ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮೂತ್ರ ಕುಡಿಸಿದ ಸಹಪಾಠಿ: ದೂರು ನೀಡಿದ ವಿದ್ಯಾರ್ಥಿನಿಯರಿಗೆ ಚಾಕ್ಲೆಟ್ ತಿನ್ನಿ ಎಂದ ಪ್ರಾಂಶುಪಾಲ

ಮಧ್ಯಪ್ರದೇಶದ ಶಾಲೆಯೊಂದರಲ್ಲಿ ಸಹಪಾಠಿಯೊಬ್ಬ ಇಬ್ಬರು ಬಾಲಕಿಯರಿಗೆ ತನ್ನ ಮೂತ್ರ ಕುಡಿಸಿದ್ದು, ಈ ಬಗ್ಗೆ ಪ್ರಾಂಶುಪಾಲರಿಗೆ ದೂರು ನೀಡಿದಾಗ ಅವರು ಅವರಿಗೆ ಚಾಕ್ಲೆಟ್ ತಿನ್ನಲು ಸಲಹೆ ನೀಡಿದ್ದಾರೆ. ಈ ಬಗ್ಗೆ ಬಾಲಕಿಯರು ಮನೆಯವರಿಗೆ ತಿಳಿಸಿದ್ದು, ಇದರಿಂದ ಗ್ರಾಮದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಘಟನೆಯ ತನಿಖೆಗೆ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.

ಮೂತ್ರ ಕುಡಿಸಿ ಚಾಕ್ಲೆಟ್ ತಿನ್ನಿ ಎಂದ ಪ್ರಾಂಶುಪಾಲರ ವಿರುದ್ಧ ಆಕ್ರೋಶ

ಸಂಗ್ರಹ ಚಿತ್ರ -

ಮಧ್ಯಪ್ರದೇಶ: ವಿದ್ಯಾರ್ಥಿನಿಯರಿಬ್ಬರಿಗೆ ಸಹಪಾಠಿ ಬಾಲಕನೊಬ್ಬ ಬಾಟಲಿಯಲ್ಲಿ ಮೂತ್ರ ಬೆರೆಸಿ ಕುದಿಸಿದ ಘಟನೆ ಮಧ್ಯಪ್ರದೇಶದಲ್ಲಿ (Madhyapradesh) ನಡೆದಿದೆ. ಗುನಾ ಜಿಲ್ಲೆಯ (Guna district) ಆರೋನ್ ಡೆವಲಪ್‌ಮೆಂಟ್ ಬ್ಲಾಕ್‌ನಲ್ಲಿರುವ ಪ್ರಾಥಮಿಕ ಶಾಲೆಯಲ್ಲಿ (primary school) ಸೋಮವಾರ ಈ ಘಟನೆ ನಡೆದಿದ್ದು, ಈ ಕುರಿತು ತನಿಖೆಗೆ ಆದೇಶಿಸಿ ಪ್ರಾಂಶುಪಾಲರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಬಿಇಒ (BEO) ಅವರಿಗೆ ನಿರ್ದೇಶನ ನೀಡಲಾಗಿದೆ. ವರದಿ ಆಧಾರದ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಮ್ಯಾಜಿಸ್ಟ್ರೇಟ್ ಕಿಶೋರ್ ಕುಮಾರ್ ಕನ್ಯಾಲ್ (Guna District Magistrate Kishore Kumar Kanyal ) ತಿಳಿಸಿದ್ದಾರೆ.

ಗುನಾದ ಸರ್ಕಾರಿ ಶಾಲೆಯ 5ನೇ ತರಗತಿಯ ವಿದ್ಯಾರ್ಥಿಯೊಬ್ಬ ನೀರಿನ ಬಾಟಲಿಯಲ್ಲಿ ಮೂತ್ರ ಬೆರೆಸಿ ತನ್ನ ಇಬ್ಬರು ಸಹಪಾಠಿ ಬಾಲಕಿಯರಿಗೆ ಕುಡಿಯುವಂತೆ ಮಾಡಿದ್ದಾನೆ. ಈ ಕುರಿತು ವಿದ್ಯಾರ್ಥಿನಿಯರು ಪ್ರಾಂಶುಪಾಲರಿಗೆ ದೂರು ನೀಡಿದ್ದು, ಅದಕ್ಕೆ ಅವರು 10 ರೂ. ಚಾಕ್ಲೆಟ್ ತಿನ್ನಿ ಎಂದು ಹೇಳಿದ್ದಾರೆ.

NTAಗೆ ಮೇಜರ್‌ ಸರ್ಜರಿ; 600 ಅಧಿಕಾರಿಗಳಿಗೆ ಗೇಟ್‌ಪಾಸ್‌: ಕೇಂದ್ರ ಶಿಕ್ಷಣ ಸಚಿವ ಪ್ರಲ್ಹಾದ್‌ ಜೋಶಿ ಖಡಕ್‌ ಆದೇಶ

ಇದರಿಂದ ಬೇಸರಗೊಂಡ ವಿದ್ಯಾರ್ಥಿನಿಯರು ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು, ಈ ವಿಷಯ ಗ್ರಾಮದಾದ್ಯಂತ ಹರಡಿದೆ. ಇದರಿಂದ ಕೋಪಗೊಂಡ ಸ್ಥಳೀಯರೆಲ್ಲ ಸೇರಿ ಮಂಗಳವಾರ ಶಾಲೆಗೆ ಬಂದು ಗಲಾಟೆ ಮಾಡಿದ್ದಾರೆ. ವಿದ್ಯಾರ್ಥಿ ಮತ್ತು ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿದರು.

ಈ ಕುರಿತು ಮಾಹಿತಿ ತಿಳಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ಕಿಶೋರ್ ಕುಮಾರ್ ಕನ್ಯಾಲ್ ಅವರು ತನಿಖೆ ನಡೆಸುವಂತೆ ತಹಶೀಲ್ದಾರ್ ಮತ್ತು ಬ್ಲಾಕ್ ಶಿಕ್ಷಣ ಅಧಿಕಾರಿ ಅವರಿಗೆ ಸೂಚನೆ ನೀಡಿದ್ದು, ಪ್ರಾಂಶುಪಾಲರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಘಟನೆ ಕುರಿತು ಮಾಹಿತಿ ನೀಡಿದ ಕಿಶೋರ್ ಕುಮಾರ್ ಕನ್ಯಾಲ್, ವಿದ್ಯಾರ್ಥಿಗಳಿಗೆ ನೀರಿನ ಬಾಟಲಿಗಳಿಂದ ಮೂತ್ರ ಕುಡಿಸಲಾಗಿದೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ. ಈ ಕುರಿತು ಪ್ರಾಂಶುಪಾಲರಿಗೆ ದೂರು ನೀಡಿದಾಗ ಅವರು ಅಮಾನವೀಯವಾಗಿ ವರ್ತಿಸಿದರು. ನಿಮ್ಮ ಬಾಯಿಯಲ್ಲಿ ಕೆಟ್ಟ ರುಚಿ ಇದ್ದರೆ 10 ರೂ. ಚಾಕ್ಲೆಟ್ ತಿನ್ನಿ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಘಟನೆಯ ಬಗ್ಗ ತನಿಖೆ ನಡೆಸಲು ತಹಶೀಲ್ದಾರ್ ಮತ್ತು ಬ್ಲಾಕ್ ಶಿಕ್ಷಣ ಅಧಿಕಾರಿ ಅವರನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಪ್ರಾಂಶುಪಾಲರಿಗೆ ನೋಟಿಸ್ ಜಾರಿ ಮಾಡಲಾಗಿದೆ. ಎರಡು ದಿನಗಳಲ್ಲಿ ತನಿಖೆ ನಡೆಸಿ ವರದಿ ಸಲ್ಲಿಸಲು ಬಿಇಒ ಅವರಿಗೆ ಸೂಚಿಸಲಾಗಿದೆ. ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅಪರಾಧಿ ವಿದ್ಯಾರ್ಥಿಯ ಪೋಷಕರು ಮತ್ತು ಮಗುವನ್ನು ಕರೆಸಿ ವಿಚಾರಣೆ ನಡೆಸಲಾಗಿದೆ. ಈ ಘಟನೆಯಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಭಾಗಿಯಾಗಿರಬಹುದು ಎಂದರು.

ಕೋಲ್ಕತ್ತಾ ಹೋಟೆಲ್‌ನಲ್ಲಿ ಭೀಕರ ಅಗ್ನಿ ಅವಘಡ; 9 ಮಂದಿ ಬಾಂಗ್ಲಾ ಪ್ರಜೆಗಳು ದುರ್ಮರಣ

ಆರೋನ್‌ನ ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಮಂಜುಷಾ ಖತ್ರಿ ಮಾಹಿತಿ ನೀಡಿ, ವಿದ್ಯಾರ್ಥಿನಿಯ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಶಾಲೆಗೆ ಬಂದು ತಪ್ಪು ಮಾಡಿದ ವಿದ್ಯಾರ್ಥಿಗಳು ಮತ್ತು ಪ್ರಾಂಶುಪಾಲರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಶಾಲೆಗೆ ಬೀಗ ಹಾಕಿದ್ದಾರೆ. ಗಲಾಟೆ ಹೆಚ್ಚಾಗದಂತೆ ತಡೆಯಲು ಆಡಳಿತ ಅಧಿಕಾರಿಗಳು ಭಾರೀ ಪೊಲೀಸ್ ಪಡೆಯೊಂದಿಗೆ ಗ್ರಾಮಕ್ಕೆ ಆಗಮಿಸಿ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ ಎಂದರು.