ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Ramanagara News: ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮನ ವಿರುದ್ಧ ದೂರು ದಾಖಲು

ಒಂದು ದಿನ ಬೆತ್ತಲಾಗಿ ಪೂಜೆ ಕುಳಿತುಕೋ ಎಂದು ಒತ್ತಾಯಿಸಿ ಆರೋಪಿ ಕಿರುಕುಳ ನೀಡುತ್ತಿದ್ದಾನೆ ಎಂದು ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ಸಂತ್ರಸ್ತ ಯುವತಿ ದೂರು ನೀಡಿದ್ದಾಳೆ. ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂಬಾತನ ವಿರುದ್ಧ ಯುವತಿ ದೂರು ನೀಡಿದ್ದಾಳೆ.

ಬೆತ್ತಲೆ ಪೂಜೆ ಮಾಡಿದ್ರೆ 30 ಲಕ್ಷ ಹಣ; ಯುವತಿಗೆ ಟಾರ್ಚರ್ ನೀಡಿದ ಖದೀಮ!

ಸಂತ್ರಸ್ತ ಯುವತಿ ಮತ್ತು ಆರೋಪಿ ಕಿರಣ್‌ -

Prabhakara R
Prabhakara R May 3, 2026 9:10 PM

ರಾಮನಗರ: ಮಾಟ ಮಂತ್ರದ ಹೆಸರಲ್ಲಿ ಯುವತಿಯರು, ಮಹಿಳೆಯರನ್ನು ನಂಬಿಸಿ ಮೋಸ ಮಾಡುತ್ತಿರುವ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚುತ್ತಿದೆ. ಇಂತಹುದೇ ಘಟನೆಯೊಂದು ರಾಮನಗರದಲ್ಲಿ (Ramanagara News) ಬೆಳಕಿಗೆ ಬಂದಿದೆ. ಮಾಟ-ಮಂತ್ರದ ಹೆಸರಿನಲ್ಲಿ ಯುವತಿಗೆ ಬರೋಬ್ಬರಿ 30 ಲಕ್ಷ ರೂಪಾಯಿ ಆಮಿಷವೊಡ್ಡಿ, ಟಾರ್ಚರ್ ಕೊಟ್ಟಿರುವ ಘಟನೆ ರಾಮನಗರದ ದೊಡ್ಡಮಣ್ಣಗುಡ್ಡೆದೊಡ್ಡಿಯಲ್ಲಿ ನಡೆದಿದೆ.

ಬೆತ್ತಲೆ ಫೋಟೋ ಕಳುಹಿಸು, ಒಂದು ದಿನ ಬೆತ್ತಲಾಗಿ ಪೂಜೆ ಕುಳಿತುಕೋ ಎಂದು ಒತ್ತಾಯಿಸಿ ಆರೋಪಿ ಕಿರುಕುಳ ನೀಡುತ್ತಿದ್ದಾನೆ. ಆರೋಪಿಯು ಯುವತಿಯ ಪಕ್ಕದ ಮನೆಯ ಹುಡುಗನೇ ಆಗಿದ್ದು, ಈ ಸಂಬಂಧ ಕಿರಣ್ ಎಂಬಾತನ ವಿರುದ್ಧ ರಾಮನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ದೇಹದಲ್ಲಿ ಒಂದೇ ಒಂದು ಮಚ್ಚೆ ಇರಬಾರದು, ಮಚ್ಚೆ ಇದ್ದರೆ ಪೂಜೆಗೆ ಕುಳಿತುಕೊಳ್ಳಲು ಆಗುವುದಿಲ್ಲ ಎಂದು ಹೇಳಿ ಯುವತಿಗೆ ಫೋಟೋ ಕಳುಹಿಸುವಂತೆ ಪೀಡಿಸಿದ್ದಾನೆ. ಅಷ್ಟೇ ಅಲ್ಲದೆ, ಇತರ ಕೆಲವು ಯುವತಿಯರ ಫೋಟೋಗಳನ್ನು ವಾಟ್ಸಾಪ್ ಮೂಲಕ ಕಳುಹಿಸಿ ನಂಬಿಸಲು ಯತ್ನಿಸಿದ್ದಾನೆ.

ಏಪ್ರಿಲ್ 12ರಂದು ಈ ಕರೆ ಬಂದಿದ್ದು, ಇದರಿಂದ ರೋಸಿಹೋದ ಯುವತಿ ಮತ್ತು ಅವರ ಕುಟುಂಬಸ್ಥರು ರಾಮನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಕಿರಣ್ ಎಂಬಾತ ಪರಾರಿಯಾಗಿದ್ದಾನೆ. ಸದ್ಯ ನಾಪತ್ತೆಯಾಗಿರುವ ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಮಾಟ-ಮಂತ್ರದ ಹೆಸರಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿ ಅತ್ಯಾಚಾರ

_Bengaluru News (1)

ಬೆಂಗಳೂರು: ಪೂಜೆ ಮತ್ತು ದೀಕ್ಷೆಯ ನೆಪದಲ್ಲಿ ಬ್ಯೂಟಿಷಿಯನ್ ಮೇಲೆ ಜ್ಯೋತಿಷಿಯೊಬ್ಬ ನಿರಂತರ ಅತ್ಯಾಚಾರ ಎಸಗಿರುವ ಘಟನೆ ನಗರದ ಸಿ.ಕೆ. ಅಚ್ಚುಕಟ್ಟು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗಂಡ ಮತ್ತು ಮಗನ ಮೇಲೆ ವಾಮಾಚಾರ ಮಾಡಿಸಿ ಅವರು ರಕ್ತ ಕಾರಿ ಸಾಯುವಂತೆ ಮಾಡುವುದಾಗಿ ಬೆದರಿಸಿ ಆರೋಪಿ ದೌರ್ಜನ್ಯ ಎಸಗಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಹಿಳೆ ದೂರು ನೀಡಿದ್ದಾರೆ.

ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿದ್ದ ಮಹಿಳೆಗೆ, ತನ್ನ ಸಹೋದರಿಯ ಅಡ್ಮಿಷನ್ ನೆಪದಲ್ಲಿ ಆರೋಪಿ ಮೋಹನ್ ಕುಮಾರ್ ಎಂಬಾತ ಪರಿಚಯವಾಗಿದ್ದ. ಮಹಿಳೆಯ ಆರ್ಥಿಕ ಅಭಿವೃದ್ಧಿಗೆ ಪೂಜೆ ಮಾಡಿಸಬೇಕು ಎಂದು ನಂಬಿಸಿದ್ದ ಆರೋಪಿ, 2025ರ ಜನವರಿ 30ರಂದು ರಾಮನಗರದ ಪಿರಮಿಡ್ ವ್ಯಾಲಿಗೆ ಕರೆದೊಯ್ದು ನಿರ್ಜನ ಪ್ರದೇಶದಲ್ಲಿ ಅತ್ಯಾಚಾರಕ್ಕೆ ಯತ್ನಿಸಿದ್ದ. ನಂತರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪೂಜೆಗೆಂದು ಕರೆದೊಯ್ದು ವಾಪಸ್ಸಾಗುವಾಗ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈ ವಿಚಾರವನ್ನು ಯಾರಿಗಾದರೂ ಹೇಳಿದರೆ ಕುಟುಂಬದ ಮೇಲೆ ಮಾಟ-ಮಂತ್ರ ಮಾಡಿಸುವುದಾಗಿ ಹೆದರಿಸಿದ್ದ.

Bengaluru News: ಕೌಟುಂಬಿಕ ಕಲಹ; ಇಬ್ಬರು ಪುಟ್ಟ ಮಕ್ಕಳಿಗೆ ವಿಷವಿಕ್ಕಿ ಕೊಂದು, ಆತ್ಮಹತ್ಯೆಗೆ ಯತ್ನಿಸಿದ ತಾಯಿ!

ಫೆಬ್ರವರಿ 10ರಂದು ದೀಕ್ಷೆ ನೀಡುವ ನೆಪದಲ್ಲಿ ಮಹಿಳೆಯ ಮನೆಗೆ ಬಂದಿದ್ದ ಜ್ಯೋತಿಷಿ, ಗಂಡ ಮತ್ತು ಮಗನನ್ನು ಮನೆಯಿಂದ ಹೊರಗೆ ಕಳುಹಿಸಿ ಮಹಿಳೆಯ ಮೇಲೆ ದೌರ್ಜನ್ಯ ಎಸಗಿದ್ದಾನೆ. ತಾನು ಹೇಳಿದಂತೆ ಕೇಳದಿದ್ದರೆ ಕುಟುಂಬವನ್ನೇ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ. ಆರೋಪಿ ಮೋಹನ್ ಕುಮಾರ್ ಕಾಟ ತಾಳಲಾರದೆ ಮಹಿಳೆ ಈಗ ಪೊಲೀಸರ ಮೊರೆ ಹೋಗಿದ್ದಾರೆ. ಸಿ.ಕೆ. ಅಚ್ಚುಕಟ್ಟು ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದಾನೆ.