ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Insult to Kannada: ಹೋಟೆಲ್ ಡಿಸ್‌ಪ್ಲೇ ಬೋರ್ಡ್​ನಲ್ಲಿ ಕನ್ನಡಿಗರಿಗೆ ನಿಂದನೆ, ಆಕ್ರೋಶ

ಕೋರಮಂಗಲದ ಹೋಟೆಲ್ ಒಂದರಲ್ಲಿ ನಡೆದ ಈ ಘಟನೆ ಕನ್ನಡಿಗರ ಅವಮಾನ (Insult to Kannada) ಮಾಡುವ ಉದ್ದೇಶದಿಂದಲೇ ಮಾಡಲಾಗಿದೆ ಎಂಬ ಅನುಮಾನ ಮೂಡಿದೆ. ನಿನ್ನೆ ರಾತ್ರಿ ಈ ಬರಹ ಕಂಡುಬಂದಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

ಹೋಟೆಲ್ ಡಿಸ್‌ಪ್ಲೇ ಬೋರ್ಡ್​ನಲ್ಲಿ ಕನ್ನಡಿಗರಿಗೆ ನಿಂದನೆ, ಆಕ್ರೋಶ

ಹೋಟೆಲ್‌ ಫಲಕ

ಹರೀಶ್‌ ಕೇರ ಹರೀಶ್‌ ಕೇರ May 17, 2025 3:48 PM

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru news) ಕನ್ನಡ ಭಾಷಿಗರಿಗೇ ಅವಮಾನ ಮಾಡುವ ರೂಢಿ ಮುಂದುವರಿದಿದೆ. ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ತರುವಂತೆ, ಕೋರಮಂಗಲದ ಹೋಟೆಲ್ ಒಂದರ ಡಿಸ್‌ಪ್ಲೇ ಬೋರ್ಡ್​ನಲ್ಲಿ (Hotel Display board) ಕನ್ನಡಿಗರ (Kannadiga) ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿ ಅವಮಾನ (Insult to kannada) ಮಾಡಿರುವ ಘಟನೆ ನಡೆದಿದೆ. ಈ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ತನಿಖೆಗೆ ಆಗ್ರಹಿಸಲಾಗಿದೆ.

ಕೋರಮಂಗಲದ ಹೋಟೆಲ್ ಒಂದರಲ್ಲಿ ನಡೆದ ಈ ಘಟನೆ ಕನ್ನಡಿಗರ ಅವಮಾನ ಮಾಡುವ ಉದ್ದೇಶದಿಂದಲೇ ಮಾಡಲಾಗಿದೆ ಎಂಬ ಅನುಮಾನ ಮೂಡಿದೆ. ಬೋರ್ಡ್ ಮೇಲೆ "KANNADIGA M***" ಎಂದು ಬರೆಯಲಾಗಿದ್ದು, ಇದರಿಂದ ಕನ್ನಡಿಗರು ರೊಚ್ಚಿಗೆದ್ದಿದ್ದಾರೆ. ಡಿಸ್‌ಪ್ಲೇ ಬೋರ್ಡ್‌ನಲ್ಲಿ ಕನ್ನಡಿಗರ ಬಗ್ಗೆ ಅವಾಚ್ಯ ಪದಗಳಿಂದ ಅವಹೇಳನ ಮಾಡಲಾಗಿದೆ. ನಿನ್ನೆ ರಾತ್ರಿ ಈ ಬರಹ ಕಂಡುಬಂದಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದೆ.

ಈ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಹೋಟೆಲ್‌ನಲ್ಲಿ ನಡೆದಿದೆ. ಮಾಹಿತಿ ತಿಳಿದು ಸ್ಥಳಕ್ಕೆ ತೆರಳಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಮಡಿವಾಳ ಇನ್ಸ್‌ಪೆಕ್ಟರ್ ಮೊಹಮ್ಮದ್ ಹೋಟೆಲ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸಿಬ್ಬಂದಿಯಿಂದ ಮಾಹಿತಿ ಪಡೆದಿದ್ದಾರೆ. ಅವಹೇಳನಕಾರಿ ಬರಹದ ಬಳಿಕ ಬೋರ್ಡ್ ತೆರವು ಮಾಡಲಾಗಿದೆ. ತಕ್ಷಣವೇ ಬೋರ್ಡ್ ತೆರವು ಮಾಡಿದ ಹೋಟೆಲ್ ಸಿಬ್ಬಂದಿ ಇದು ನಮ್ಮ ಕೆಲಸವಲ್ಲ ಎಂದಿದ್ದಾರೆ.

ಈ ಸಂದರ್ಭದಲ್ಲಿ ಅಸ್ಸಾಂ ಮೂಲದ ಅಬ್ದುಲ್ ಎಂಬಾತ ಮತ್ತು ಹೋಟೆಲ್ ಮ್ಯಾನೇಜರ್‌ರನ್ನು ಪೊಲೀಸರು ವಶಕ್ಕೆ ಪಡೆದು ಬಳಿಕ ಬಿಡುಗಡೆ ಮಾಡಿದ್ದಾರೆ. ಡಿಸ್‌ಪ್ಲೇ ಬೋರ್ಡ್ ಅನ್ನು ಖಾಕಿ ವಶಕ್ಕೆ ಪಡೆದಿದೆ. ಈ ಹೊಟೇಲ್ ಕೇರಳ ಮೂಲದ ನೌಷದ್ ಎಂಬುವವರಿಗೆ ಸೇರಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ. ಡಿಸ್‌ಪ್ಲೇ ಬೋರ್ಡ್ ನಮ್ಮ ನಿಯಂತ್ರಣದಲ್ಲಿ ಇಲ್ಲ ಎಂದು ಹೋಟೆಲ್ ಸಿಬ್ಬಂದಿ ಹೇಳಿದ್ದು, ಹ್ಯಾಕ್ ಮಾಡಿ ಈ ರೀತಿಯ ಕೃತ್ಯ ನಡೆದಿರಬಹುದು ಎಂದಿದ್ದಾರೆ. ಮಡಿವಾಳ ಪೊಲೀಸರು ಈ ಬಗ್ಗೆ ಪ್ರಕರಣ ದಾಖಲಿಸಲು ಮುಂದಾಗಿದ್ದು, ಮ್ಯಾನೇಜರ್ ಅನ್ನು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Sonu Nigam: ಕನ್ನಡ ಹಾಡಿಗೂ ಪಹಲ್ಗಾಂ ದಾಳಿಗೂ ಏನು ಸಂಬಂಧ? ಸೋನು ನಿಗಮ್‌ ಮಾತಿಗೆ ರೊಚ್ಚಿಗೆದ್ದ ಕನ್ನಡಿಗರು