ಗೆಳತಿಯರೊಂದಿಗೆ ದೈಹಿಕ ಸಂಬಂಧ ಹೊಂದಲು ಒತ್ತಾಯ: ಪತ್ನಿ ವಿರುದ್ಧ ದೂರು ದಾಖಲಿಸಿದ ಪತಿ
ಲೈಂಗಿಕ, ಮಾನಸಿಕ ಕಿರುಕುಳ ನೀಡುತ್ತಿದ್ದ ಪತ್ನಿ ವಿರುದ್ಧ ಪತಿಯೊಬ್ಬ ದೂರು ದಾಖಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಈ ಪ್ರಕರಣದಲ್ಲಿ ಸ್ನೇಹಿತೆಯರೊಂದಿಗೆ ದೈಹಿಕ ಸಂಬಂಧ ನಡೆಸಲು ಪತಿಯನ್ನು ಒತ್ತಾಯಿಸಿದ್ದಾಳೆ. ಅಲ್ಲದೇ ಮದ್ಯ ಸೇವಿಸಿ ಬಂದು ಸಾಕಷ್ಟು ಕಿರುಕುಳ ನೀಡಿರುವುದಾಗಿ ದೂರಿನಲ್ಲಿ ತಿಳಿಸಲಾಗಿದೆ.
ಸಂಗ್ರಹ ಚಿತ್ರ -
ಬೆಂಗಳೂರು: ಪತಿಯಿಂದ ಪತ್ನಿಗೆ ಕಿರುಕುಳ (physical abuse) ಎನ್ನುವ ಸುದ್ದಿಗಳು ಆಗಾಗ್ಗೆ ಕೇಳಿ ಬರುತ್ತದೆ. ಆದರೆ ಬೆಂಗಳೂರಿನಲ್ಲಿ (bengaluru crime) ಈಗ ಪತಿಗೆ ಪತ್ನಿಯೇ ಕಿರುಕುಳ ನೀಡಿರುವ ಘಟನೆ ನಡೆದಿದೆ. ದೈಹಿಕ ಸಂಬಂಧಕ್ಕಾಗಿ ಬಲವಂತ, ಮಾನಸಿಕ ಕಿರುಕುಳ, ಸ್ನೇಹಿತೆಯರೊಂದಿಗೆ ಸಂಬಂಧ ಹೊಂದಲು ಒತ್ತಾಯಿಸುತ್ತಿದ್ದ ಪತ್ನಿ ವಿರುದ್ಧ ಪತಿಯೊಬ್ಬ ಬೆಂಗಳೂರಿನ (Bengaluru) ಅಮೃತಹಳ್ಳಿ ಠಾಣೆಗೆ ದೂರು ನೀಡಿದ್ದಾನೆ. ಮದುವೆಯಾದ ಆರಂಭದಲ್ಲಿ ಎಲ್ಲವೂ ಚೆನ್ನಾಗಿತ್ತು. ಆದರೆ ಬಳಿಕ ಪತ್ನಿಯಿಂದ ನಿರಂತರವಾಗಿ ಹಿಂಸೆ ಅನುಭವಿಸಿದ್ದೇನೆ ಎಂದು ಪತಿ ದೂರಿನಲ್ಲಿ ತಿಳಿಸಿದ್ದಾರೆ.
ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಈ ಘಟನೆಯಲ್ಲಿ ಪತ್ನಿಯೇ ಪತಿಗೆ ಲೈಂಗಿಕ ಮತ್ತು ಮಾನಸಿಕ ಹಿಂಸೆ ನೀಡಿದ್ದಾಳೆ. ಈ ಕುರಿತು ದೂರು ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಸಾಧು ವೇಷ ಧರಿಸಿ ಅಶ್ಲೀಲ ವರ್ತನೆ; ಮಹಿಳೆಯರಿಗೆ ಕಿರುಕುಳ ನೀಡಿದ ವ್ಯಕ್ತಿಗೆ ತಕ್ಕ ಶಾಸ್ತಿ
ದೂರಿನಲ್ಲಿ ಏನಿದೆ?
ವ್ಯಕ್ತಿಯೊಬ್ಬರು ನೀಡಿರುವ ದೂರಿನ ಪ್ರಕಾರ ಆತನ ಪತ್ನಿ ಕೇವಲ ತನ್ನೊಂದಿಗೆ ಮಾತ್ರವಲ್ಲ ಆಕೆಯ ಸ್ನೇಹಿತೆಯರೊಂದಿಗೂ ದೈಹಿಕ ಸಂಬಂಧ ಹೊಂದುವಂತೆ ಕಿರುಕುಳ ನೀಡುತ್ತಿದ್ದಳು. ಇದಕ್ಕೆ ಆತ ಒಪ್ಪದಿದ್ದಾಗ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡಲು ಪ್ರಾರಂಭಿಸಿದ್ದಾಳೆ. ಅಲ್ಲದೇ ಅಶ್ಲೀಲ ವಿಡಿಯೊಗಳನ್ನು ಪತಿಯ ಮೊಬೈಲ್ ಗೆ ಕಳುಹಿಸಿ ಅದನ್ನು ಸುಂದರ ನೆನಪು ಎಂದು ಹೇಳಿ ಹಂಚಿಕೊಳ್ಳುವಂತೆ ಒತ್ತಾಯಿಸುತ್ತಿದ್ದಳು. ಇದರಿಂದ ತಾನು ತೀವ್ರವಾಗಿ ನೊಂದಿರುವುದಾಗಿ ಹೇಳಿದ್ದಾನೆ.
ಮದುವೆಯಾದ ಆರಂಭದಲ್ಲಿ ಎಲ್ಲವೂ ಚೆನ್ನಾಗಿಯೇ ಇತ್ತು. ಆದರೆ ಕ್ರಮೇಣ ಆಕೆ ತನ್ನ ಹಳೆಯ ಸಂಬಂಧಗಳ ಬಗ್ಗೆ ಮಾತನಾಡಿ ಕಿರುಕುಳ ನೀಡಲು ಪ್ರಾರಂಭಿಸಿದಳು. ಪ್ರತಿದಿನ ಕುಡಿದು ಬಂದು ಗಲಾಟೆ ಮಾಡುತ್ತಿದ್ದಳು. ತಡರಾತ್ರಿವರೆಗೂ ಸ್ನೇಹಿತರ ಜೊತೆ ಸುತ್ತಾಡುತ್ತಿದ್ದಳು. ಅಕೆಗೆಂದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ನೀಡಿದ್ದು, ಅದನ್ನು ವಾಪಸ್ ಕೂಡ ನೀಡುತ್ತಿಲ್ಲ. ಹಲವು ಬಾರಿ ಕುಟುಂಬದ ಹಿರಿಯರ ಸಮ್ಮುಖದಲ್ಲಿ ರಾಜಿ ಪಂಚಾಯಿತಿ ನಡೆಸಲಾಯಿತು. ಆದರೂ ಆಕೆ ಸುಧಾರಣೆ ಮಾಡಿಕೊಳ್ಳುತ್ತಿಲ್ಲ ಎಂದು ಆತ ದೂರಿನಲ್ಲಿ ತಿಳಿಸಿದ್ದಾನೆ.
ಶಿವಮೊಗ್ಗದಲ್ಲಿ ಅನುಮಾನಾಸ್ಪದವಾಗಿ ಉಪನ್ಯಾಸಕ ಸಾವು; ಅಡಿಕೆ ತೋಟದಲ್ಲಿ ಶವಕ್ಕೆ ಬೆಂಕಿ!
ಕಿರುಕುಳ: ವ್ಯಕ್ತಿ ಆತ್ಮಹತ್ಯೆ
ಪತ್ನಿ ಮತ್ತು ಅತ್ತೆ-ಮಾವನ ಕಿರುಕುಳ ಮತ್ತು ಮಾನಸಿಕ ಹಿಂಸೆಯಿಂದ ಬೇಸೆತ್ತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಆತ್ಮಹತ್ಯೆಗೂ ಮುನ್ನ ವ್ಯಕ್ತಿ ತಾನು ಅನುಭವಿಸಿದ ಸಂಕಷ್ಟವನ್ನು ವಿಡಿಯೊ ಮಾಡಿ ಸ್ನೇಹಿತರಿಗೆ ಕಳುಹಿಸಿದ್ದಾನೆ. ಮೃತ ವ್ಯಕ್ತಿಯನ್ನು ಮೊಹಮ್ಮದ್ ಸಾದ್ ಆಸಿಫ್ ಸಯ್ಯದ್ (20) ಎಂದು ಗುರುತಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿ ಆಸೀಫ್ ಪತ್ನಿ ಸೇರಿದಂತೆ 7 ಜನರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಾಸಿಕ್ ಜಿಲ್ಲೆಯ ಮಾಲೆಗಾಂವ್ ಮೂಲದವನಾದ ಮೊಹಮ್ಮದ್ ಸಾದ್ ಆಸಿಫ್ ಸಯ್ಯದ್ ಪುಣೆಯ ಜಂಭುಲ್‌ವಾಡಿ ಪ್ರದೇಶದಲ್ಲಿ ವಾಸಿಸುತ್ತಿದ್ದನು. ಆತನೊಂದಿಗೆ ಪತ್ನಿ ಕರಿಮುನ್ನಿಶಾ ಅಲಿಯಾಸ್ ನಿಶಾ ಖಾನ್ ನಿರಂತರವಾಗಿ ಜಗಳವಾಡುತ್ತಿದ್ದಳು ಎನ್ನಲಾಗಿದೆ.
ಕರಿಮುನ್ನಿಶಾ ಅಲಿಯಾಸ್ ನಿಶಾ ಖಾನ್ ಸೇರಿದಂತೆ ಸರ್ವರ್ ಅಲಿಯಾಸ್ ಕೈಫ್ ಖಾನ್, ರೇಷ್ಮಾ ಕಮ್ರುಖಾನ್, ಶಮಾ ಜಾವೇದ್ ಶೇಖ್, ಜಾವೇದ್ ಶೇಖ್, ಅಥರ್ವ ಕೇಲ್ ಮತ್ತು ಇಶಿತಾ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.