ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಮುಸ್ಲಿಂ ನಾಯಕ, ಪುತ್ರನ ಗುಂಡಿಟ್ಟು ಹತ್ಯೆ; ಉದ್ವಿಗ್ನ ಸ್ಥಿತಿ

Crime News: ಕಾಂಗ್ರೆಸ್ ನಾಯಕ ಮತ್ತು ಅವರ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಯಿತು. ದಾಳಿಕೋರರು ಮೊದಲು ಗುಂಡು ಹಾರಿಸಿ ನಂತರ ಹರಿತವಾದ ಆಯುಧಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟರು.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ನಾಯಕ, ಪುತ್ರನ ಗುಂಡಿಕ್ಕಿ ಹತ್ಯೆ

ಮೃತ ಕಾಂಗ್ರೆಸ್ ನಾಯಕ, ಪುತ್ರ (ಸಂಗ್ರಹ ಚಿತ್ರ) -

Priyanka P
Priyanka P Aug 16, 2026 7:24 PM

ಕೋಲ್ಕತಾ, ಆ. 16: ಕಾಂಗ್ರೆಸ್ ನಾಯಕ ಮತ್ತು ಅವರ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಶ್ಚಿಮ ಬಂಗಾಳದ (West Bengal) ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಯಿತು (Crime News). ಬಂಗಾಳ ಕಾಂಗ್ರೆಸ್ ಸಮಿತಿಯ ಸದಸ್ಯ ಮತ್ತು ನಾಡಿಯಾ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಅನಿಸುರ್ ರೆಹಮಾನ್, ಶನಿವಾರ (ಆ. 15) ನಾಗಡಿ ರೈಲ್ವೆ ಗೇಟ್ ಬಳಿ ತಮ್ಮ 24 ವರ್ಷದ ಪುತ್ರ ಅಬು ಸುಫಿಯಾನ್ ಜತೆ ಬೆಥುವದಹರಿಯಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಪರಿಚಿತ ದುಷ್ಕರ್ಮಿಗಳು ಅವರ ಕಾರಿನ ಮೇಲೆ ಗುಂಡು ಹಾರಿಸಿದ್ದಾರೆ.

ದಾಳಿಕೋರರು ಮೊದಲು ಗುಂಡು ಹಾರಿಸಿ ನಂತರ ಹರಿತವಾದ ಆಯುಧಗಳಿಂದ ಇಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ. ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಘಟನೆ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದು, ಅಪರಾಧಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. 50 ವರ್ಷದ ರೆಹಮಾನ್, ನಕಾಶಿಪರಾ ಪ್ರದೇಶದ ಹಿರಿಯ ಕಾಂಗ್ರೆಸ್ ನಾಯಕರಲ್ಲಿ ಒಬ್ಬರಾಗಿದ್ದರು. ಅವರು ದೀರ್ಘಕಾಲದವರೆಗೆ ಪಕ್ಷದ ವಿವಿಧ ಸಂಘಟನಾ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದರು.

ಕಾಂಗ್ರೆಸ್ ನಾಯಕ ಮತ್ತು ಅವರ ಮಗನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ:



ಈ ದಾಳಿಯನ್ನು ಖಂಡಿಸಿದ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಬಂಗಾಳದ ಕಾನೂನು ಸುವ್ಯವಸ್ಥೆಯನ್ನು ಪ್ರಶ್ನಿಸಿದ್ದಾರೆ. ʼʼನಾಡಿಯಾ ಜಿಲ್ಲೆಯ ಕಾಂಗ್ರೆಸ್ ನಾಯಕ ಅನಿಸುರ್ ರೆಹಮಾನ್ ಮತ್ತು ಅವರ ಮಗನ ಕೊಲೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ. ಈ ಸರ್ಕಾರವು ಭಯ ಮುಕ್ತ, ವಿಶ್ವಾಸ ಯುಕ್ತ ಎಂಬ ಘೋಷಣೆಗಳೊಂದಿಗೆ ಅಧಿಕಾರಕ್ಕೆ ಬಂದಿದೆ. ಆದರೆ ಸ್ವಾತಂತ್ರ್ಯ ದಿನಾಚರಣೆಯಂದೇ ನಡೆದಿರುವ ಇಂತಹ ಘಟನೆಯು ಜನರ ಸುರಕ್ಷತೆ ಮತ್ತು ರಾಜಕೀಯದಲ್ಲಿ ಮುಕ್ತವಾಗಿ ತೊಡಗಿಸಿಕೊಳ್ಳುವ ಹಕ್ಕಿನ ಬಗ್ಗೆ ಹಲವು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆʼʼ ಎಂದು ಬರೆದುಕೊಂಡಿದ್ದಾರೆ. ಘಟನೆಯ ಬಗ್ಗೆ ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಯಬೇಕೆಂದು ಅವರು ಆಗ್ರಹಿಸಿದ್ದಾರೆ.

ರಾಜಸ್ಥಾನದಲ್ಲಿ ಹೈಟೆಕ್ ಇಂಧನ ದರೋಡೆ: 20 ಟನ್ ಕಚ್ಚಾ ತೈಲಕ್ಕೆ ಕನ್ನ ಹಾಕಿದ ಖದೀಮರು

ಟಿಎಂಸಿ ನಾಯಕ ಆಶಿಶ್ ಬ್ಯಾನರ್ಜಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ಮಾಜಿ ಉಪಸಭಾಪತಿ ಆಶಿಶ್ ಬ್ಯಾನರ್ಜಿ ಅವರ ಮೃತದೇಹ ರಾಜ್ಯದ ಬಿರ್ಭುಮ್ ಜಿಲ್ಲೆಯ ಪಕ್ಷದ ಕಚೇರಿಯೊಳಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾಜಿ ಸಚಿವರಾಗಿದ್ದ ಅವರು, ರಾಂಪುರ್ಹತ್‌ನಿಂದ ಐದು ಬಾರಿ ಶಾಸಕರಾಗಿದ್ದರು. 2001ರಿಂದ 2026ರವರೆಗೆ ಸತತ 25 ವರ್ಷಗಳ ಕಾಲ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಆಶಿಶ್ ಬ್ಯಾನರ್ಜಿ 2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಧ್ರುಬಾ ಸಹಾ ವಿರುದ್ಧ ಸೋಲುಂಡಿದ್ದರು.

ಸ್ಥಳೀಯ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಿದ್ದ ಆಶಿಶ್ ಬ್ಯಾನರ್ಜಿ ತ್ರಿವರ್ಣ ಧ್ವಜ ಹಾರಿಸಿದ ಒಂದು ದಿನದ ನಂತರ, ರಾಮ್‌ಪುರ್ಹತ್ ನಿವಾಸದ ಪಕ್ಕದಲ್ಲಿರುವ ಟಿಎಂಸಿ ಕಚೇರಿಯಲ್ಲಿ ಅವರ ಮೃತದೇಹ ಪತ್ತೆಯಾಗಿದೆ.