ಕೆಎಸ್‌ಆರ್‌ಟಿಸಿ ಬಸ್-ಸ್ಕಾರ್ಪಿಯೋ ಡಿಕ್ಕಿ; ಇಬ್ಬರ ಸಾವು, ಹತ್ತು ಜನರಿಗೆ ಗಾಯ
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೊಣಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕಾರ್ಪಿಯೋ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಹತ್ತು ಜನರಿಗೆ ಗಾಯಗೊಂಡ ದುರ್ಘಟನೆ ಸಂಭವಿಸಿದೆ. ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಗಳೂರಿ ನಿಂದ ಮುರುಡೇಶ್ವರಕ್ಕೆ ಮದುವೆಗೆ ತೆರಳುತ್ತಿದ್ದ ಬೆಂಗಳೂರು ಮೂಲದ ಸ್ಕಾರ್ಪಿ ಯೋಗೆ ಡಿಕ್ಕಿ ಹೊಡೆದಿದೆ.

ನಜ್ಜುಗುಜ್ಜಾಗಿರುವ ಸ್ಕಾರ್ಪಿಯೋ ಕಾರು

ಹೊನ್ನಾವರ: ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಉಪ್ಪೊಣಿಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಮತ್ತು ಸ್ಕಾರ್ಪಿಯೋ ಡಿಕ್ಕಿಯಾಗಿ ಇಬ್ಬರು ಮೃತಪಟ್ಟು, ಹತ್ತು ಜನರಿಗೆ ಗಾಯಗೊಂಡ ದುರ್ಘಟನೆ ಸಂಭವಿಸಿದೆ. ಭಟ್ಕಳದಿಂದ ಶಿರಸಿ ಮಾರ್ಗವಾಗಿ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಬೆಂಗಳೂರಿ ನಿಂದ ಮುರುಡೇಶ್ವರಕ್ಕೆ ಮದುವೆಗೆ ತೆರಳುತ್ತಿದ್ದ ಬೆಂಗಳೂರು ಮೂಲದ ಸ್ಕಾರ್ಪಿ ಯೋಗೆ ಡಿಕ್ಕಿ ಹೊಡೆದಿದೆ.
ಇದನ್ನೂ ಓದಿ: Sirsi News: ಕಾಂಗ್ರೆಸ್ ವಿರೋಧಿ ಜನಾಕ್ರೋಶ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಚಾಲನೆ
ಘಟನೆಯಲ್ಲಿ ಬಸ್ ಚಾಲಕನಿಗೂ ಗಂಭೀರ ಗಾಯವಾದರೆ, ಕೆಲವು ಪ್ರಯಾಣಿಕರಿಗೆ ಸಾಮಾನ್ಯ ಗಾಯಗಳಾಗಿವೆ.
ಗಾಯಗೊಂಡವರಿಗೆ ಹೊನ್ನಾವರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳ ಕುರಿತು ಇದುವರೆಗೂ ಮಾಹಿತಿ ತಿಳಿದುಬಂದಿಲ್ಲ. ಈ ಕುರಿತಂತೆ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.