Puneeth Kerehalli: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ ಬೆದರಿಕೆ ಕರೆ
Death threat: ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದ್ದು, ಎಫ್ ಐಆರ್ ದಾಖಲಾಗಿದೆ. ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ವಾಟ್ಸಪ್ ಕರೆ ಮಾಡಿದ ಕಿಡಿಗೇಡಿಗಳು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನನ್ನು ಮುಗಿಸುತ್ತೇವೆ ಎಂದು ಬೆದರಿಕೆ ಕರೆ ಬಂದಿದ್ದು, ಕೋರ್ಟ್ ಅನುಮತಿ ಪಡೆದು ಅಕ್ರಮ ಖಾನ್ ಎಂಬುವರ ವಿರುದ್ಧ ಎಫ್ ಐಆರ್ ದಾಖಲಾಗಿದೆ.


ಮೈಸೂರು: ಮಂಗಳೂರಿನಲ್ಲಿ ಕೆಲವು ದಿನಗಳ ಹಿಂದೆ ಹಿಂದೂ ಸಂಘಟನೆ ಮುಖಂಡ ಸುಹಾಸ್ ಶೆಟ್ಟಿ ಬರ್ಬರ ಹತ್ಯೆ ಪ್ರಕರಣದ ಬೆನ್ನಲ್ಲೇ ಇದೀಗ ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಗೂ(Puneeth Kerehalli) ಕಿಡಿಗೇಡಿಗಳು ಜೀವ ಬೆದರಿಕೆವೊಡ್ಡಿದ್ದಾರೆ. ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ ಎಂದು ಹಿಂದೂ ಪರ ಮುಖಂಡ ಪುನೀತ್ ಕೆರೆಹಳ್ಳಿಗೆ ಬೆದರಿಕೆ ಕರೆ ಬಂದಿದ್ದು, ಎಫ್ ಐಆರ್ ದಾಖಲಾಗಿದೆ.
ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಎಫ್ ಐಆರ್ ದಾಖಲಾಗಿದ್ದು, ವಾಟ್ಸಪ್ ಕರೆ ಮಾಡಿದ ಕಿಡಿಗೇಡಿಗಳು ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನನ್ನು ಮುಗಿಸುತ್ತೇವೆ ಎಂದು ಬೆದರಿಕೆ ಕರೆ ಬಂದಿದ್ದು, ಕೋರ್ಟ್ ಅನುಮತಿ ಪಡೆದು ಅಕ್ರಮ ಖಾನ್ ಎಂಬುವರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಇದ್ರಿಷ್ ಪಾಷಾ ಸಾವಿಗೆ ಪ್ರತೀಕಾರವಾಗಿ ನಿನ್ನ ಮುಗಿಸುತ್ತೇವೆ, Next You ಎಂದು ಬೆದರಿಕೆ ಹಾಕಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮಂಗಳೂರಿನಲ್ಲೂ ಹಿಂದೂ ಮುಖಂಡರಿಗೆ ಜೀವ ಬೆದರಿಕೆ
ಹಿಂದೂ ಕಾರ್ಯಕರ್ತ, ರೌಡಿ ಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಬೆನ್ನಲ್ಲೇ ಇನ್ನಿಬ್ಬರು ಹಿಂದೂ ಸಂಘಟನೆ ಮುಖಂಡರಿಗೆ ಜೀವ ಬೆದರಿಕೆಗಳು ಬಂದಿವೆ ಎಂಬ ಮಾಹಿತಿ ಲಭ್ಯವಾಗಿದೆ. ಸುಹಾಸ್ ಶೆಟ್ಟಿ ಹತ್ಯೆಯಿಂದ ದಕ್ಷಿಣ ಕನ್ನಡ ಜಿಲ್ಲೆ ಉದ್ವಿಗ್ನಗೊಂಡಿದ್ದು, ಇದರ ಹಿಂದೆ ಪಿಎಫ್‌ಐ ಇದೆ ಎಂದು ಬಿಜೆಪಿಯವರು ಆರೋಪಿಸಿದ್ದರು. ಆದರೆ 8 ಆರೋಪಿಗಳ ಬಂಧನದಿಂದ, ಇದರಲ್ಲಿ ಇಬ್ಬರು ಹಿಂದೂ ಯುವಕರೂ ಇರುವುದು ಗೊತ್ತಾಗಿದೆ. ಇದರ ನಡುವೆ, ಇನ್ನಿಬ್ಬರು ಹಿಂದೂ ಮುಖಂಡರಿಗೆ ಇದೀಗ ಜೀವ ಬೆದರಿಕೆ ಬಂದಿದೆ ಎನ್ನಲಾಗಿದೆ.
ಹಿಂದೂ ಮುಖಂಡ ಭರತ್ ಕುಮ್ಡೇಲ್ ಹಾಗೂ ಶರಣ್ ಪಂಪ್‌ವೆಲ್ ಹತ್ಯೆಗೆ ಸ್ಕೆಚ್ ಹಾಕಲಾಗಿದೆ; ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಲಾಗಿದೆ ಎಂದು ಹಿಂದೂ ಸಂಘಟನೆಗಳು ಆರೋಪಿಸಿವೆ. ಭಜರಂಗದಳ ಮುಖಂಡ ಭರತ್ ಕುಮ್ಡೇಲ್ ಅನ್ನು 5/5/2025ರ ರಾತ್ರಿ 9:30ಕ್ಕೆ ಅವರ ಸ್ಥಳದಲ್ಲೇ ಕೊಲೆ ಮಾಡುವುದಾಗಿ ಬರೆದಿದ್ದಾರೆ. ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕೂಡ ಬೆದರಿಕೆ ಹಾಕಲಾಗಿದ್ದು, ಮುಂದಿನ ಟಾರ್ಗೆಟ್ ಶರಣ್ ಪಂಪ್‌ವೆಲ್, ಹತ್ಯೆಯಾಗಲು ತಯಾರಾಗು ಎಂದು ಬರೆಯಲಾಗಿದೆ. ಸುಹಾಸ್ ಶೆಟ್ಟಿಯ ಫೋಟೋದಲ್ಲಿ ರೈಟ್ ಚಿಹ್ನೆ ಹಾಕಿ ವಿಕೃತಿ ಮೆರೆದಿದ್ದಾರೆ. ಈ ಪೋಸ್ಟ್ ವೈರಲ್ ಆಗುತ್ತಿದೆ.
ಈ ಸುದ್ದಿಯನ್ನೂ ಓದಿ: MP Murder Case: ಅತ್ತಿಗೆ ಮೈದುನನ ಲವ್ವಿ-ಡವ್ವಿಗೆ ಪತಿ ಬಲಿ; ಕ್ರೈಂ ಪೆಟ್ರೋಲ್ ಶೋ ನೋಡಿ ಕೊಲೆಗೆ ಪ್ಲ್ಯಾನ್!
ಭಜರಂಗದಳ ಮುಖಂಡ ಭರತ್ ಕುಮ್ಡೇಲು, SDPI ಮುಖಂಡ ಅಶ್ರಫ್ ಕಲಾಯಿ ಹತ್ಯೆಯ ಪ್ರಮುಖ ಆರೋಪಿಯಾಗಿದ್ದಾನೆ. ಅಶ್ರಫ್ ಕಲಾಯಿ ಎಂಬಾತ 2017ರ ಜೂನ್ 21ರಂದು ಹತ್ಯೆಯಾಗಿದ್ದ. ಈತ ಬಂಟ್ವಾಳದ ಬೆಂಜನಪದವು ಎಂಬಲ್ಲಿ ಬರ್ಬರವಾಗಿ ಹತ್ಯೆಗೀಡಾಗಿದ್ದ. SDPIನಲ್ಲಿ ಮುಂಚೂಣಿಯಲ್ಲಿದ್ದ ನಾಯಕ ಅಶ್ರಫ್ ಕಲಾಯಿ ಹತ್ಯೆ ಬಳಿಕ ಪ್ರತೀಕಾರವಾಗಿ ಬಂಟ್ವಾಳದ ಶರತ್ ಮಡಿವಾಳ ಹತ್ಯೆಯಾಗಿತ್ತು.
ಭರತ್ ಕುಮ್ಡೇಲ್ ತನಗೆ ಬಂದಿರುವ ಜೀವ ಬೆದರಿಕೆ ಬಗ್ಗೆ ಮಾತಾಡಿದ್ದು, ಇದಕ್ಕೆಲ್ಲಾ ನಾವು ತಲೆಕೆಡಿಸಿಕೊಳ್ಳುವುದಿಲ್ಲ. ಪ್ರತೀಕಾರ ಮಾಡಲು ಬಂದರೆ, ನಾವು ಹೆದರಿಕೊಂಡು ಕೂರುವುದಿಲ್ಲ. ಬೇರೆ ಎಲ್ಲರಿಗೂ ಬೆದರಿಕೆ ಹಾಕಿದ್ದು, ನಮಗೆ ಬೇಡ. ನಾವು ಎಲ್ಲರಂತೆ ಭಾಷಣ ಮಾಡಿ ಲೀಡರ್ ಆಗಿಲ್ಲ, ಪ್ರೆಸ್ ಮೀಟ್‌ನಲ್ಲಿ ಕೂತು ಪಬ್ಲಿಸಿಟಿ ತೆಗೊಂಡವರಲ್ಲ. ನಮಗೂ ಕೆಲಸ ಮಾಡಲು ಗೊತ್ತಿದೆ. ಪ್ರತೀಕಾರ ಮಾಡುವವರು ಎದುರು ಬಂದ್ರೆ, ನಾವು ಎದುರಿಸುತ್ತೇವೆ ಎಂದಿದ್ದಾರೆ. ಶರಣ್ ಪಂಪ್‌ವೆಲ್ ಹಾಗೂ ಭರತ್ ಕುಮ್ಡೇಲು ಇಬ್ಬರ ಮೇಲೂ ಅನೇಕ ಪೊಲೀಸ್ ಪ್ರಕರಣಗಳು ದಾಖಲಾಗಿವೆ.