ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Case: ಯೂಟ್ಯೂಬರ್‌ ಸಮೀರ್‌ ಮನೆ ಸುತ್ತುವರಿದ ಪೊಲೀಸರು, ಸಮೀರ್‌ ಪರಾರಿ

Youtuber Sameer: ಸಮೀರ್‌ನನ್ನು ವಶಕ್ಕೆ ಪಡೆದು ಬೆಳ್ತಂಗಡಿಗೆ ವಿಚಾರಣೆಗೆ ಕರೆತರಲು ಪೊಲೀಸರು ನಿರ್ಧರಿಸಿದ್ದರು. ಆದರೆ ಪೊಲೀಸರ ಆಗಮನದ ಸುಳಿವು ಸಿಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದಾನೆ. ಆತ ಮನೆಯಲ್ಲಿ ಇಲ್ಲ ಎಂದು ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಯೂಟ್ಯೂಬರ್‌ ಸಮೀರ್‌ ಮನೆ ಸುತ್ತುವರಿದ ಪೊಲೀಸರು, ಸಮೀರ್‌ ಪರಾರಿ

ಹರೀಶ್‌ ಕೇರ ಹರೀಶ್‌ ಕೇರ Aug 21, 2025 3:10 PM

ಮಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ (Dharmasthala Case) ಸಂಬಂಧಿಸಿದಂತೆ ಭಾರೀ ಸುದ್ದಿಯಲ್ಲಿರುವ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಯನ್ನು ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಯೂಟ್ಯೂಬರ್ ಸಮೀರ್‌ಗೂ (Youtuber Sameer) ಕೂಡ ಬಂಧನ ಭೀತಿ ಎದುರಾಗಿದೆ. ಬೆಂಗಳೂರಿನ ಬನ್ನೇರುಘಟ್ಟದಲ್ಲಿರುವ ಯೂಟ್ಯೂಬರ್‌ ಸಮೀರ್ ಮನೆಯನ್ನು ಪೊಲೀಸರು ಸುತ್ತುವರೆದಿದ್ದು, ಧರ್ಮಸ್ಥಳ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಆನಂದ್ ಎನ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಆದರೆ, ಪೊಲೀಸರ ಆಗಮನದ ಸುಳಿವು ಸಿಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದಾನೆ.

ಸಮೀರ್‌ನನ್ನು ವಶಕ್ಕೆ ಪಡೆದು ಬೆಳ್ತಂಗಡಿಗೆ ವಿಚಾರಣೆಗೆ ಕರೆತರಲು ಪೊಲೀಸರು ನಿರ್ಧರಿಸಿದ್ದರು. ಆದರೆ ಪೊಲೀಸರ ಆಗಮನದ ಸುಳಿವು ಸಿಗುತ್ತಿದ್ದಂತೆಯೇ ಆತ ಪರಾರಿಯಾಗಿದ್ದಾನೆ. ಆತ ಮನೆಯಲ್ಲಿ ಇಲ್ಲ ಎಂದು ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಮೀರ್‌ ಮೇಲೆ ಹಲವಾರು ಪ್ರಕರಣಗಳು ದಾಖಲಾಗಿವೆ. ಜುಲೈ ತಿಂಗಳಲ್ಲಿಯೇ ಈತನ ಮೇಲೆ ಬೆಳ್ತಂಗಡಿ ಠಾಣೆಯಲ್ಲಿ ಕೇಸುಗಳು ದಾಖಲಾಗಿದ್ದವು. ಧರ್ಮಸ್ಥಳ ಕ್ಷೇತ್ರದ ಕುರಿತು ಅವಹೇಳನಕಾರಿ ವಿಡಿಯೋ ಮಾಡಿರುವುದು, ಜನರಲ್ಲಿ ಕೋಮು ವೈಷಮ್ಯ ಮೂಡಿಸಲು ಪ್ರಯತ್ನಿಸಿರುವುದು ಈ ಪ್ರಕರಣಗಳಾಗಿವೆ. ಬೆಳ್ತಂಗಡಿ ಪೊಲೀಸರ ಆಗಮನ ಸಮೀರ್‌ ತಿಳಿದದ್ದು ಹೇಗೆ, ಆತನಿಗೆ ಮಾಹಿತಿ ನೀಡುವವರು ಇಲಾಖೆಯಲ್ಲೇ ಇದ್ದಾರೆಯೇ ಎಂಬ ಪ್ರಶ್ನೆಯೂ ಮೂಡಿದೆ.

ಇಂದು ಬೆಳಗ್ಗೆ ಉಡುಪಿಯ 20ಕ್ಕೂ ಹೆಚ್ಚು ಪೊಲೀಸರು ಬೆಳ್ತಂಗಡಿಯಲ್ಲಿರುವ ಹಿಂದೂ ಜಾಗರಣ ವೇದಿಕೆ ಮುಖಂಡ ಹಾಗೂ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ತೆರಳಿ ವಶಕ್ಕೆ ಪಡೆದಿದ್ದರು. ನಂತರ ಬ್ರಹ್ಮಾವರ ಪೊಲೀಸ್‌ ಠಾಣೆಗೆ ತಿಮರೋಡಿಯನ್ನು ಕರೆದೊಯ್ದು ವಿಚಾರಣೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ತಿಮರೋಡಿ, ಗಿರೀಶ್‌, ಸಮೀರ್‌, ಸುಜಾತ ಭಟ್ ಮೇಲೆ ಸ್ನೇಹಮಯಿ ಕೃಷ್ಣ ದೂರು