Dharmasthala Case: ಮಹೇಶ್ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು, ಮಾಸ್ಕ್ ಮ್ಯಾನ್ ಚಿನ್ನಯ್ಯ ಜೈಲಿನಿಂದ ಬಿಡುಗಡೆ
ಕಳೆದ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಸೆಪ್ಟೆಂಬರ್ 18, 2025ರಿಂದ ಸೆಪ್ಟೆಂಬರ್ 17, 2026ರವರೆಗೆ ಒಂದು ವರ್ಷದ ಅವಧಿಗೆ ಗಡೀಪಾರು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು. ಹೈಕೋರ್ಟ್ ವಿಚಾರಣೆ ನಡೆಸಿ, ಪುತ್ತೂರು ಸಹಾಯಕ ಆಯುಕ್ತರ ಗಡೀಪಾರು ಆದೇಶವನ್ನು ರದ್ದುಪಡಿಸಿತ್ತು. ಕಾನೂನು ಪ್ರಕಾರ ಹೊಸ ಪ್ರಕ್ರಿಯೆ ನಡೆಸಿ ಆದೇಶ ಮಾಡುವಂತೆ ಸೂಚಿಸಿತ್ತು.
ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ -
ಬೆಳ್ತಂಗಡಿ, ಡಿ.18: ಧರ್ಮಸ್ಥಳ (Dharmasthala case) ವಿರೋಧಿ ಹೋರಾಟದಲ್ಲಿ ಗುರುತಿಸಿಕೊಂಡಿರುವ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Thimarody) ಮತ್ತೆ ಗಡೀಪಾರು (Deportation) ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಮಹೇಶ್ ಶೆಟ್ಟಿ ತಿಮರೋಡಿಯನ್ನು ಮತ್ತೆ ಗಡೀಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಈ ಗಡೀಪಾರು ಆದೇಶ ಹೊರಡಿಸಿದ್ದಾರೆ. ರಾಯಚೂರು ಜಿಲ್ಲೆಯ ಮಾನ್ವಿ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಲಾಗಿದ್ದು, ಇದು ತಿಮರೋಡಿ ಅವರಿಗೆ ಎರಡನೇ ಬಾರಿಯ ಗಡೀಪಾರು ಆದೇಶವಾಗಿದೆ.
ಪೊಲೀಸರ ವರದಿ ಆಧಾರದಲ್ಲಿ ಹೊಸ ಆದೇಶ ಹೊರಬಿದ್ದಿದ್ದು, ಕಳೆದ ಕೆಲವು ಕೇಸ್‌ಗಳೊಂದಿಗೆ ಹಾಲಿ ಪ್ರಕರಣಗಳನ್ನು ಸೇರಿಸಿ ಗಡೀಪಾರು ಮಾಡಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ ದಕ್ಷಿಣ ಕನ್ನಡದಲ್ಲಿ ಹಲವು ಕ್ರಿಮಿನಲ್ ಪ್ರಕರಣಗಳಲ್ಲಿ ಭಾಗಿಯಾಗಿರುವ ಹಿನ್ನೆಲೆಯಲ್ಲಿ ಮತ್ತೆ ಮತ್ತೆ ಗಡೀಪಾರು ಆದೇಶ ಹೊರಡಿಸಲಾಗಿದೆ.
ಈಗಾಗಲೇ ಒಮ್ಮೆ ಜಿಲ್ಲೆಯಿಂದ ಗಡೀಪಾರುಗೊಂಡಿದ್ದ ತಿಮರೋಡಿ, ಹೈಕೋರ್ಟ್ ಮೆಟ್ಟಿಲೇರಿ ರಿಲೀಫ್ ಪಡೆದಿದ್ದರು. ಪೊಲೀಸರು ನಿರಂತರವಾಗಿ ಮಹೇಶ್ ಶೆಟ್ಟಿ ತಿಮರೋಡಿ ಮೇಲೆ ನಿಗಾ ಇರಿಸಿದ್ದರು. ಕಳೆದ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ಸೆಪ್ಟೆಂಬರ್ 18, 2025ರಿಂದ ಸೆಪ್ಟೆಂಬರ್ 17, 2026ರವರೆಗೆ ಒಂದು ವರ್ಷದ ಅವಧಿಗೆ ಗಡೀಪಾರು ಮಾಡಿದ್ದರು. ಈ ಆದೇಶವನ್ನು ಪ್ರಶ್ನಿಸಿ ತಿಮರೋಡಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದರು.
ಹಣದ ಆಮಿಷದಿಂದ ಬುರುಡೆ ಚಿನ್ನಯ್ಯ ಸುಳ್ಳು ದೂರು, 6 ಜನರ ಪಿತೂರಿ
ಹೈಕೋರ್ಟ್ ವಿಚಾರಣೆ ನಡೆಸಿ, ಪುತ್ತೂರು ಸಹಾಯಕ ಆಯುಕ್ತರ ಗಡೀಪಾರು ಆದೇಶವನ್ನು ರದ್ದುಪಡಿಸಿತ್ತು. ಕಾನೂನು ಪ್ರಕಾರ ಹೊಸ ಪ್ರಕ್ರಿಯೆ ನಡೆಸಿ ಆದೇಶ ಮಾಡುವಂತೆ ಸೂಚಿಸಿತ್ತು. ಸೆಕ್ಷನ್ ಸರಿಪಡಿಸಿ ಹೊಸ ಆದೇಶ ನೀಡುವಂತೆ ಪುತ್ತೂರು ಎಸಿಗೆ ನಿರ್ದೇಶನ ನೀಡಿತ್ತು. ಇದರಂತೆ ಕೆಲ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಅನುಸರಿಸಿ, ಮೊನ್ನೆಯಷ್ಟೇ ತಿಮರೋಡಿ ಅವರಿಗೆ ಮತ್ತೆ ಗಡೀಪಾರು ನೋಟೀಸ್ ನೀಡಲಾಗಿತ್ತು.
ನೋಟಿಸ್ ಪಡೆದ ತಿಮರೋಡಿ ಡಿಸೆಂಬರ್ 7ರಂದು ಸಹಾಯಕ ಆಯುಕ್ತರಿಗೆ ಆಕ್ಷೇಪಣೆ ಸಲ್ಲಿಸಿದ್ದರು. ವಕೀಲರ ಮೂಲಕ ವಾದ ಮಂಡಿಸಿ, ಗಡೀಪಾರು ಆದೇಶ ರದ್ದುಪಡಿಸುವಂತೆ ಕೋರಿದ್ದರು. ಈಗ ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಅವರು ವಾದ-ಪ್ರತಿವಾದ ಆಲಿಸಿ, ಮತ್ತೆ ಗಡೀಪಾರು ಆದೇಶ ಮಾಡಿದ್ದಾರೆ. ತಿಮರೋಡಿ ವಿರುದ್ಧ ಈ ಹಿಂದಿನ ಕೇಸ್‌ಗಳ ಜೊತೆಗೆ ಹಾಲಿ ಕೆಲ ಪ್ರಕರಣಗಳನ್ನು ಸೇರಿಸಲಾಗಿದೆ.
ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಜೈಲಿನಿಂದ ಬಿಡುಗಡೆ
ಧರ್ಮಸ್ಥಳ ಷಡ್ಯಂತ್ರ ಪ್ರಕರಣದ (Dharmasthala Case) ಪ್ರಮುಖ ಆರೋಪಿಯಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ (Chinnaiah) ಇಂದು ಶಿವಮೊಗ್ಗದ ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹದಿಂದ ಬಿಡುಗಡೆ ಭಾಗ್ಯ ಸಿಕ್ಕಿದೆ. ಜಾಮೀನು ಮಂಜೂರಾಗಿ 24 ದಿನಗಳ ಬಳಿಗೆ ಮಾಸ್ಕ್ ಮ್ಯಾನ್ ಚಿನ್ನಯ್ಯಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಧರ್ಮಸ್ಥಳ ಬುರುಡೆ ಕೇಸ್ ಹಿಂದೆ ಅರ್ಬನ್ ನಕ್ಸಲರ ಸಂಚು: ಬಿಜೆಪಿ ಆರೋಪ
ಸೆಪ್ಟೆಂಬರ್ 9 ರಂದು ಶಿವಮೊಗ್ಗ (Shivamogga) ಸೋಗಾನೆ ಬಳಿ ಇರುವ ಕೇಂದ್ರ ಕಾರಾಗೃಹಕ್ಕೆ ಬೆಳ್ತಂಗಡಿ ಜೆಎಂಎಫ್‌ಸಿ ಕೋರ್ಟ್ ಅದೇಶದ ಹಿನ್ನಲೆ ಶಿವಮೊಗ್ಗಕ್ಕೆ ಶಿಫ್ಟ್ ಆಗಿದ್ದ ಚಿನ್ನಯ್ಯ ಕಾರಾಗೃಹದ ಕಾವೇರಿ ಬ್ಯಾರಕ್‌ನಲ್ಲಿದ್ದ. ಚಿನ್ನಯ್ಯನಿಗೆ ಕಳೆದ ನವೆಂಬರ್ 24 ರಂದು ಬೆಳ್ತಂಗಡಿ ನ್ಯಾಯಾಲಯ 12 ಷರತ್ತುಗಳನ್ನ ವಿಧಿಸಿ ಒಂದು ಲಕ್ಷ ಬಾಂಡ್ ಇಬ್ಬರು ಸ್ಥಳೀರು ಶೂರಿಟಿ ಪಡೆಯಬೇಕು ಎಂದು ಜಾಮೀನು ಮಂಜೂರು ಮಾಡಿತ್ತು. ಆದರೆ ಜಾಮೀನು ಮಂಜೂರಾಗಿ 24 ದಿನ ಕಳೆದರೂ ಕೂಡ ಶೂರಿಟಿ ನೀಡಲು ಯಾರು ಮುಂದೆ ಬಾರದ ಕಾರಣ ಶಿವಮೊಗ್ಗ ಕಾರಾಗೃಹದಲ್ಲೇ ಚಿನ್ನಯ್ಯ ಇರಬೇಕಾಯಿತು. ಇಂದು ಬೆಳಗ್ಗೆ 8-30ರ ಸುಮಾರಿಗೆ ಚಿನ್ನಯ್ಯನಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ.
ಇಂದು ಬೆಳಗ್ಗೆ ಕಾರಾಗೃಹಕ್ಕೆ ಇನ್ನೋವಾ ಕಾರಿನಲ್ಲಿ ಚಿನ್ನಯ್ಯನ ಪತ್ನಿ ಮಲ್ಲಿಕಾ ಸೇರಿದಂತೆ ಐದು ಜನರು ಆಗಮಿಸಿದ್ದು, ಜೈಲಿನಲ್ಲಿ ಬಿಡುಗಡೆ ಪ್ರಕ್ರಿಯೆಗಳನ್ನು ಮುಗಿಸಿ ಪತಿ ಚಿನ್ನಯ್ಯನನ್ನು ಕರೆದುಕೊಂಡು ಅವಸರದಿಂದ ಹೊರಟು ಹೋಗಿದ್ದಾರೆ. ಚಿನಯ್ಯನ ಪತ್ನಿ ಕ್ಯಾಮೆರಾಗಳನ್ನು ಎದುರಿಸದೆ ತಲೆ ಮೇಲೆ ಸೆರಗು ಮುಚ್ಚಿಕೊಂಡು ಜೈಲಿನೊಳಗೆ ಹೋಗಿ ಬಂದಿದ್ದಾರೆ.