ಸ್ವಾತಂತ್ರ್ಯೋತ್ಸವ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Dharmasthala Case: ಧರ್ಮಸ್ಥಳ ಪ್ರಕರಣದ ಬಗ್ಗೆ ಸುಳ್ಳು ಮಾಹಿತಿ ನೀಡಿದ ವಕೀಲರ ಮೇಲೆ ಎಫ್‌ಐಆರ್

FIR: ಉತ್ಖನನದ ವೇಳೆ ಯಥೇಚ್ಛವಾಗಿ ಹೆಣ ದೊರೆತಿದ್ದಾಗಿ ಈ ವಕೀಲರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಹೀಗೆ ಸುಳ್ಳು ಮಾಹಿತಿ ನೀಡಿದ್ದಕ್ಕಾಗಿ ಅವರ ಮೇಲೆ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ರಘುರಾಮ ಶೆಟ್ಟಿ ಎಂಬವರು ದೂರು ನೀಡಿದ್ದಾರೆ.

ಧರ್ಮಸ್ಥಳ ಪ್ರಕರಣದ ಬಗ್ಗೆ ಸುಳ್ಳು ಮಾಹಿತಿ ನೀಡಿದ ವಕೀಲರ ಮೇಲೆ ಎಫ್‌ಐಆರ್

ಹರೀಶ್‌ ಕೇರ ಹರೀಶ್‌ ಕೇರ Aug 23, 2025 6:33 AM

ಮಂಗಳೂರು: ಧರ್ಮಸ್ಥಳದಲ್ಲಿ (Dharmasthala‌ case) ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (SIT) ತನಿಖೆ ವಿಚಾರವಾಗಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ವಕೀಲ ಮಂಜುನಾಥ್ ಅವರ ವಿರುದ್ಧ ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ (Belthangady) ಎಫ್ಐಆರ್‌ (FIR) ದಾಖಲಾಗಿದೆ. ಧರ್ಮಸ್ಥಳ ನಿವಾಸಿ ರಘುರಾಮ ಶೆಟ್ಟಿ ನೀಡಿದ ದೂರು ಆಧರಿಸಿ ಎಫ್​ಐಆರ್ ದಾಖಲಾಗಿದೆ. ಧರ್ಮಸ್ಥಳದಲ್ಲಿ ಯಥೇಚ್ಛವಾಗಿ ಹೆಣ ಹೂತಿದ್ದಾಗಿ ವಕೀಲ ಮಂಜುನಾಥ್​ ಜುಲೈ 30 ರಂದು ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು.

ವಕೀಲ ಮಂಜುನಾಥ್​ ಹೇಳಿದ್ದೇನು?

ಪಾಯಿಂಟ್ ನಂಬರ್ 1ರಲ್ಲಿ 2 ಹೆಣ, ಪಾಯಿಂಟ್ ನಂ 2, 3ರಲ್ಲಿ ತಲಾ 2 ಹೆಣ‌, ಪಾಯಿಂಟ್ ನಂಬರ್‌ 4 ಮತ್ತು 5ರಲ್ಲಿ ತಲಾ 6 ಹೆಣ, ಪಾಯಿಂಟ್ ನಂಬರ್​ 6, 7ರಲ್ಲಿ ತಲಾ 8 ಹೆಣ, ಪಾಯಿಂಟ್​ ನಂಬರ್ 9ರಲ್ಲಿ 6-7 ಹೆಣ, ಪಾಯಿಂಟ್ ನಂಬರ್ 10ರಲ್ಲಿ 3, 11ರಲ್ಲಿ 9 ಹೆಣ, ಪಾಯಿಂಟ್ ನಂಬರ್​ ​12ರಲ್ಲಿ 4-5 ಹೆಣ ಪಾಯಿಂಟ್ ನಂ 13ರಲ್ಲಿ ಯಥೇಚ್ಛವಾಗಿ ಹೆಣ ಹೂತಿದ್ದಾಗಿ ವಕೀಲ ಮಂಜುನಾಥ್ ಮಾಧ್ಯಮ ಪ್ರಕಟಣೆ ಹೊರಡಿಸಿದ್ದರು. ಈ ಸಂಬಂಧ ರಘುರಾಮ ಶೆಟ್ಟಿ ಅವರು ಬೆಳ್ತಂಗಡಿ ಪೊಲೀಸ್​ ಠಾಣೆಯಲ್ಲಿ ದೂರು ನೀಡಿದ್ದರು. ದೂರು ಆಧರಿಸಿ, ಬಿಎನ್​ಎಸ್​ ಕಾಯ್ದೆ 353(1)ಬಿ, 353(2)ರ ಅಡಿ ಎಫ್ಐಆರ್‌ ದಾಖಲಾಗಿದೆ.

ಉತ್ಖನನ ಕಾರ್ಯ ಸದ್ಯಕ್ಕೆ ಸ್ಥಗಿತಗೊಂಡಿದೆ. ಶೋಧ ಕಾರ್ಯಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ. ಆದರೆ, ಎಸ್ಐಟಿ ತನಿಖೆ ನಿಂತಿಲ್ಲ. ಅನಾಮಿಕ ದೂರುದಾರನನ್ನು ಬೆಳ್ತಂಗಡಿ ಎಸ್‌ಐಟಿ ಕಚೇರಿಯಲ್ಲಿ ತೀವ್ರ ವಿಚಾರಣೆಗೊಳಪಡಿಸಲಾಗಿದೆ. ಮತ್ತೊಬ್ಬ ದೂರುದಾರ ಜಯಂತ್ ಕೂಡಾ ಎಸ್ಐಟಿ ಕಚೇರಿಗೆ ಬಂದಿದ್ದಾರೆ.

ಇದನ್ನೂ ಓದಿ: Dharmasthala Case: ಅನನ್ಯ ಭಟ್‌ ಎಂಬ ಮಗಳೇ ಇರಲಿಲ್ಲ, ನಾನು ಹೇಳಿದ್ದೆಲ್ಲಾ ಸುಳ್ಳು: ಸುಜಾತ ಭಟ್‌