Self Harming: ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ಆತ್ಮಹತ್ಯೆ
Bengaluru Crime: ರಾಕೇಶ್ ಪದೇ ಪದೆ ಕುಡಿದು ಬಂದು ಜಗಳ ಮಾಡುತ್ತಿದ್ದ. ಭಾನುವಾರವೂ ಜಗಳ ಮಾಡಿದ್ದ. ಸೋಮವಾರ ಬೆಳಗ್ಗೆ ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.

-

ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ಲಿವಿಂಗ್ ಟುಗೆದರ್‌ನಲ್ಲಿದ್ದ (Living togethar) ಜೋಡಿಯೊಂದು (Couple) ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ.
ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾಕೇಶ್ ಪದೇ ಪದೆ ಕುಡಿದು ಬಂದು ಜಗಳ ಮಾಡುತ್ತಿದ್ದ. ಭಾನುವಾರವೂ ಜಗಳ ಮಾಡಿದ್ದ. ಸೋಮವಾರ ಬೆಳಗ್ಗೆ ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.
ನದಿಗೆ ಹಾರಿಕೊಂಡು ತಾಯಿ- ಮಗಳು ಆತ್ಮಹತ್ಯೆ
ಹಾವೇರಿ: ವರದಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾವೇರಿ ತಾಲೂಕಿನ ವರದಾಹಳ್ಳಿಯಲ್ಲಿ ಭಾನುವಾರ ನಡೆದಿದೆ. ಗಂಡನ ಮನೆಯಲ್ಲಿ ದಿನನಿತ್ಯ ಆಗುತ್ತಿದ್ದ ಭಿನ್ನಾಭಿಪ್ರಾಯ, ಕಲಹದಿಂದ ನೊಂದ 38 ವರ್ಷದ ಸವಿತಾ ನಾಗರಾಜ ಉಳ್ಳಾಗಡ್ಡಿ, ಮಗಳು ಕಾವ್ಯಾ ಇಬ್ಬರೂ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ: Self Harming: ವರದಕ್ಷಿಣೆಗಾಗಿ ಗಂಡನ ಮನೆಯವರಿಂದ ಕಿರುಕುಳ; ವಿಡಿಯೋ ಮಾಡಿ ಉಪನ್ಯಾಸಕಿ ಆತ್ಮಹತ್ಯೆ
ಭಾನುವಾರ ಮಧ್ಯಾಹ್ನ ಸುಮಾರು 3 ಗಂಟೆಯ ಸುಮಾರಿಗೆ ಘಟನೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಇಲಾಖೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ದೋಣಿ ಮೂಲಕ ನದಿಯಲ್ಲಿ ಹುಡುಕಾಟ ಪ್ರಾರಂಭಿಸಿದ್ದರು. ಇದೀಗ ಕಾವ್ಯಾ ಅವರ ಮೃತದೇಹ ಪತ್ತೆಯಾಗಿದ್ದು, ಸವಿತಾ ಅವರ ಮೃತದೇಹಕ್ಕಾಗಿ ಹುಡುಕಾಟ ನಡೆದಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಸವಿತಾ ಅವರಿಗೆ ಇಬ್ಬರು ಗಂಡು, ಒಬ್ಬ ಹೆಣ್ಣು ಮಗಳಿದ್ದಾಳೆ. ಇತ್ತೀಚೆಗಷ್ಟೇ ಮಗಳು ಕಾವ್ಯಾ ನವೋದಯ ಪರೀಕ್ಷೆ ಪಾಸಾಗಿದ್ದಳು. ಪ್ರತಿಭಾವಂತೆಯಾಗಿದ್ದಳು. ಆದರೆ, ಮನೆಯಲ್ಲಿ ನಿತ್ಯ ಕಲಹ, ಭಿನ್ನಾಭಿಪ್ರಾಯವಿದ್ದ ಹಿನ್ನೆಲೆಯಲ್ಲಿ ಮನನೊಂದು ತಾಯಿ ಸವಿತಾ ಅವರು ಕಾವ್ಯಾಳನ್ನು ಕರೆದುಕೊಂಡು ಬಂದು ನದಿಗೆ ಹಾರಿದ್ದಾರೆ ಎಂದು ತಿಳಿದುಬಂದಿದೆ. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.