Namma Metro: ನಮ್ಮ ಮೆಟ್ರೋದಲ್ಲಿ ಮಹಿಳೆಯರ ವಿಡಿಯೊ ಮಾಡಿ ಅಪ್ಲೋಡ್ ಮಾಡಿದ್ದವನು ಆರೆಸ್ಟ್
ಆರೋಪಿ ಮೆಟ್ರೋದಲ್ಲಿ (Namma Metro) ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದ. ಹೀಗಾಗಿ ನಮ್ಮ ಮೆಟ್ರೋ ಹೆಣ್ಣು ಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ ಅನುಮಾನ ಮೂಡಿತ್ತು. ಇದೀಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಿಗಂತ್

ಬೆಂಗಳೂರು: ನಮ್ಮ ಮೆಟ್ರೋ (Namma Metro) ರೈಲಿನಲ್ಲಿ ಓಡಾಡುವ ಮಹಿಳೆಯರ (Women) ಚಲನವಲನವನ್ನು ಅವರಿಗೆ ತಿಳಿಯದಂತೆ ಕದ್ದು ವಿಡಿಯೋ (Video) ಮಾಡಿ ಸೋಶಿಯಲ್ ಮೀಡಿಯಾದಲ್ಲಿ (Instagram) ಶೇರ್ ಮಾಡುತ್ತಿದ್ದ ವಿಕೃತ ವ್ಯಕ್ತಿಯನ್ನು ಬೆಂಗಳೂರು (bengaluru) ಪೊಲೀಸರು ಆರೆಸ್ಟ್ ಮಾಡಿದ್ದಾರೆ. ಆರೋಪಿ ದಿಗಂತ ಎಂಬಾತನನ್ನು ಬನಶಂಕರಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆದ ಬೆನ್ನಲ್ಲೆ ಪೊಲೀಸರು ಸುಮೋಟೊ ಕೇಸ್ ದಾಖಲು ಮಾಡಿಕೊಂಡಿದ್ದರು.
ನಮ್ಮ ಮೆಟ್ರೋ ಸಿಲಿಕಾನ್ ಸಿಟಿ ಜನರ ಜೀವನಾಡಿಯಾಗಿದ್ದು, ಪ್ರತಿನಿತ್ಯ ಲಕ್ಷಾಂತರ ಮಹಿಳೆಯರು ಉದ್ಯೋಗಕ್ಕಾಗಿ ನಗರದ ಮೂಲೆ ಮೂಲೆಗೆ ಸಂಚರಿಸುತ್ತಾರೆ. ಈ ನಡುವೆ ಈ ಆರೋಪಿ ಮೆಟ್ರೋದಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ಮಾಡಿ ಇನ್ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದ. ಹೀಗಾಗಿ ನಮ್ಮ ಮೆಟ್ರೋ ಹೆಣ್ಣು ಮಕ್ಕಳಿಗೆ ಎಷ್ಟು ಸುರಕ್ಷಿತ ಎಂಬ ಅನುಮಾನ ಮೂಡಿತ್ತು. ಇದೀಗ ಆ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ಆರೋಪಿ ದಿಗಂತ "ಮೆಟ್ರೋ ಚಿಕ್ಸ್" ಎಂಬ ಇನ್ಸ್ಟಾಗ್ರಾಂ ಪೋಸ್ಟ್ ಅಕೌಂಟ್ ಮೂಲಕ ಯುವತಿಯರ ಅಶ್ಲೀಲ ವಿಡಿಯೋ ಅಪ್‌ಲೋಡ್ ಮಾಡುತ್ತಿದ್ದ. ವ್ಯೂಸ್ ಹೆಚ್ಚಾಗಿ ಬರಲೆಂದು ಆರೋಪಿ ದಿಗಂತ ಅಶ್ಲೀಲವಾಗಿ ವಿಡಿಯೋ ರೆಕಾರ್ಡ್ ಮಾಡಿ ಅಪ್ಲೋಡ್ ಮಾಡುತ್ತಿದ್ದ. ಈತ ಇನ್ಸ್ಟಾಗ್ರಾಂನಲ್ಲಿ 5,538 ಫಾಲೋವರ್ಸ್‌ಗಳನ್ನು ಹೊಂದಿರುವ ಖಾತೆಯಲ್ಲಿ ಸುಮಾರು 13ಕ್ಕೂ ಹೆಚ್ಚು ವಿಡಿಯೋಗಳನ್ನು ಹಂಚಿಕೊಂಡಿದ್ದಾನೆ. ಮೆಟ್ರೋ ರೈಲಿನ ಒಳಗೆ, ನಿಲ್ದಾಣಗಳಲ್ಲಿ ಹುಡುಗಿಯರ ಆಕ್ಷೇಪಾರ್ಹ ವಿಡಿಯೋಗಳನ್ನು ರೆಕಾರ್ಡ್ ಮಾಡಿದ್ದ.
ಇದಕ್ಕೆ ಸಂಬಂಧಿಸಿ ದಿಗಂತ್ ಎಂಬಾತನನ್ನು ಬನಶಂಕರಿ ಪೊಲೀಸರು ಪೀಣ್ಯ ಸಮೀಪ ಬಂಧಿಸಿದ್ದಾರೆ. ಇವನು ಹಾವೇರಿ ಮೂಲದವನು ಎಂದು ಗೊತ್ತಾಗಿದೆ. ದಿಗಂತ್‌ನ ವಿಕೃತಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಎಲ್ಲಾ ವಿಡಿಯೋಗಳು ಡಿಲೀಟ್ ಆಗಿವೆ. ಐಟಿ ಆ್ಯಕ್ಟ್ 2008 ಸೆಕ್ಷನ್ 67, ಬಿಎನ್ಎಸ್ 78(2)ರಡಿ ಬನಶಂಕರಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.
ಇದನ್ನೂ ಓದಿ: Namma Metro: ನಮ್ಮ ಮೆಟ್ರೋದಲ್ಲಿ ಮಹಿಳೆಯರ ಗುಪ್ತ ಚಿತ್ರೀಕರಣ, ಇನ್‌ಸ್ಟಗ್ರಾಂನಲ್ಲಿ ಅಪ್‌ಲೋಡ್!