ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಗುರುಗ್ರಾಮದಲ್ಲಿ ಗುಂಡಿನ ಚಕಮಕಿ: ನಾಲ್ವರು ದರೋಡೆಕೋರರ ಎನ್‌ಕೌಂಟರ್

ಗುರುಗ್ರಾಮದಲ್ಲಿ ಪೊಲೀಸರು ಮತ್ತು ದರೋಡೆಕೋರರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ದರೋಡೆಕೋರರು ಸಾವನ್ನಪ್ಪಿದ್ದಾರೆ. ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಓರ್ವ ಗಾಯಾಳು ದರೋಡೆಕೋರನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಗುರುಗ್ರಾಮದ ಸುಶಾಂತ್ ಲೋಕ್ ಫೇಸ್- 2 ಪ್ರದೇಶದಲ್ಲಿ ಗುರುವಾರ ರಾತ್ರಿ 9:30ರ ಸುಮಾರಿಗೆ ಈ ಘಟನೆ ನಡೆದಿದೆ.

ಗುರುಗ್ರಾಮ: ನಾಲ್ವರು ದರೋಡೆಕೋರ ಎನ್‌ಕೌಂಟರ್

ಸಂಗ್ರಹ ಚಿತ್ರ -

ಗುರುಗ್ರಾಮ: ಶಸ್ತ್ರಸಜ್ಜಿತ ದರೋಡೆಕೋರರು (Gangsters) ಮತ್ತು ಪೋಲೀಸರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ (firing) ನಾಲ್ವರು ದರೋಡೆಕೋರರು ಸಾವನ್ನಪ್ಪಿರುವ ಘಟನೆ ಗುರುಗ್ರಾಮದಲ್ಲಿ (gurugram encounter) ಗುರುವಾರ ನಡೆದಿದೆ. ಈ ಸಂದರ್ಭದಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಗುರುಗ್ರಾಮದ ಸುಶಾಂತ್ ಲೋಕ್ ಫೇಸ್- 2 ಪ್ರದೇಶದಲ್ಲಿ ಗುರುವಾರ ರಾತ್ರಿ 9.30ರ ಸುಮಾರಿಗೆ ಕಾರಿನಲ್ಲಿ ಶಸ್ತ್ರಸಜ್ಜಿತ ವ್ಯಕ್ತಿಗಳು ಸಾಗುತ್ತಿದ್ದಾರೆ ಎನ್ನುವ ಮಾಹಿತಿ ಮೇರೆಗೆ ಪೊಲೀಸರು ವಾಹನವನ್ನು ತಡೆದಿದ್ದು, ಬಳಿಕ ಗುಂಡಿನ ಚಕಮಕಿ (gurugram crime) ನಡೆದಿದೆ.

ಗುರುಗ್ರಾಮದಲ್ಲಿ ಗುರುವಾರ ದರೋಡೆಕೋರರ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಸುಮಾರು 60 ಸುತ್ತು ಗುಂಡಿನ ಚಕಮಕಿ ನಡೆದಿದೆ. ಘಟನೆಯಲ್ಲಿ ನಾಲ್ವರು ದರೋಡೆಕೋರರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಲಾಗುತ್ತಿದೆ ಎನ್ನುವ ಮಾಹಿತಿ ಮೇರೆಗೆ ಹಲವು ಅಪರಾಧ ವಿಭಾಗದ ತಂಡಗಳು ಸ್ಥಳಕ್ಕೆ ಧಾವಿಸಿ ವಾಹನವನ್ನು ತಡೆದು ಅಪರಾಧಿಗಳಿಗೆ ಶರಣಾಗುವಂತೆ ಕೇಳಿಕೊಂಡಿದೆ. ಆದರೆ ಅವರು ಪೋಲೀಸರ ಮೇಲೆ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದ್ದು, ಇದಕ್ಕೆ ಪ್ರತಿಯಾಗಿ ಪೊಲೀಸರು ಕೂಡ ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದ್ದಾರೆ.

ಶಿಶು ಮಂದಿರ- ಆನ್ ಸಹಯೋಗ: ಪರಿಸರಸ್ನೇಹಿ ಸಾರಿಗೆ ಮೂಲಕ ಮಹಿಳೆಯರ ಆರ್ಥಿಕ ಸ್ವಾವಲಂಬನೆಗೆ ಹೊಸ ಬಲ

ಈ ಕುರಿತು ಮಾಹಿತಿ ನೀಡಿದ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತರು, ಕಾರಿನಲ್ಲಿ ಬಂದಿದ್ದ ಶಸ್ತ್ರಸಜ್ಜಿತ ಅಪರಾಧಿಗಳು ಉದ್ಯಮಿಯೊಬ್ಬರ ಮನೆ ಮೇಲೆ ಗುಂಡು ಹಾರಿಸಿದ್ದರು. ಇದಕ್ಕೂ ಮೊದಲು ವಿದೇಶದಿಂದ ಕಾರ್ಯಾಚರಣೆ ನಡೆಸುತ್ತಿರುವ ದರೋಡೆಕೋರನೊಬ್ಬ ಉದ್ಯಮಿಗೆ ಬೆದರಿಕೆಯೊಡ್ಡಿದ್ದಾನೆ ಎನ್ನಲಾಗಿದೆ. ಮಾಹಿತಿ ತಿಳಿದ ತಕ್ಷಣವೇ ಅಪರಾಧ ವಿಭಾಗದ ತಂಡಗಳು ಸ್ಥಳಕ್ಕೆ ಧಾವಿಸಿದೆ. ಪೊಲೀಸ್ ತಂಡಗಳು ಅವರಿಗೆ ಶರಣಾಗಲು ಹೇಳಿದರೂ ಅವರು ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಅವರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ ಎಂದರು.

ಪೊಲೀಸರು ಅವರನ್ನು ಬಂಧಿಸಲು ಪ್ರತಿ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಐವರು ಗಾಯಗೊಂಡಿದ್ದಾರೆ. ಇದರಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇನ್ನೋರ್ವ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಇವರು ವಿದೇಶಿ ಮೂಲದ ದೀಪಕ್ ನಂದಲ್ ಗ್ಯಾಂಗ್‌ನ ಸದಸ್ಯರು ಎಂದು ಗುರುತಿಸಲಾಗಿದೆ ಎಂದು ತಿಳಿಸಿದರು.

ಗಾಯಗೊಂಡಿರುವ ಆರೋಪಿಯನ್ನು ಖಾಸಗಿ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎನ್‌ಕೌಂಟರ್‌ನಲ್ಲಿ ಮೂವರು ಗುರುಗ್ರಾಮ ಪೊಲೀಸ್ ಸಿಬ್ಬಂದಿಗೂ ಗಾಯವಾಗಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದರು.

ಮಹಿಳೆಯೊಂದಿಗೆ TMC ನಾಯಕನ ಪುತ್ರನ ಅನೈತಿಕ ಸಂಬಂಧ: ಮನೆಯನ್ನೇ ಧ್ವಂಸ ಮಾಡಿದ ಜನರು!

ಸ್ಥಳಕ್ಕೆ ಅಪರಾಧ ಘಟಕ, ವಿಧಿವಿಜ್ಞಾನ ಪ್ರಯೋಗಾಲಯ ಮತ್ತು ಇತರ ತನಿಖಾ ಘಟಕಗಳ ತಂಡಗಳು ಭೇಟಿ ನೀಡಿ ಹಲವು ಪುರಾವೆಗಳನ್ನು ಸಂಗ್ರಹಿಸಿವೆ. ಮೃತ ಮತ್ತು ಗಾಯಗೊಂಡ ಆರೋಪಿಗಳ ಗುರುತು ಪತ್ತೆ ಕಾರ್ಯ ನಡೆಸಲಾಗುತ್ತಿದೆ. ಅಪರಾಧಿಗಳಿಂದ ಐದು ವಿದೇಶಿ ನಿರ್ಮಿತ ಪಿಸ್ತೂಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದರು.