ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Engineering student dies: ಡೆತ್‌ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ: ‘ಮುಂದಿನ ಜನ್ಮದಲ್ಲೂ ನಿಮ್ಮ ಮಗನಾಗಿಯೇ ಹುಟ್ಟುತ್ತೇನೆ’ ಎಂದು ಪೋಷಕರಿಗೆ ಭಾವುಕ ಸಂದೇಶ

ಚಿಂತಾಮಣಿ ತಾಲೂಕಿನ ಬತ್ತಲಹಳ್ಳಿ ಗ್ರಾಮದ ಶ್ರೀನಿವಾಸ್ ಮತ್ತು ಕುಸುಮ ದಂಪತಿಯ ಪುತ್ರ ಮಿಥುನ್ (21) ಮೃತ ವಿದ್ಯಾರ್ಥಿ. ನಗರದ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಬಿಇ ತೃತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ, ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ತೀವ್ರ ಆಘಾತ ಮೂಡಿಸಿದೆ.

ಡೆತ್‌ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

-

Profile
Ashok Nayak Nov 22, 2026 11:55 PM

ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಡಿಪೋ ಸಮೀಪದ ಮುಷ್ಟೂರು ರಸ್ತೆಯ ಬಾಡಿಗೆ ಮನೆಯಲ್ಲಿ ಡೆತ್‌ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಗರದ ಭಾನುವಾರ ನಡೆದಿದೆ.

ಚಿಂತಾಮಣಿ ತಾಲೂಕಿನ ಬತ್ತಲಹಳ್ಳಿ ಗ್ರಾಮದ ಶ್ರೀನಿವಾಸ್ ಮತ್ತು ಕುಸುಮ ದಂಪತಿಯ ಪುತ್ರ ಮಿಥುನ್ (21) ಮೃತ ವಿದ್ಯಾರ್ಥಿ. ನಗರದ ಎಸ್‌ಜೆಸಿಐಟಿ ಕಾಲೇಜಿನಲ್ಲಿ ಬಿಇ ತೃತೀಯ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ, ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಕುಟುಂಬಸ್ಥರು ಹಾಗೂ ಸ್ನೇಹಿತರಲ್ಲಿ ತೀವ್ರ ಆಘಾತ ಮೂಡಿಸಿದೆ.

ಇದನ್ನೂ ಓದಿ: Tigress Dashami dies: ಶಿವಮೊಗ್ಗ ಮೃಗಾಲಯದಲ್ಲಿ ಹುಲಿ ದಶಮಿ ಅನಾರೋಗ್ಯದಿಂದ ಸಾವು

ಮೃತ ವಿದ್ಯಾರ್ಥಿ ಬರೆದಿಟ್ಟಿದ್ದ ಎನ್ನಲಾದ ಡೆತ್‌ನೋಟ್‌ನಲ್ಲಿ, 'ಮಿಸ್ ಯು ಅಪ್ಪ, ಅಮ್ಮ. ಮುಂದಿನ ಜನ್ಮದಲ್ಲಿಯೂ ನಿಮ್ಮ ಮಗನಾಗಿಯೇ ಹುಟ್ಟುತ್ತೇನೆ' ಎಂದು ಪೋಷಕರಿಗೆ ಭಾವುಕ ಸಂದೇಶ ಬರೆದಿದ್ದಾನೆ ಎನ್ನಲಾಗಿದೆ. ಅಲ್ಲದೆ, ತನ್ನ ಪ್ರೇಯಸಿಯ ಹೆಸರನ್ನೂ ಉಲ್ಲೇಖಿಸಿದ್ದಾನೆ ಎಂದು ತಿಳಿದುಬಂದಿದೆ. ಆದರೆ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನೂ ತಿಳಿದು ಬಂದಿಲ್ಲ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಮಾಹಿತಿ ಪಡೆದ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ.

ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.