Pune Horror: ಪುಣೆ ಅತ್ಯಾಚಾರ ಪ್ರಕರಣ; ಸ್ನೀಫರ್ ಡಾಗ್, ಡ್ರೋನ್, ನೂರಕ್ಕೂ ಅಧಿಕ ಪೊಲೀಸರು, ಹೇಗಿತ್ತು ಆರೋಪಿ ಬಂಧನದ ರೋಚಕ ಕಾರ್ಯಾಚರಣೆ?
ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿರುವ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಸದ್ಯ ಆರೋಪಿಯ ವಿಚಾರಣೆ ನಡೆಯುತ್ತಿದೆ. ಆದರೆ ಆರೋಪಿಯ ಬಂಧನ ಹಿಂದೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ರೋಚಕವಾಗಿತ್ತು.

ದತ್ತಾತ್ರಯ ರಾಮದಾಸ್ ಗಡೆ

ಮುಂಬೈ : ಪುಣೆಯ ಸ್ವರ್ಗೇಟ್ ಡಿಪೋದಲ್ಲಿ ನಿಂತಿರುವ ಸರ್ಕಾರಿ ಬಸ್ಸಿನೊಳಗೆ 26 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ (Pune Horror) ಎಸಗಿದ ಆರೋಪಿಯನ್ನು ಪುಣೆ ಅಪರಾಧ ವಿಭಾಗದ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ. ಘಟನೆ ನಡೆದು 75 ಗಂಟೆಗಳ ಒಳಗೆ ಆರೋಪಿಯ ಬಂಧನವಾಗಿದೆ. ಆರೋಪಿಯನ್ನು ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಯ ವಿಚಾರಣೆ ನಡೆಯುತ್ತಿದೆ. ಆದರೆ ಆರೋಪಿಯ ಬಂಧನ ಹಿಂದೆ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ ರೋಚಕವಾಗಿತ್ತು.
ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ಪ್ರಾರಂಭಿಸಿದ ಪೊಲೀಸರು, ಆರೋಪಿಯನ್ನು ಪತ್ತೆ ಮಾಡಲು ಎಲ್ಲಾ ಬಸ್ ಹಾಗೂ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ತಂಡಗಳನ್ನು ನಿಯೋಜಿಸಿತ್ತು. ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ಪೊಲೀಸರು ಆರೋಪಿ ತನ್ನ ಗ್ರಾಮಕ್ಕೆ ತೆರಳಿದ್ದಾನೆ ಎಂಬುದನ್ನು ಪತ್ತೆ ಮಾಡಿತ್ತು. ಪುಣೆ ಜಿಲ್ಲೆ ಮತ್ತು ಅದರಾಚೆಗೆ ಡ್ರೋನ್‌ಗಳು ಮತ್ತು 100 ಕ್ಕೂ ಹೆಚ್ಚು ಸಿಬ್ಬಂದಿಯನ್ನು ಒಳಗೊಂಡ 13 ಪೊಲೀಸ್ ತಂಡ ಆರೋಪಿಯನ್ನು ಸೆರೆ ಹಿಡಿಯಲು ಕಾರ್ಯಾಚರಣೆ ಪ್ರಾರಂಭ ಮಾಡಿದ್ದವು. ಗುರುವಾರ ರಾತ್ರಿ 10:30 ಕ್ಕೆ ಆರೋಪಿ ದತ್ತಾತ್ರಯ ರಾಮದಾಸ್ ಗಡೆ ತನ್ನ ಸಂಬಂಧಿಕರ ಮನೆಗೆ ಹೋಗಿರುವ ಮಾಹಿತಿಯನ್ನು ತಿಳಿದ ಪೊಲೀಸರು ಗ್ರಾಮಕ್ಕೆ ತೆರಳಿದ್ದಾರೆ.
ಆರೋಪಿ ತನ್ನ ಮನೆ ತಲುಪುವ ಮೊದಲು ಅಂಗಡಿಯೊಂದರಲ್ಲಿ ನೀರಿನ ಬಾಟೆಲ್ ಒಂದನ್ನು ಖರೀದಿ ಮಾಡಿದ್ದ, ನಂತರ ತನ್ನ ಶರ್ಟ್ ಬದಲಾಯಿಸಿಕೊಂಡಿದ್ದ ಎಂದು ತಿಳಿದು ಬಂದಿದೆ. ಸ್ನೀಫರ್ ನಾಯಿಗಳನ್ನು ಆರೋಪಿಯ ಪತ್ತೆಗಾಗಿ ಬಳಸಿಕೊಳ್ಳಲಾಗಿದೆ. ಗಡೆ ಪೊಲೀಸರಿಂದ ತಪ್ಪಿಸಿಕೊಳ್ಳಲು ಹೊಲವೊಂದರಲ್ಲಿ ಅಡಗಿ ಕುಳಿತಿದ್ದ. ಆತನ ಪತ್ತೆಗಾಗಿ ಡ್ರೋನ್ ಹಾರಿಸಲಾಗಿತ್ತು. ಗ್ರಾಮಸ್ಥರು ಈತ ಕಬ್ಬಿನ ಗದ್ದೆಯಲ್ಲಿ ಅಡಗಿ ಕುಳಿತಿರುವದನ್ನು ಗಮನಿಸಿ ಪೊಲೀಸರ ಗಮನಕ್ಕೆ ತಂದಿದ್ದಾರೆ. ನಂತರ ಆತನನ್ನು ಬಂಧಿಸಿ ಪುಣೆಗೆ ಕರೆದೊಯ್ಯಲಾಗಿದೆ.
ಈ ಸುದ್ದಿಯನ್ನೂ ಓದಿ: Pune Horror: ಪುಣೆ ಅತ್ಯಾಚಾರ ಪ್ರಕರಣ; 75 ಗಂಟೆಗಳ ಬಳಿಕ ಆರೋಪಿ ಬಂಧನ
36 ವರ್ಷದ ದತ್ತಾತ್ರೇಯ ರಾಮದಾಸ್ ಗಡೆ ವಿರುದ್ಧ ಈ ಹಿಂದೆಯೇ ಹಲವು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಪುಣೆ ಮತ್ತು ನೆರೆಯ ಅಹಲ್ಯಾನಗರ ಜಿಲ್ಲೆಯಲ್ಲಿ ಕನಿಷ್ಠ ಆರು ಕಳ್ಳತನ, ದರೋಡೆ ಮತ್ತು ಸರಗಳ್ಳತನದ ಆರೋಪವಿದೆ. ಆತ 2019 ರಿಂದ ಜಾಮೀನಿನ ಮೇಲೆ ಹೊರಗಿದ್ದ. ಈತ ಫೆ. 25ರ ಬೆಳಗ್ಗೆ ಮಹಿಳೆ ಪ್ಲಾಟ್‌ಫಾರ್ಮ್‌ನಲ್ಲಿ ಪೈಥಾನ್‌ಗೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದಾಗ, ಒಬ್ಬ ವ್ಯಕ್ತಿ ಮಹಿಳೆ ಬಳಿಗೆ ಬಂದು ಸಹೋದರಿ ಎಂದು ಕರೆದು ಬಸ್ ಮತ್ತೊಂದು ಪ್ಲಾಟ್‌ಫಾರ್ಮ್‌ಗೆ ಬಂದಿದೆ ಎಂದು ಹೇಳಿದ್ದಾನೆ. ಆಕೆಯನ್ನು ನಿಲ್ದಾಣದ ಆವರಣದಲ್ಲಿ ಬೇರೆಡೆ ನಿಲ್ಲಿಸಿದ್ದ ಶಿವಶಾಹಿ ಎಸಿ ಬಸ್ಸಿನ ಬಳಿಗೆ ಕರೆದೊಯ್ದಿದ್ದಾನೆ. ನಂತರ ಬಸ್ಸಿನೊಳಗಿನ ದೀಪಗಳು ಉರಿಯದ ಕಾರಣ ಮೊದಲು ಬಸ್ ಹತ್ತಲು ಹಿಂಜರಿದಳು, ಆದರೆ ಆ ವ್ಯಕ್ತಿ ಅದು ಸರಿಯಾದ ವಾಹನ ಎಂದು ಮನವೊಲಿಸಿ ಒಳಗೆ ಹೋಗಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾನೆ.ಅಲ್ಲದೇ ಈ ಕೃತ್ಯದ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆಯೊಡ್ಡಿದ್ದಾನೆ. ಈ ಬಗ್ಗೆ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಳು.