Physical Assault: ಇನ್ಸ್ಟಾಗ್ರಾಂನಲ್ಲಿ ಪರಿಚಯ, ಪ್ರೀತಿ ನಾಟಕ; ಅಪ್ರಾಪ್ತ ಬಾಲಕಿ ಮೇಲೆ ಕಾರಿನಲ್ಲೇ ಅತ್ಯಾಚಾರ!
ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಬೀಚ್ ಗೆ ಕರೆದೊಯ್ದು ಕಾರಿನಲ್ಲೇ ಅತ್ಯಾಚಾರ ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ 17 ವರ್ಷದ ಅಪ್ರಾಪ್ತೆಯ ಪರಿಚಯ ಬೆಳೆಸಿಕೊಂಡ ಕಾಮುಕ 7 ದಿನಗಳ ಒಳಗಾಗಿ ಬಾಲಕಿ ಜೊತೆ ಪ್ರೀತಿಯ ನಾಟಕವಾಡಿದ್ದ.


ಮಂಗಳೂರು: ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕಿಯನ್ನು ಬೀಚ್ ಗೆ ಕರೆದೊಯ್ದು ಕಾರಿನಲ್ಲೇ ಅತ್ಯಾಚಾರ (Physical Assault) ಎಸಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇನ್ಸ್ಟಾಗ್ರಾಂನಲ್ಲಿ 17 ವರ್ಷದ ಅಪ್ರಾಪ್ತೆಯ ಪರಿಚಯ ಬೆಳೆಸಿಕೊಂಡ ಕಾಮುಕ 7 ದಿನಗಳ ಒಳಗಾಗಿ ಬಾಲಕಿ ಜೊತೆ ಪ್ರೀತಿಯ ನಾಟಕವಾಡಿದ್ದ. ನಂತರ ಆಕೆಯನ್ನು ಪ್ರೀತಿಸುವುದಾಗಿ ಯಾಮಾರಿಸಿ ಸೋಮೇಶ್ವರ ಬೀಚ್ ಬಳಿ ಕರೆದೊಯ್ದು ಕಾರಲ್ಲೇ ಅತ್ಯಾಚಾರವೆಸಗಿದ್ದಾನೆ ಎಂದು ತಿಳಿದು ಬಂದಿದೆ.
ಬಾಲಕಿ ಈ ಕುರಿತು ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಅಪ್ರಾಪ್ತೆಯ ದೂರಿನನ್ವಯ ಪೋಕ್ಸೋ ಕಾಯ್ದೆಯಡಿ ಅಡ್ಯಾರ್ ವಳಚ್ಚಿಲ್ ನಿವಾಸಿ ಪೇಂಟಿಂಗ್ ವೃತ್ತಿ ಮಾಡಿಕೊಂಡಿರುವ ಕೆಲ್ವಿನ್(24) ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ದೂರಿನ ಆಧಾರದಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾಗಿದೆ.
ಪ್ರತ್ಯೇಕ ಘಟನೆಯಲ್ಲಿ ಬಿಹಾರದ ಪಾಟ್ನಾದಲ್ಲಿ ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ನಾಲ್ವರು ಅಪ್ರಾಪ್ತರು ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಪೊಲೀಸರ ಪ್ರಕಾರ, ನಾಲ್ವರೂ 8 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳು ಎಂಬುದು ವಿಚಾರಣೆ ಸಮಯದಲ್ಲಿ ತಿಳಿದುಬಂದಿದೆ. ಯುವತಿ ಮೊದಲು ಇನ್ಸ್ಟಾಗ್ರಾಮ್ನಲ್ಲಿ ಓರ್ವ ಹುಡುಗನೊಂದಿಗೆ ಸ್ನೇಹ ಬೆಳೆಸಿದ್ದಳು, ನಂತರ ಆಕೆ ಇತರ ಮೂವರೊಂದಿಗೂ ಸಂಪರ್ಕಕ್ಕೆ ಬಂದಿದ್ದಳು ಮತ್ತು ಅವರೆಲ್ಲರೊಂದಿಗೆ ನಿತ್ಯ ಮಾತುಕತೆ ಮುಂದುವರೆದಿತ್ತು. ಒಂದು ತಿಂಗಳ ಹಿಂದೆ ಅವಳು ಆರೋಪಿಗಳಲ್ಲಿ ಒಬ್ಬನ ಮನೆಗೆ ಭೇಟಿ ನೀಡಿದ್ದಳು, ಅಲ್ಲಿ ತುಂಬಾ ಹೊತ್ತುಇಬ್ಬರೂ ಸಮಯ ಕಳೆದಿದ್ದರು. ಇದಾದ ನಂತರ, ಆಕೆ ಇತರ ಮೂವರು ಹುಡುಗರೊಂದಿಗೆ ಹೋಟೆಲ್‌ಗೆ ಭೇಟಿ ನೀಡಿದ್ದಳು, ಅಲ್ಲಿ ಅವರು ಅವಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎನ್ನಲಾಗಿದೆ.
ಈ ಸುದ್ದಿಯನ್ನೂ ಓದಿ: ಒಡಿಶಾವನ್ನು ಬೆಚ್ಚಿಬೀಳಿಸಿದ ಅತ್ಯಾಚಾರ ಪ್ರಕರಣ: ಹತ್ತು ದಿನಗಳಲ್ಲಿ ಐದು ಸಾಮೂಹಿಕ ಅತ್ಯಾಚಾರ ದೂರು ದಾಖಲು
ಘಟನೆಯ ನಂತರ, ಹುಡುಗಿ ತನ್ನ ಕುಟುಂಬ ಸದಸ್ಯರಿಗೆ ಮಾಹಿತಿ ನೀಡಿದ್ದು, ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ವಿಚಾರಣೆಯ ಸಮಯದಲ್ಲಿ, ಮೂವರು ಹುಡುಗರು ತನ್ನನ್ನು ಕೊತ್ವಾಲಿ ಪ್ರದೇಶದ ಹೋಟೆಲ್‌ಗೆ ಕರೆದೊಯ್ದು ಅಲ್ಲಿ ಅತ್ಯಾಚಾರ ಮಾಡಿದ್ದಾರೆ ಆಕೆ ಹೇಳಿಕೊಂಡಿದ್ದಾಳೆ. ಪ್ರಕರಣದ ತನಿಖೆ ನಡೆಯುತ್ತಿದ್ದು, ಪೊಲೀಸರು ಪ್ರಸ್ತುತ ನಾಲ್ವರು ಹುಡುಗರನ್ನು ವಿಚಾರಣೆ ನಡೆಸುತ್ತಿದ್ದಾರೆ.