ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಕ್ರಮ ಸಂಬಂಧದ ಕುರಿತು ಪ್ರಶ್ನಿಸಿದ ಪತ್ನಿಯನ್ನೇ ರಾಡ್‌ನಿಂದ ಹೊಡೆದು ಕೊಂದ ಪತಿ

ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಂದ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬೀದರ್ ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಕೊಲೆಯಾದ ದುರ್ದೈವಿ ಪತ್ನಿ.

ಪತ್ನಿಯನ್ನೇ ರಾಡ್‌ನಿಂದ ಹೊಡೆದು ಕೊಂದ ಪತಿ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jun 30, 2026 9:30 AM

ಬೀದರ್:‌ ಅನೈತಿಕ ಸಂಬಂಧ ಇಟ್ಟುಕೊಂಡಿದ್ದನ್ನು ಪ್ರಶ್ನಿಸಿದ್ದಕ್ಕೆ ಪತಿಯೇ ಪತ್ನಿಯನ್ನು ಕೊಂದ ಘಟನೆ ಬೀದರ್ (Bidar) ಜಿಲ್ಲೆಯ ಭಾಲ್ಕಿ ತಾಲೂಕಿನ ಗಾಯಮುಖ ದೇವಸ್ಥಾನದ ಬಳಿಯ ಅರಣ್ಯ ಪ್ರದೇಶದಲ್ಲಿ ನಡೆದಿದೆ. ಬೀದರ್ (Murder Case) ತಾಲೂಕಿನ ಹೊನ್ನಿಕೇರಿ ಗ್ರಾಮದ ಸಂಜನಾ (26) ಕೊಲೆಯಾದ ದುರ್ದೈವಿ ಪತ್ನಿ. ಆರೋಪಿ ಪತಿ ಭಗವತ್ ಜ್ಞಾನೇಶ್ವರ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.

ಸಂಜನಾ ಹಾಗೂ ಭಗವತ್ 2 ವರ್ಷದ ಹಿಂದೆ ಮದುವೆಯಾಗಿದ್ದರು. ಈ ವೇಳೆ ಪತಿ ಪಕ್ಕದ ಮನೆಯ ಹುಡುಗಿ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದ. ಇದನ್ನು ಸಂಜನಾ ಪ್ರಶ್ನೆ ಮಾಡಿದ್ದಾಳೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಜಗಳ ಉಂಟಾಗಿದೆ. ಬಳಿಕ ಹೊನ್ನಿಕೇರಿ ಅರಣ್ಯಕ್ಕೆ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾನೆ. ಅಲ್ಲಿ ಕಬ್ಬಿಣದ ರಾಡ್‌ನಿಂದ ತಲೆ, ಕತ್ತಿಗೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ.

ಭೀಕರವಾಗಿ ಗಾಯಗೊಂಡಿದ್ದ ಪತ್ನಿಯನ್ನು ಮಹಾರಾಷ್ಟ್ರದ ಸೊಲ್ಲಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಬ್ರಿಮ್ಸ್ ಶವಾಗಾರದ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಧನ್ನೂರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

50 ವರ್ಷದ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪತ್ನಿಯೇ ಕತ್ತು ಹಿಸುಕಿ ಕೊಂದಿದ್ದಾಳೆ ಎಂಬ ಆಘಾತಕಾರಿ ಸುದ್ದಿ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ. ಮೃತ ನಿತ್ಯಾನಂದ ಕಾರು ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದು, ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದ ಪತ್ನಿ ಸುಶೀಲಾ ಜೊತೆ ವಾಸಿಸುತ್ತಿದ್ದರು. ಮದುವೆಯಾಗಿ 15 ವರ್ಷವಾಗಿದ್ದರೂ ದಂಪತಿಗೆ ಮಕ್ಕಳಿರಲಿಲ್ಲ.

ಅಪ್ರಾಪ್ತ ಬಾಲಕಿಯ ಅತ್ಯಾಚಾರ, ಕೊಲೆ: 65 ವರ್ಷದ ಅಪರಾಧಿಗೆ ಮರಣದಂಡನೆ; ಪ್ರಕರಣ ನಡೆದ 2 ತಿಂಗಳಿಗೆ ತೀರ್ಪು ಪ್ರಕರಣ

ಭಾನುವಾರ ರಾತ್ರಿ ಕುವೆಂಪುನಗರ ಪ್ರದೇಶದಲ್ಲಿ ಈ ಘಟನೆ ನಡೆದಿತ್ತು. ಸುಶೀಲಾ ಕುಡಿದ ಮತ್ತಿನಲ್ಲಿ ಮನೆಗೆ ಹಿಂದಿರುಗಿದ ನಂತರ ನಿದ್ದೆ ಮಾಡುತ್ತಿದ್ದ ತನ್ನ ಪತಿಯನ್ನು ಹಗ್ಗದಿಂದ ಕತ್ತು ಹಿಸುಕಿ ಕೊಂದಿದ್ದಳು. ಘಟನೆ ನಂತರ ಸುಶೀಲಾ ನಿತ್ಯಾನಂದನ ಹೃದಯಾಘಾತವಾಗಿದೆ ಎಂದು ಆತನ ಸಹೋದರನಿಗೆ ಹೇಳಿದ್ದಳು. ಅಂತ್ಯಕ್ರಿಯೆಗಾಗಿ ಮನೆಗೆ ಬಂದ ಸಹೋದರ ನಿತ್ಯಾನಂದನ ಕುತ್ತಿಗೆಯಲ್ಲಿ ಗಾಯವನ್ನು ಗಮನಿಸಿ ಅನುಮಾನಗೊಂಡರು, ನಂತರ ಅವರು ಪೊಲೀಸರಿಗೆ ಮಾಹಿತಿ ನೀಡಿದರು.