೂ ಮುಖಕ್ಕೆ ಗಂಭೀರ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ಷತ್ ತ್ರಿಪಾಠಿ, ವಿಶಾಲ್ ತ್ರಿಪಾಠಿ, ಸತ್ಯಪ್ರಕಾಶ್ ತ್ರಿಪಾಠಿ ಮತ್ತು ಮನ್ನು ತ್ರಿಪಾಠಿ ಸೇರಿದಂತೆ ನಾಲ್ವರನ್ನು ಪೊಲೀಸರು ಬಂಧಿಸಿದ್ದು, ಇತರ ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.

Chinthamani Crime: ಮರೀನಾಯಕನಹಳ್ಳಿ ಗೇಟ್ ಬಳಿ ಅಕ್ರಮ ದಂಧೆಗೆ ಬ್ರೇಕ್: ಮೂವರ ವಿರುದ್ಧ ಪ್ರಕರಣ ದಾಖಲು!

ಒಟ್ಟು ಒಂಬತ್ತು ಮಂದಿಯ ವಿರುದ್ಧ ಕೊಲೆ ಹಾಗೂ ಕೊಲೆ ಯತ್ನ ಸೇರಿದಂತೆ ಗಂಭೀರ ಪ್ರಕರಣಗಳನ್ನು ದಾಖಲಿಸಲಾಗಿದೆ. ಸ್ಥಳೀಯರ ಪ್ರಕಾರ, ಮರಳು ಗಣಿ ಗುತ್ತಿಗೆ ಭರತ್ ಸಿಂಗ್ ಕುಟುಂಬದವರಿಗೆ ನೀಡಲಾಗಿತ್ತು. ಬಳಿಕ ಮರಳು ಸಾಗಾಟ ಹಾಗೂ ಅಕ್ರಮ ವಸೂಲಾತಿ ವಿಚಾರದಲ್ಲಿ ಭರತ್ ಸಿಂಗ್ ಮತ್ತು ಬಿಜೆಪಿ ಮುಖಂಡ ಮನೋಜ್ ತ್ರಿಪಾಠಿ ಕುಟುಂಬಗಳ ನಡುವೆ ದೀರ್ಘಕಾಲದ ವೈಮನಸ್ಸು ಉಂಟಾಗಿತ್ತು.

ಇದೇ ವೈಷಮ್ಯ ಹತ್ಯಾಕಾಂಡಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಸುರೇಶಾ ಚೌಬೆ, ಮರಳು ಗಣಿಗಾರಿಕೆ ಸಂಬಂಧಿತ ಹಳೆಯ ವೈಷಮ್ಯವೇ ಘಟನೆಯ ಮೂಲ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಪ್ರಕರಣದ ಬಗ್ಗೆ ಮಾಹಿತಿ ಪಡೆದಿದ್ದು, ಈಗಾಗಲೇ ಆರೋಪಿಗಳ ಬಂಧನವಾಗಿದೆ. ತಪ್ಪಿತಸ್ಥರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಭರವಸೆ ನೀಡಿದ್ದಾರೆ.