ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಮದುವೆ ಭರವಸೆ ನೀಡಿ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ; ಕೊನೆಗೂ ಇನ್‌ಫ್ಲುಯೆನ್ಸರ್‌ ಪೊಲೀಸ್‌ ಬಲೆಗೆ

Influencer arrested: ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿದ ನಂತರ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ ಸಾಮಾಜಿಕ ಮಾಧ್ಯಮ ಇನ್‌ಫ್ಲುಯೆನ್ಸರ್‌ನನ್ನು ಬಂಧಿಸಲಾಗಿದೆ. ಬಂಧಿತನನ್ನು ತ್ರಿಶೂರ್ ನಿವಾಸಿ ಯದು ಗಿರೀಶ್ (38) ಎಂದು ಗುರುತಿಸಲಾಗಿದೆ.

ಲೈಂಗಿಕ ದೌರ್ಜನ್ಯ ಆರೋಪ; ಇನ್‌ಫ್ಲುಯೆನ್ಸರ್‌ ಬಂಧನ

ಸಾಂದರ್ಭಿಕ ಚಿತ್ರ -

Priyanka P
Priyanka P Feb 21, 2026 4:28 PM

ತಿರುವನಂತಪುರಂ, ಫೆ. 21: ಇನ್‌ಸ್ಟಾಗ್ರಾಮ್ ಮೂಲಕ ಸ್ನೇಹ ಬೆಳೆಸಿದ ನಂತರ ಹಲವು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕೇರಳದ (Kerala) ಸಾಮಾಜಿಕ ಮಾಧ್ಯಮ ಇನ್‌ಫ್ಲುಯೆನ್ಸರ್‌ನನ್ನು (Social Media Influencer) ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಶಿಯಲ್‌ ಮೀಡಿಯಾದಲ್ಲಿ ವಿಶ್ವಾಸ ಗಳಿಸಿದ ನಂತರ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದಾರೆ. ದೂರಿನ ಮೇರೆಗೆ ಕಾರ್ಯಾಚರಿಸಿದ ಪೊಲೀಸರು ತ್ರಿಶೂರ್ ನಿವಾಸಿ ಯದು ಗಿರೀಶ್ (38) ಎಂದು ಗುರುತಿಸಲಾದ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತನಿಖಾಧಿಕಾರಿಗಳ ಪ್ರಕಾರ, ಗಿರೀಶ್ ಇನ್‌ಸ್ಟಾಗ್ರಾಮ್‌ನಲ್ಲಿ ಸಕ್ರಿಯನಾಗಿದ್ದ. ಹಲವು ಖಾತೆಗಳನ್ನು ನಿರ್ವಹಿಸುತ್ತಿದ್ದ. ತನಿಖೆಯ ಸಮಯದಲ್ಲಿ, ಮತ್ತಿಬ್ಬರು ಮಹಿಳೆಯರು ಆತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ತಮ್ಮೊಂದಿಗೆ ಸ್ನೇಹ ಬೆಳೆಸಿದ್ದಾನೆ. ನಂತರ ಮದುವೆಯ ಭರವಸೆ ನೀಡಿ ತಮ್ಮ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ.

ಯೂಟ್ಯೂಬರ್‌ಗಳ ಕಾಟಕ್ಕೆ ತತ್ತರಿಸಿಹೋದ ಮಲಯಾಳಂ ನಟಿ ರೇಖಾ ರತೀಶ್

ಈಗಾಗಲೇ ಮೂವರು ಮಹಿಳೆಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಈತ ಇನ್ನಷ್ಟು ಮಹಿಳೆಯರನ್ನು ಗುರಿಯಾಗಿಸಿಕೊಂಡಿರುವ ಸಾಧ್ಯತೆಯಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಗಿರೀಶ್ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿವೆ. ಸಹಾಯಕ ಪೊಲೀಸ್ ಆಯುಕ್ತರ ಮೇಲ್ವಿಚಾರಣೆಯಲ್ಲಿ ತ್ರಿಶೂರ್ ಜಿಲ್ಲಾ ಅಪರಾಧ ವಿಭಾಗದ ತಂಡವು ತನಿಖೆಯ ನೇತೃತ್ವ ವಹಿಸಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ದಂಪತಿ ಮಾಡಿದ ನೀಚ ಕೃತ್ಯಕ್ಕೆ ಮರಣದಂಡನೆ ಶಿಕ್ಷೆ

ಲಖನೌ: ಹೆಚ್ಚು ಚರ್ಚೆಗೆ ಗ್ರಾಸವಾದ ಅಶ್ಲೀಲ ಚಿತ್ರ ಪ್ರಕರಣದಲ್ಲಿ, ಪೋಕ್ಸೊ ನ್ಯಾಯಾಲಯವು 160 ಪುಟಗಳ ತೀರ್ಪಿನಲ್ಲಿ ಆರೋಪಿ ರಾಮ್ ಭವನ್ ಮತ್ತು ಅವರ ಪತ್ನಿ ದುರ್ಗಾವತಿಗೆ ಮರಣದಂಡನೆ ವಿಧಿಸಿದೆ. ಉತ್ತರ ಪ್ರದೇಶದ ಬಂದಾ ಪೋಕ್ಸೋ ನ್ಯಾಯಾಲಯವು ಈ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಸರ್ಕಾರವು ಸಂತ್ರಸ್ತ ಮಕ್ಕಳಿಗೆ ತಲಾ 10 ಲಕ್ಷ ರುಪಾಯಿ ಪರಿಹಾರವನ್ನು ನೀಡುವಂತೆ ಆದೇಶಿಸಿದೆ. 2020ರ ಅಕ್ಟೋಬರ್ 31ರಂದು ಆರೋಪಿ ರಾಮ್ ಭವನ್ ವಿರುದ್ಧ 50ಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಅವರ ವಿಡಿಯೊಗಳನ್ನು ಮಾಡಿ ವಿದೇಶಗಳಿಗೆ ಮಾರಾಟ ಮಾಡಿದ್ದಕ್ಕಾಗಿ ಸಿಬಿಐ ಪ್ರಕರಣ ದಾಖಲಿಸಿತ್ತು.

ಈ ಪ್ರಕರಣದಲ್ಲಿ ಫೆಬ್ರವರಿ 20ರಂದು 160 ಪುಟಗಳ ತೀರ್ಪಿನಲ್ಲಿ ಪೋಕ್ಸೊ ನ್ಯಾಯಾಲಯವು ರಾಮ್ ಭವನ್ ಮತ್ತು ಆತನ ಪತ್ನಿ ದುರ್ಗಾವತಿಗೆ ಮರಣದಂಡನೆ ವಿಧಿಸಿ ಆದೇಶ ಹೊರಡಿಸಿದೆ.