ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್; ಮರುಪರಿಶೀಲನಾ‌ ಅರ್ಜಿ ವಜಾ

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಜೈಲು ಸೇರಿದ್ದ ಸೂರಜ್ ರೇವಣ್ಣ, ನಂತರ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದರು.

ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ಸೂರಜ್ ರೇವಣ್ಣಗೆ ಕೋರ್ಟ್‌ ಶಾಕ್‌

ಸೂರಜ್‌ ರೇವಣ್ಣ (ಸಂಗ್ರಹ ಚಿತ್ರ) -

Prabhakara R
Prabhakara R Feb 17, 2026 9:54 PM

ಬೆಂಗಳೂರು, ಫೆ.17: ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜೆಡಿಎಸ್ ಎಂಎಲ್​​​ಸಿ ಸೂರಜ್ ರೇವಣ್ಣಗೆ ಹಿನ್ನಡೆಯಾಗಿದೆ. ಪ್ರಕರಣದಿಂದ ಕೈಬಿಡುವಂತೆ ಕೋರಿದ್ದ ಮರುಪರಿಶೀಲನಾ‌ ಅರ್ಜಿಯನ್ನು ನಗರದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ನ ಜಡ್ಜ್ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ ಆದೇಶ ಹೊರಡಿಸಿದ್ದಾರೆ.

ಜೆಡಿಎಸ್‌ ಕಾರ್ಯಕರ್ತನ ಮೇಲೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಡಾ.ಸೂರಜ್‌ ರೇವಣ್ಣ ಬಂಧನವಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಬಳಿಕ ಸೂರಜ್‌ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು. ಈ ಹಿನ್ನೆಲೆ ಸೂರಜ್​ ಒಂದು ತಿಂಗಳ ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದರು.

ಏನಿದು ಪ್ರಕರಣ?

ಸೂರಜ್ ರೇವಣ್ಣ ಅಸಹಜ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು 2024ರ ಜೂನ್ 22 ರಂದು ಸಂತ್ರಸ್ತ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್​​ಗಳ ಅಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಹಾಸನದ ಜಿಲ್ಲಾ ಪೊಲೀಸ್ ಠಾಣೆಗೆ ಸಂತ್ರಸ್ತ ದೂರು ನೀಡಲು ಆಗಮಿಸಿದ್ದರು. ಆದರೆ, ನಂತರ ಅದನ್ನು ಹೊಳೆನರಸೀಪುರ ಗ್ರಾಮಾಂತರ ಠಾಣೆ ಪೊಲೀಸರಿಗೆ ವರ್ಗಾಯಿಸಲಾಗಿತ್ತು. ಅದರಂತೆ, ಜೂನ್ 23 ರಂದು ಸೂರಜ್ ರೇವಣ್ಣರನ್ನು ಬಂಧಿಸಲಾಗಿತ್ತು.

ಅತ್ಯಾಚಾರ ಪ್ರಕರಣ: 31 ವಾರಗಳ ಗರ್ಭಿಣಿ ಹದಿಹರೆಯದ ಸಂತ್ರಸ್ತೆಯ ಗರ್ಭಪಾತಕ್ಕೆ ಕೋರ್ಟ್‌ ಅನುಮತಿ

ಮತ್ತೊಂದೆಡೆ, ಸುಳ್ಳು ಆರೋಪ ಮಾಡಿ ಹಣಕ್ಕಾಗಿ ಪೀಡಿಸಿದ್ದಾರೆ ಎಂದು ಸೂರಜ್ ರೇವಣ್ಣ ಆಪ್ತ ಶಿವಕುಮಾರ್ ಎಂಬವರು ಸಂತ್ರಸ್ತನ ವಿರುದ್ಧ ಪ್ರತಿ ದೂರು ನೀಡಿದ್ದರು. ಸೂರಜ್ ರೇವಣ್ಣ ವಿರುದ್ಧ ದೂರುದಾರ ಲೈಂಗಿಕ ಕಿರುಕುಳ ದೂರು ನೀಡುವುದಾಗಿ ಬೆದರಿಕೆ ಹಾಕಿ, ಐದು ಕೋಟಿ ರೂ. ಹಣ ನೀಡದಿದ್ದರೆ ಲೈಂಗಿಕ ದೌರ್ಜನ್ಯ ಕೇಸ್ ದಾಖಲಿಸುತ್ತೇನೆ ಎಂದು ಬ್ಲ್ಯಾಕ್​​ಮೇಲ್ ಮಾಡಿದ್ದರು ಎಂದು ಶಿವಕುಮಾರ್ ದೂರಿನಲ್ಲಿ ಉಲ್ಲೇಖಿಸಿದ್ದರು. ಈ ಎಲ್ಲ ಬೆಳವಣಿಗೆಗಳ ನಂತರ ರಾಜ್ಯ ಸರ್ಕಾರ, ಈ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಿತ್ತು.