ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

"ರಕ್ತದಲ್ಲಿ ನೆನೆಸಿ, ಪ್ರಾಣಿಗಳ ಮಾಂಸ ಸುರಿದ"; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮತಾಂತರಕ್ಕೆ ಯತ್ನ!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಾಟ್ಲಾ ಹೌಸ್ ಪ್ರದೇಶದಲ್ಲಿ 23 ವರ್ಷದ ದಲಿತ ಮಹಿಳೆಯೊಬ್ಬರು ತನ್ನನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿ, ಕ್ರೂರ ಚಿತ್ರಹಿಂಸೆ ನೀಡಿ, ಬಲವಂತವಾಗಿ ಧರ್ಮ ಮತಾಂತರಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಮತಾಂತರಕ್ಕೆ ಯತ್ನಿಸಿದವರ ಬಂಧನ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar May 21, 2026 4:31 PM

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಬೆಚ್ಚಿ ಬೀಳಿಸುವ ಘಟನೆ ನಡೆದಿದ್ದು, ಬಾಟ್ಲಾ ಹೌಸ್ ಪ್ರದೇಶದಲ್ಲಿ 23 (Physical Assault) ವರ್ಷದ ದಲಿತ ಮಹಿಳೆಯೊಬ್ಬರು ತನ್ನನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ ಮಾಡಿ, ಕ್ರೂರ ಚಿತ್ರಹಿಂಸೆ ನೀಡಿ, ಬಲವಂತವಾಗಿ ಧರ್ಮ ಮತಾಂತರಗೊಳಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ. ದೂರಿನ ಪ್ರಕಾರ, ಮಹಿಳೆ 2021 ರಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಸಾಹಿಲ್ ಎಂದು ಗುರುತಿಸಿಕೊಂಡ ವ್ಯಕ್ತಿಯೊಂದಿಗೆ ಸಂಪರ್ಕಕ್ಕೆ ಬಂದಿದ್ದಳು.

ಸಾಹಿಲ್ ಎಂದು ಹೇಳಿಕೊಂಡಿದ್ದ ಆತನ ನಿಜವಾದ ಹೆಸರು ಫಹೀಮ್ ಎಂದು ಆಕೆಗೆ ಬಳಿಕ ತಿಳಿದು ಬಂದಿತ್ತು. ಆರೋಪಿಯು ತಾನು ಆರ್ಥಿಕವಾಗಿ ಉತ್ತಮ ಹಿಂದೂ ಕುಟುಂಬಕ್ಕೆ ಸೇರಿದವನಾಗಿದ್ದು, ಆಕೆಯನ್ನು ಮದುವೆಯಾಗುತ್ತೇನೆ ಎಂಬ ಸುಳ್ಳು ಭರವಸೆಯನ್ನು ನೀಡಿದ್ದ ಎಂದು ಆರೋಪಿಸಲಾಗಿದೆ. 2022 ರಲ್ಲಿ ತನ್ನನ್ನು ಬಾಟ್ಲಾ ಹೌಸ್‌ಗೆ ಕರೆಸಿ, ಅಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಲಾಯಿತು ಎಂದು ಮಹಿಳೆ ಆರೋಪಿಸಿದ್ದಾರೆ. ನಂತರ ತನ್ನನ್ನು ಮೀರತ್‌ಗೆ ಕರೆದೊಯ್ಯಲಾಯಿತು, ಅಲ್ಲಿ ತನ್ನ ಮೇಲೆ ಮತ್ತೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಮಹಿಳೆ ಹೇಳಿದ್ದಾಳೆ.

ಫಹೀಮ್ ಮತ್ತು ಅವನ ಸಂಬಂಧಿಕರು ಅಕ್ರಮ ಶಸ್ತ್ರಾಸ್ತ್ರ ವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎಂದು ಆಕೆ ಹೇಳಿದ್ದು, ಅವನು ನನ್ನನ್ನು ಹೆದರಿಸಲು ರಕ್ತದಲ್ಲಿ ನೆನೆಸುತ್ತಿದ್ದನು. ನನ್ನನ್ನು ಹೆದರಿಸಲು ಪ್ರಾಣಿಗಳ ಮಾಂಸವನ್ನು ನನ್ನ ಮೇಲೆ ಸುರಿಯುತ್ತಿದ್ದನು ಎಂದು ಆರೋಪ ಮಾಡಿದ್ದಾರೆ. ನಂತರ ತಸ್ಲೀಮ್ ಮೌಲ್ವಿ ಎಂದು ಗುರುತಿಸಲಾದ ವ್ಯಕ್ತಿಯಿಂದ ಚಿತ್ರಹಿಂಸೆ ನೀಡಲಾಗಿದೆ ಎಂದು ಅವರು ಹೇಳಿಕೊಂಡಿದ್ದಾರೆ.

ಮಹಿಳೆಯ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ; ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

ಮಹಿಳೆ ನೀಡಿದ ದೂರಿನ ಮೇರೆಗೆ ಆಗ್ನೇಯ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. "ಬಾಟ್ಲಾ ಹೌಸ್ ಪ್ರದೇಶದಲ್ಲಿ ಆಕೆಯ ಮೇಲೆ ಮೊದಲು ಸಾಮೂಹಿಕ ಅತ್ಯಾಚಾರ ನಡೆದಾಗಿನಿಂದ, ಜಾಮಿಯಾ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಿಸಲಾಗಿದೆ. ಈ ಪ್ರಕರಣದಲ್ಲಿ ನಾವು ನಾಲ್ವರನ್ನು ಬಂಧಿಸಿದ್ದೇವೆ" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.