ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮೋದಿ ರ‍್ಯಾಲಿಗೆ ಹೋಗುತ್ತಿದ್ದಾಗ ಅಪಘಾತ: ನಾಲ್ವರು ಬಿಜೆಪಿ ಕಾರ್ಯಕರ್ತರ ಸಾವು

ಪಶ್ಚಿಮ ಬಂಗಾಳದಲ್ಲಿ ಮೋದಿ ರ‍್ಯಾಲಿಗೆ ಹೋಗುತ್ತಿದ್ದಾಗ ರೈಲು ಡಿಕ್ಕಿ ಹೊಡೆದು ನಾಲ್ವರು ಬಿಜೆಪಿ ಕಾರ್ಯಕರ್ತರು ಸಾವನ್ನಪ್ಪಿದ ಘಟನೆ ಮುರ್ಷಿದಾಬಾದ್‌ನಲ್ಲಿ ನಡೆದಿದೆ. ದಟ್ಟವಾದ ಮಂಜಿನ ಕಾರಣದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಬಿಜೆಪಿ ಕಾರ್ಯಕರ್ತರ ಸಾವಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ.

ಅಪಘಾತ: ನಾಲ್ವರು ಬಿಜೆಪಿ ಕಾರ್ಯಕರ್ತರು ಸಾವು

(ಸಂಗ್ರಹ ಚಿತ್ರ) -

ಮುರ್ಷಿದಾಬಾದ್‌: ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi) ಅವರ ರ‍್ಯಾಲಿಯಲ್ಲಿ (Modis rally) ಪಾಲ್ಗೊಳ್ಳಲು ತೆರಳುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರು (BJP workers) ಅಪಘಾತದಲ್ಲಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ. ದಟ್ಟವಾದ ಮಂಜಿನ ಕಾರಣ ರಣಘಾಟ್‌ನಲ್ಲಿ ಆಯೋಜಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರ ರ‍್ಯಾಲಿಯಲ್ಲಿ ಭಾಗವಹಿಸಲು ತೆರಳುತ್ತಿದಾಗ ಮುರ್ಷಿದಾಬಾದ್‌ನಲ್ಲಿ (murshidabad) ರೈಲು ಡಿಕ್ಕಿ ಹೊಡೆದು ನಾಲ್ವರು ಸಾವನ್ನಪ್ಪಿದ್ದಾರೆ. ಇವರಿಗೆ ವರ್ಚುವಲ್ ಭಾಷಣದಲ್ಲಿ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ರ‍್ಯಾಲಿಯಲ್ಲಿ ಭಾಗವಹಿಸಲು ಪ್ರಯಾಣಿಸುತ್ತಿದ್ದ ನಾಲ್ವರು ಬಿಜೆಪಿ ಕಾರ್ಯಕರ್ತರು ರೈಲು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಪೂರ್ವ ರೈಲ್ವೆಯ ಸೀಲ್ಡಾ-ಕೃಷ್ಣನಗರ ವಿಭಾಗದ ತಾಹೆರ್‌ಪುರ ಮತ್ತು ಬದ್ಕುಲ್ಲಾ ರೈಲು ನಿಲ್ದಾಣಗಳ ನಡುವೆ ಈ ಅಪಘಾತ ಸಂಭವಿಸಿದೆ. ರಾಮಪ್ರಸಾದ್ ಘೋಷ್ (72), ಮುಕ್ತಿಪಾದ ಸೂತ್ರಧರ್ (63), ಗೋಪಿನಾಥ್ ದಾಸ್ (38) ಮತ್ತು ಭೈರವ ಘೋಷ್ ಮೃತರು.

ಗುವಾಹಟಿಯಲ್ಲಿ ದೇಶದ ಮೊದಲ ಬಿದಿರಿನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಿ ಮೋದಿ

ಮುರ್ಷಿದಾಬಾದ್‌ನ ಬಿಜೆಪಿ ಬೆಂಬಲಿಗರ ಗುಂಪು ಶುಕ್ರವಾರ ರಾತ್ರಿಯೇ ರ‍್ಯಾಲಿಯಲ್ಲಿ ಭಾಗವಹಿಸಲು ಬರ್ವಾನ್ ಬ್ಲಾಕ್‌ನಿಂದ ಬಸ್‌ನಲ್ಲಿ ತೆರಳಿದ್ದರು. ಶನಿವಾರ ಮುಂಜಾನೆ ವಿಶ್ರಾಂತಿ ಪಡೆಯಲು ರೈಲ್ವೆ ಹಳಿಗಳ ಬಳಿ ನಿಂತಿದ್ದು, ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆಯ ಕಾರಣದಿಂದ ಎರಡೂ ದಿಕ್ಕುಗಳಿಂದ ಬರುತ್ತಿದ್ದ ರೈಲುಗಳು ಅವರ ಮೇಲೆ ಸಾಗಿದವು. ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವ ಚಿಕಿತ್ಸೆಗಾಗಿ ಕೋಲ್ಕತ್ತಾಗೆ ಕರೆದುಕೊಂಡು ಹೋಗುತ್ತಿದ್ದಾಗ ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆಯಲ್ಲಿ ಇನ್ನಿಬ್ಬರಿಗೆ ಗಾಯಗಳಾಗಿದ್ದು, ಇವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಓರ್ವನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಪೂರ್ವ ರೈಲ್ವೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ದುರಂತದಲ್ಲಿ ಮೃತಪಟ್ಟವರಿಗೆ ಪರಿಹಾರ ನೀಡುವಂತೆ ಕುಟುಂಬಸ್ಥರು ಆಡಳಿತಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ದೇಶವನ್ನೇ ನಡುಗಿಸುತ್ತೇನೆ; ಭಾರತ ವಿರೋಧಿ ನಾಯಕ ಉಸ್ಮಾನ್‌ ಶರೀಫ್‌ ಹತ್ಯೆಗೂ ಮುನ್ನ ಪ್ರೇಯಸಿ ಬಳಿ ಹೇಳಿದ್ದ ಆರೋಪಿ ಫೈಸಲ್‌ ಕರಿಂ

ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಬರುತ್ತಿದ್ದ ಪ್ರಧಾನಿ ಮೋದಿ ಅವರ ಹೆಲಿಕಾಪ್ಟರ್ ದಟ್ಟವಾದ ಮಂಜು ಮತ್ತು ಕಡಿಮೆ ಗೋಚರತೆಯ ಕಾರಣದಿಂದಾಗಿ ತಾಹೆರ್‌ಪುರದಲ್ಲಿ ಇಳಿಯಲು ಸಾಧ್ಯವಾಗಲಿಲ್ಲ. ಹೀಗಾಗಿ ಅವರು ಕೋಲ್ಕತ್ತಾ ವಿಮಾನ ನಿಲ್ದಾಣಕ್ಕೆ ಮರಳಿದರು. ಬಳಿಕ ವರ್ಚುವಲ್ ಭಾಷಣದಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ರೈಲು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಅವರಿಗಾಗಿ ನನ್ನ ಸಂತಾಪವಿದೆ ಮತ್ತು ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದ್ದಾರೆ.