ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Chinthamani Crime: ಮರೀನಾಯಕನಹಳ್ಳಿ ಗೇಟ್ ಬಳಿ ಅಕ್ರಮ ದಂಧೆಗೆ ಬ್ರೇಕ್: ಮೂವರ ವಿರುದ್ಧ ಪ್ರಕರಣ ದಾಖಲು!

ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಅಕ್ರಮ ದಂಧೆಕೋರರಿಗೆ ಪೆನಾಲ್ಟಿ ಹಾಕಿದ್ದಾರೆ. ಮರೀನಾಯಕನಹಳ್ಳಿ ಗೇಟ್ ಬಳಿಯ ಕಿರಾಣಿ ಅಂಗಡಿ ಯೊಂದರಲ್ಲಿ ಹಾಗೂ ಎರಡು ಮನೆಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಸಂಗ್ರಹಿಸಿ, ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣವೇ ಕಾರ್ಯ ಪ್ರವೃತ್ತರಾದ ಕೆಂಚಾರ್ಲಹಳ್ಳಿ ಪೊಲೀಸರು ನಿಗದಿತ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಕೆಂಚಾರ್ಲಹಳ್ಳಿ ಪೊಲೀಸರ ಭರ್ಜರಿ ಬೇಟೆ: ಅಕ್ರಮ ಮದ್ಯ ಮಾರಾಟಗಾರರು ಲಾಕ್!

-

Profile
Ashok Nayak May 22, 2026 8:50 PM

ಚಿಂತಾಮಣಿ: ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮದ್ಯ ಮಾರಾಟ ದಂಧೆಗೆ ಪೊಲೀಸರು ಬ್ರೇಕ್ ಹಾಕಿದ್ದಾರೆ. ಖಚಿತ ಮಾಹಿತಿ ಮೇರೆಗೆ, ಮರೀನಾಯಕನಹಳ್ಳಿ ಗೇಟ್ ಬಳಿ ಜಂಟಿ ದಾಳಿ ನಡೆಸಿರುವ ಪೊಲೀಸರು,ಭಾರಿ ಪ್ರಮಾಣದ ಅಕ್ರಮ ಮದ್ಯವನ್ನು ವಶ ಪಡಿಸಿಕೊಂಡು ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಚಿಂತಾಮಣಿ ತಾಲೂಕಿನ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಸಿಬ್ಬಂದಿ ಅಕ್ರಮ ದಂಧೆಕೋರರಿಗೆ ಪೆನಾಲ್ಟಿ ಹಾಕಿದ್ದಾರೆ. ಮರೀನಾಯಕನಹಳ್ಳಿ ಗೇಟ್ ಬಳಿಯ ಕಿರಾಣಿ ಅಂಗಡಿಯೊಂದರಲ್ಲಿ ಹಾಗೂ ಎರಡು ಮನೆಗಳಲ್ಲಿ ಕಾನೂನು ಬಾಹಿರವಾಗಿ ಮದ್ಯ ಸಂಗ್ರಹಿಸಿ, ಮಾರಾಟ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣವೇ ಕಾರ್ಯ ಪ್ರವೃತ್ತರಾದ ಕೆಂಚಾರ್ಲಹಳ್ಳಿ ಪೊಲೀಸರು ನಿಗದಿತ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Chinthamani Crime: ಗುರುಭವನದ ಬಳಿ ಯುವಕನ ಮೇಲೆ ಹಲ್ಲೆ: ಹಣಕ್ಕಾಗಿ ಬೆದರಿಕೆ, ಇಬ್ಬರು ವಶಕ್ಕೆ

ದಾಳಿಯ ವೇಳೆ ಒಟ್ಟು ಮೂರು ಪ್ರತ್ಯೇಕ ಪ್ರಕರಣಗಳಲ್ಲಿ ಭಾರಿ ಪ್ರಮಾಣದ ಮದ್ಯದ ಬಾಟಲಿ ಗಳನ್ನು ಜಪ್ತಿ ಮಾಡಲಾಗಿದೆ. ಮರೀನಾಯಕನಹಳ್ಳಿ ಗೇಟ್ ಬಳಿ ಚಿಲ್ಲರೆ ಅಂಗಡಿ ನಡೆಸುತ್ತಿದ್ದ ಕಲ್ಪನಾ(36)ಎಂಬಾಕೆಯ ಅಂಗಡಿಯ ಮೇಲೆ ದಾಳಿ ನಡೆಸಿ,ಸುಮಾರು 11 ಲೀಟರ್ ಅಕ್ರಮ ಮದ್ಯ ವನ್ನು ವಶಪಡಿಸಿಕೊಳ್ಳಲಾಗಿದೆ.

ಇದೇ ಗ್ರಾಮದ ರುಕ್ಮಣಮ್ಮ (58 ವರ್ಷ)ಎಂಬುವವರ ಮನೆಯ ಮೇಲೆ ದಾಳಿ ನಡೆಸಿ, 6 ಲೀಟರ್ 840 ಮಿ.ಲೀ. ಮದ್ಯವನ್ನು ಜಪ್ತಿ ಮಾಡಲಾಗಿದೆ.

crime 22

ವೆಂಕಟಶಿವಾರೆಡ್ಡಿ(44 ವರ್ಷ) ಎಂಬುವವರ ನಿವಾಸದ ಮೇಲೆ ದಾಳಿ ನಡೆಸಿ, 3 ಲೀಟರ್ 330 ಮಿ.ಲೀ. ಕಾನೂನು ಬಾಹಿರ ಮದ್ಯವನ್ನು ವಶಕ್ಕೆ ಪಡೆಯಲಾಗಿದೆ.

ಸದ್ಯ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದ್ದು, ವಶಪಡಿಸಿಕೊಂಡ ಕ್ರಮ ಕೈಗೊಳ್ಳಲಾಗಿದೆ. ಪೊಲೀಸರ ಈ ದಿಢೀರ್ ಕಾರ್ಯಾಚರಣೆಯಿಂದಾಗಿ ತಾಲೂಕಿನ ಗಡಿ ಭಾಗಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವ ದಂಧೆಕೋರರಲ್ಲಿ ನಡುಕ ಶುರುವಾಗಿದೆ.