ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕೆಂಪು ಕೋಟೆ ಸೇರಿ ದೆಹಲಿಯ ವಿವಿಧೆಡೆ ಸ್ಫೋಟಕ್ಕೆ ಲಷ್ಕರ್ ಸಂಚು

ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ಫೆಬ್ರವರಿ 6ರಂದು ನಡೆದ ಸ್ಫೋಟಕ್ಕೆ ಪ್ರತೀಕಾರವಾಗಿ ದೆಹಲಿಯ ಕೆಂಪು ಕೋಟೆ ಸೇರಿದಂತೆ ನಗರ ಭಾಗಗಳಲ್ಲಿ ಪಾಕಿಸ್ತಾನದ ಲಷ್ಕರ್-ಎ-ತೈಬಾ ಸ್ಫೋಟಕ್ಕೆ ಸಂಚು ರೂಪಿಸಿದೆ. ಭಯೋತ್ಪಾದಕ ಸಂಘಟನೆಯು ಸುಧಾರಿತ ಸ್ಫೋಟಕ ಸಾಧನಗಳಿಂದ ದಾಳಿ ನಡೆಸಲು ಸಂಚು ರೂಪಿಸುತ್ತಿರಬಹುದು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ದೆಹಲಿಯಲ್ಲಿ ಸ್ಫೋಟಕ್ಕೆ ಲಷ್ಕರ್  ಸಂಚು

ಸಂಗ್ರಹ ಚಿತ್ರ -

ನವದೆಹಲಿ: ಕೆಂಪು ಕೋಟೆ (red fort) ಸೇರಿದಂತೆ ದೆಹಲಿಯ (delhi) ವಿವಿಧ ಭಾಗಗಳಲ್ಲಿ ಸ್ಫೋಟ (bomb blast) ನಡೆಸಲು ಪಾಕಿಸ್ತಾನದ (pakistan) ಲಷ್ಕರ್-ಎ-ತೈಬಾ (Lashkar-e-Taiba) ಸಂಚು ರೂಪಿಸಿದೆ. ಪಾಕಿಸ್ತಾನದ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ಫೆಬ್ರವರಿ 6ರಂದು ನಡೆದ ಸ್ಫೋಟಕ್ಕೆ (mosque blast) ಪ್ರತೀಕಾರವಾಗಿ ಲಷ್ಕರ್ ಗುಂಪು ಕೆಂಪು ಕೋಟೆ, ಚಾಂದನಿ ಚೌಕ್‌ನಲ್ಲಿರುವ ದೇವಾಲಯ ಸೇರಿದಂತೆ ದೇಶಾದ್ಯಂತ ಇರುವ ಹಲವು ಪ್ರಮುಖ ಧಾರ್ಮಿಕ ಸ್ಥಳಗಳಲ್ಲಿ ಸ್ಫೋಟಕ್ಕೆ ಯೋಜನೆ ಹಾಕಿಕೊಂಡಿದೆ. ಭಯೋತ್ಪಾದಕ ಸಂಘಟನೆಯು ಸುಧಾರಿತ ಸ್ಫೋಟಕ ಸಾಧನ ಬಳಸಿ ದಾಳಿ ನಡೆಸಬಹುದು ಎಂದು ಗುಪ್ತಚರ ಮೂಲಗಳು ತಿಳಿಸಿವೆ.

ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ಫೆಬ್ರವರಿ 6ರಂದು ಆತ್ಮಹತ್ಯಾ ಬಾಂಬ್ ದಾಳಿ ನಡೆದಿದ್ದು, 31 ಜನರು ಸಾವನ್ನಪ್ಪಿದ್ದು, 160ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಇದಕ್ಕೆ ಸೇಡು ತೀರಿಸಿಕೊಳ್ಳಲು ಸಂಘಟನೆ ಪ್ರಯತ್ನಿಸುತ್ತಿದೆ ಎನ್ನಲಾಗಿದೆ.

GridDB ಕ್ಲೌಡ್ ಐಓಟಿ ಹ್ಯಾಕಥಾನ್ ಯಶಸ್ವಿಯಾಗಿ ಮುಕ್ತಾಯ

ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಹೊತ್ತುಕೊಂಡಿತ್ತು. ಮಸೀದಿಯ ಒಳ ದ್ವಾರ ತಲುಪಿದ ವ್ಯಕ್ತಿ ತನ್ನನ್ನು ತಾನು ಸ್ಪೋಟಿಸಿಕೊಂಡಿದ್ದಾನೆ.ಎಂದು ಐಎಸ್ ತಿಳಿಸಿದೆ.

ದೆಹಲಿಯ ಐತಿಹಾಸಿಕ ಕೆಂಪು ಕೋಟೆಯ ಬಳಿ ಕಳೆದ ನವೆಂಬರ್ 10ರಂದು ನಡೆದ ಕಾರು ಬಾಂಬ್ ಸ್ಪೋಟದಲ್ಲಿ 12 ಜನರು ಸಾವನ್ನಪ್ಪಿದ್ದರು. ಇದರ ಮೂರು ತಿಂಗಳ ಬಳಿಕ ಪಾಕಿಸ್ತಾನದಲ್ಲಿ ಈ ಸ್ಫೋಟ ಉಂಟಾಗಿದೆ. ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸ್ಫೋಟಕಗಳನ್ನು ತುಂಬಿದ ಕಾರಿನಿಂದ ಉಂಟಾದ ಸ್ಫೋಟದಿಂದ ಹಲವಾರು ಮಂದಿ ಗಾಯಗೊಂಡಿದ್ದರು. ಈ ದಾಳಿಯಲ್ಲಿ ಫರಿದಾಬಾದ್‌ನ ಅಲ್ ಫಲಾಹ್ ವಿಶ್ವವಿದ್ಯಾಲಯದ ವೈದ್ಯ ಉಮರ್ ಮೊಹಮ್ಮದ್ ಅಲಿಯಾಸ್ ಉಮರ್ ಉನ್ ನಬಿ ಭಾಗಿಯಾಗಿರುವುದು ತನಿಖೆಯಲ್ಲಿ ತಿಳಿದು ಬಂದಿತ್ತು.

ಇದರ ತನಿಖೆಯ ಮುಂದುವರಿದ ಭಾಗವಾಗಿ ಹರಿಯಾಣದ ಫರಿದಾಬಾದ್‌ನಲ್ಲಿ ಅಮೋನಿಯಂ ನೈಟ್ರೇಟ್ ಸೇರಿದಂತೆ 2,900 ಕೆಜಿ ಸ್ಫೋಟಕಗಳು ಪತ್ತೆಯಾಗಿತ್ತು. ಇದರೊಂದಿಗೆ ನಂಟು ಹೊಂದಿದ್ದ ಭಯೋತ್ಪಾದಕ ಮಾಡ್ಯೂಲ್‌ನ ಇಬ್ಬರು ಪ್ರಮುಖ ಸದಸ್ಯರಾದ ಡಾ. ಮುಜಮ್ಮಿಲ್ ಶಕೀಲ್ ಮತ್ತು ಡಾ. ಆದಿಲ್ ರಾಥರ್ ಎಂಬವರನ್ನು ಬಂಧಿಸಲಾಗಿತ್ತು. ಇವರ ಬಂಧನದ ಬಳಿಕ ಉಮರ್ ಮೊಹಮ್ಮದ್ ಹೆಸರು ಕೇಳಿ ಬಂದಿತ್ತು.

ಸೌದಿ ಅರೇಬಿಯಾದಲ್ಲಿ ಸಾವನ್ನಪ್ಪಿದ ಕಾರ್ಮಿಕನ ಮೃತದೇಹ 120 ದಿನಗಳ ಬಳಿಕ ಭಾರತಕ್ಕೆ; ಕುಟುಂಬಸ್ಥರ ಆಕ್ರೋಶ

ಪ್ರಕರಣಕ್ಕೆ ಸಂಬಂಧಿಸಿ ಅಮೀರ್ ರಶೀದ್ ಮಿರ್, ಜಾಸಿರ್ ಬಿಲಾಲ್ ವಾನಿ, ಮುಫ್ತಿ ಇರ್ಫಾನ್ ಅಹ್ಮದ್ ವಾಗೆ, ಡಾ. ಮುಜಾಮಿಲ್ ಶಕೀಲ್ ಗನಿ, ಡಾ. ಅದೀಲ್ ಅಹ್ಮದ್ ರಾಥರ್, ಡಾ. ಶಾಹೀನ್ ಸಯೀದ್ ಮತ್ತು ಸೋಯಾಬ್ ಎಂಬವರನ್ನು ಬಂಧಿಸಲಾಗಿದ್ದು, ಇವರಿಗೆ ಮಾರ್ಚ್ 13ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.