bomb blast: ಬಾಲ್ ಎಂದು ಭಾವಿಸಿ ಕ್ರಿಕೆಟ್ ಆಡಿದ ಬಾಲಕನಿಗೆ ನಾಡಬಾಂಬ್ ಸ್ಫೋಟಿಸಿ ಗಾಯ
ಕಾಡುಹಂದಿ ಬೇಟೆಗೆ ಎಂದು ಇಟ್ಟಿದ್ದ ನಾಡಬಾಂಬ್ ಅನ್ನು ಬಾಲ್ ಎಂದು ತಿಳಿದು ಬಾಲಕರಿಬ್ಬರು ಅದರಲ್ಲಿ ಕ್ರಿಕೆಟ್ ಆಡಿದ್ದು, ಈ ವೇಳೆ ಬಾಂಬ್ ಸ್ಫೋಟಗೊಂಡಿದೆ. ಸ್ಪೋಟದಲ್ಲಿ (bomb blast) ಓರ್ವ ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಅಭೀಶ್ ಎಂದು ಗುರುತಿಸಲಾಗಿದೆ. ಬಾಲಕನಿಗೆ ಸರ್ಕಾರಿ ಆಸ್ಪ್ರತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಸಾಂದರ್ಭಿಕ ಚಿತ್ರ -
ಮಂಗಳೂರು, ಫೆ.21: ದಕ್ಷಿಣ ಕನ್ನಡ (dakshina Kannada) ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಬಂದಾರು ಗ್ರಾಮದಲ್ಲಿ ಕಾಡುಹಂದಿ ಬೇಟೆಗೆ ಎಂದು ಇಟ್ಟಿದ್ದ ನಾಡಬಾಂಬ್ ಅನ್ನು ಬಾಲ್ ಎಂದು ತಿಳಿದು ಬಾಲಕರಿಬ್ಬರು ಅದರಲ್ಲಿ ಕ್ರಿಕೆಟ್ ಆಡಿದ್ದು, ಈ ವೇಳೆ ಬಾಂಬ್ ಸ್ಫೋಟಗೊಂಡಿದೆ. ಸ್ಪೋಟದಲ್ಲಿ (bomb blast) ಓರ್ವ ಬಾಲಕ ಗಾಯಗೊಂಡಿದ್ದಾನೆ. ಗಾಯಗೊಂಡ ಬಾಲಕನನ್ನು ಅಭೀಶ್ ಎಂದು ಗುರುತಿಸಲಾಗಿದೆ. ಬಾಲಕನಿಗೆ ಸರ್ಕಾರಿ ಆಸ್ಪ್ರತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮನೆಯ ಮುಂಭಾಗದಲ್ಲಿ ಅಭೀಶ್ ಹಾಗೂ ಮತ್ತೊಬ್ಬ ಬಾಲಕ ಕ್ರಿಕೆಟ್ ಆಡುವ ವೇಳೆ ಕಾಡುಹಂದಿಗೆ ಇಟ್ಟಿದ್ದ ಬಾಲ್ ತರಹದ ಸ್ಫೋಟಕ ಸಿಕ್ಕಿದೆ. ಅದನ್ನು ಅಭೀಶ್ ಗೆಳೆಯ ಚೆಂಡೆಂದು ತಿಳಿದು ಹಾಕಿದ್ದಾನೆ. ಬ್ಯಾಟ್‌ನಿಂದ ಅದಕ್ಕೆ ಹೊಡೆದಾಗ ಅದು ಸ್ಫೋಟವಾಗಿದೆ. ಸ್ಟೋಟದ ತೀವ್ರತೆ ಅಷ್ಟೊಂದು ಇಲ್ಲದ ಕಾರಣ, ಯಾವುದೇ ದೊಡ್ಡ ಅನಾಹುತ ಸಂಭವಿಸಿಲ್ಲ.
ಧರ್ಮಸ್ಥಳ (Dharmasthala) ಪೊಲೀಸ್ (Police) ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಬೇಟೆ ಆಡಲು ಬಾಂಬ್ ಇಟ್ಟಿದ್ದವರ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.
ಹಾವೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ಭಯದಿಂದ ಹೊರಗೆ ಓಡಿ ಬಂದ ಜನ
ಬೈಕ್‌ಗೆ ಡಿಕ್ಕಿಯಾದ ಲಾರಿ, ಕುಟುಂಬದ ಮೂವರು ಸಾವು
ಚಿಕ್ಕೋಡಿ: ಲಾರಿ- ಬೈಕ್ ಮುಖಾಮುಖಿ (lorry bike hit) ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ (Road Accident) ಘಟನೆ ಬೆಳಗಾವಿ (Belagavi news) ಜಿಲ್ಲೆಯ ರಾಯಬಾಗ ತಾಲ್ಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಪತಿ ಗಿರೇಪ್ಪಾ ಕುಂದರಾಳಿ (38), ಪತ್ನಿ ಮಂಜುಳಾ ಕುದ್ರಾಳಿ (28) ಹಾಗೂ ಮಗಳು ಆರಾಧ್ಯಾ (7) ಮೃತ ದುರ್ದೈವಿಗಳು.
ಮೃತ ಗಿರೇಪ್ಪಾ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತರು ಬೈಕ್‌ನಲ್ಲಿ ಮಹಾರಾಷ್ಟ್ರದ ಸಾಂಗಲಿ ಜಿಲ್ಲೆಯ ಜಯಸಿಂಗಪುರದಿಂದ ಬಾಗಲಕೋಟ ಜಿಲ್ಲೆಯ ಜಮಖಂಡಿ ಪಟ್ಟಣಕ್ಕೆ ಹೊರಟಿದ್ದರು. ಅಲಖನೂರ ಗ್ರಾಮದ ಹೊರವಲಯದ ಜಮಖಂಡಿ-ಮೀರಜ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದಾಗ ಎದುರಿಗೆ ಬಂದ ಲಾರಿ ಬೈಕ್‌ಗೆ ಮುಖಾಮುಖಿ ಡಿಕ್ಕಿಯಾಗಿದೆ.
Bomb threat: ಧಾರವಾಡ ಹೈಕೋರ್ಟ್ ಪೀಠ, ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ
ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.