ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಟಿಸಿಎಸ್ ಕಂಪನಿಯಲ್ಲಿ ಬೆಳಕಿಗೆ ಬಂತು ಮತಾಂತರ ದಂಧೆ! ಟೀಂ ಲೀಡ್‌ ಸೇರಿ 6 ಜನರ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪ್ರಮುಖ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ಹಲವಾರು ಮಹಿಳಾ ಉದ್ಯೋಗಿಗಳು ತಮ್ಮ ತಂಡದ ನಾಯಕರು ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಮತ್ತು ಧಾರ್ಮಿಕ ಮತಾಂತರಕ್ಕೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ ನಂತರ ಭಾರಿ ವಿವಾದ ಭುಗಿಲೆದ್ದಿದೆ.

ಟಿಸಿಎಸ್ ಕಂಪನಿಯಲ್ಲಿ ಬೆಳಕಿಗೆ ಬಂತು  ಮತಾಂತರ ದಂಧೆ!

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Apr 13, 2026 4:41 PM

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಪ್ರಮುಖ ಐಟಿ ಕಂಪನಿ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (ಟಿಸಿಎಸ್) ನ ಹಲವಾರು (Religious conversion racket) ಮಹಿಳಾ ಉದ್ಯೋಗಿಗಳು (TCS Nashik) ತಮ್ಮ ತಂಡದ ನಾಯಕರು ಕೆಲಸದ ಸ್ಥಳದಲ್ಲಿ ಲೈಂಗಿಕ ಕಿರುಕುಳ ಮತ್ತು ಧಾರ್ಮಿಕ ಮತಾಂತರಕ್ಕೆ ಪ್ರಯತ್ನಿಸಿದ್ದಾರೆ ಎಂದು ಆರೋಪಿಸಿದ ನಂತರ ಭಾರಿ ವಿವಾದ ಭುಗಿಲೆದ್ದಿದೆ. ಮಹಾರಾಷ್ಟ್ರದ ಪೊಲೀಸ್ ಠಾಣೆಗಳಲ್ಲಿ ಹಲವಾರು ಎಫ್‌ಐಆರ್‌ಗಳು ದಾಖಲಾಗಿವೆ, ಅವುಗಳಲ್ಲಿ ಒಂದು ಅತ್ಯಾಚಾರದ ಪ್ರಕರಣವೂ ಸೇರಿದೆ. ಈಗಾಗಲೇ ಕನಿಷ್ಠ ಆರು ಜನರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಎಫ್‌ಐಆರ್‌ಗಳಲ್ಲಿ, ನೌಕರರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಅವರನ್ನು ಮತಾಂತರಿಸಲು ಪ್ರಯತ್ನಿಸಿದ್ದಾರೆ ಎಂದು ಆರೋಪಿಸಲಾಗಿದೆ . 18 ರಿಂದ 25 ವರ್ಷ ವಯಸ್ಸಿನ ಮಹಿಳೆಯರು ಇದರಲ್ಲಿ ಹೆಚ್ಚಾಗಿ ಸೇರಿದ್ದಾರೆ ಎಂದು ಹೇಳಲಾಗಿದ್ದು, 2022 ರಿಂದ ಇಲ್ಲಿಯ ವರೆಗೆ ಮತಾಂತರ ಮಾಡಲಾಗುತ್ತಿತ್ತು ಎಂದು ಆರೋಪಿಸಲಾಗಿದೆ. ಆರು ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಲ್ಲಿ ಹಲವರು ತಂಡದ ನಾಯಕರು ಮತ್ತು ಎಂಜಿನಿಯರ್‌ಗಳು ಸೇರಿದ್ದಾರೆ.

ಬಂಧಿತರಲ್ಲಿ ಆಸಿಫ್ ಅನ್ಸಾರಿ, ಶಫಿ ಶೇಖ್, ಶಾರುಖ್ ಖುರೇಷಿ, ರಜಾ ಮೆಮನ್ ಮತ್ತು ತೌಸಿಫ್ ಅತ್ತರ್ ಸೇರಿದ್ದಾರೆ. ಮತ್ತೊಬ್ಬ ಉದ್ಯೋಗಿ ಅಶ್ವಿನ್ ಚೈನಾನಿ ಎಂಬಾತನನ್ನು ಸಹ ವಿಚಾರಣೆ ನಡೆಸಲಾಗುತ್ತಿದೆ. ವರದಿಗಳ ಪ್ರಕಾರ, ಪೊಲೀಸರು ಮತ್ತೊಬ್ಬ ಮಾನವ ಸಂಪನ್ಮೂಲ ಅಧಿಕಾರಿಗಾಗಿ ಹುಡುಕಾಟ ನಡೆಸಿದ್ದಾರೆ. ಬಿಜೆಪಿ ನಾಯಕ ಗಿರೀಶ್ ಮಹಾಜನ್ ಈ ಪ್ರಕರಣದ ಕುರಿತು ಮಾತನಾಡಿ, ಮುಸ್ಲಿಂ ಕಂಪನಿ ಕೆಲಸಗಾರರು ಮತ್ತು ಕೆಲವು ಅಧಿಕಾರಿಗಳು ಹುಡುಗಿಯರಿಗೆ ಉದ್ಯೋಗ ಮತ್ತು ಉತ್ತಮ ಸಂಬಳದ ಭರವಸೆ ನೀಡಿ ಆಮಿಷವೊಡ್ಡಿ ಮತಾಂತರಕ್ಕೆ ಪ್ರಯತ್ನಿಸಿದರು. ನಮಾಜ್ ಮಾಡಲು ಮತ್ತು ರೋಜಾ ಮಾಡಲು ಒತ್ತಾಯಿಸಲಾಯಿತು ಎಂದು ಅವರು ವಾಗ್ದಾಳಿ ನಡೆಸಲಾಯಿತು.

ಅತ್ಯಾಚಾರ, ಬಲವಂತದ ಮತಾಂತರ ಆರೋಪ; ಹೈಕೋರ್ಟ್ ಮೇಲೆ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ

ಈಗಾಗಲೇ ಟಿಸಿಎಸ್‌ ತನಿಖೆಯಲ್ಲಿರುವ ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ. ಪೊಲೀಸರು ಎಸಿಪಿ ಶ್ರೇಣಿಯ ಅಧಿಕಾರಿಯ ನೇತೃತ್ವದಲ್ಲಿ 12 ಸದಸ್ಯರ ಎಸ್‌ಐಟಿಯನ್ನು ರಚಿಸಿದ್ದು, ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣವು ರಾಜಕೀಯ ಪ್ರತಿಕ್ರಿಯೆಗಳನ್ನು ಹುಟ್ಟುಹಾಕಿದೆ. ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ನಾಸಿಕ್‌ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಮಾಜಿ ಸಂಸದೆ ಮತ್ತು ಶಿವಸೇನೆ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಅವರು ಕೆಲಸದ ಸ್ಥಳದ ಸುರಕ್ಷತೆಯ ಬಗ್ಗೆ ಕಳವಳ ವ್ಯಕ್ತಪಡಿಸಿ, ಟಿಸಿಎಸ್ ಪ್ರತಿಕ್ರಿಯೆಯನ್ನು ಟೀಕಿಸಿದ್ದಾರೆ.