CM Siddaramaiah: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್‌ಗೆ ಕೊಲೆ ಬೆದರಿಕೆ ಇಮೇಲ್
“ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬುವುದಾಗಿ" ಇ-ಮೇಲ್ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಬೆದರಿಕೆ ಇ-ಮೇಲ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರು, ನಗರ ಪೊಲೀಸ್ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಬೆದರಿಕೆ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ.

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ (CM Siddaramaiah) ಮತ್ತು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DCM DK Shivakumar) ಅವರನ್ನು ಕೊಲೆ ಮಾಡುವುದಾಗಿ ಕಿಡಿಗೇಡಿಗಳ್ಯಾರೋ ಇ-ಮೇಲ್ ಮೂಲಕ ಸಂದೇಶ ಕಳುಹಿಸಿ ಬೆದರಿಕೆ ಹಾಕಿದ್ದಾರೆ. ಈ ಸಂದೇಶ ಆಧರಿಸಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸಿಂಧಾ ರಜಪೂತ್ ಹೆಸರಿನ ಇ-ಮೇಲ್‌ನಿಂದ ಈ ಬೆದರಿಕೆ ಸಂದೇಶ ಬಂದಿದೆ ಎಂಬುದು ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
“ಇಬ್ಬರನ್ನೂ ಕೊಲೆ ಮಾಡಿ ಫ್ರಿಜ್ ಮತ್ತು ಟ್ರ್ಯಾಲಿ ಬ್ಯಾಗ್‌ಗೆ ತುಂಬುವುದಾಗಿ" ಇ-ಮೇಲ್ ಸಂದೇಶದಲ್ಲಿ ಬೆದರಿಕೆ ಹಾಕಲಾಗಿದೆ. ಈ ಬೆದರಿಕೆ ಇ-ಮೇಲ್ ಅನ್ನು ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವರು, ನಗರ ಪೊಲೀಸ್ ಕಮಿಷನರ್‌ಗೂ ರವಾನೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಕೊಲೆ ಬೆದರಿಕೆ ಬಗ್ಗೆ ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸಲಾಗುತ್ತಿದೆ.
'ರಾಮಪುರದ ಪ್ರಭಾಕರ್‌ಗೆ 11 ಕೋಟಿ ಸಾಲ ಕೊಟ್ಟಿದ್ದೇನೆ. ಆದರೆ, ಆತ ಈವರೆಗೂ ಸಾಲ ವಾಪಸ್ ಕೊಟ್ಟಿಲ್ಲ. ಆದಷ್ಟು ಬೇಗ ಪ್ರಭಾಕರ್‌ಗೆ ಸಾಲ ವಾಪಸ್ ಕೊಡಲು ಹೇಳಿ. ಪ್ರಭಾಕರ್ ತನ್ನ ನಾದಿನಿ ಹಾಗೂ ಪೋಷಕರ ಮನೆಯಲ್ಲಿ ಹಣ ಅಡಗಿಸಿಟ್ಟಿದ್ದಾನೆ. ಪ್ರಭಾಕರ್‌ಗೆ ಇಬ್ಬರು ಮಕ್ಕಳು ಇದ್ದಾರೆ. ಇತ್ತೀಚೆಗೆ ಒಬ್ಬ ಮಗನನ್ನು ಮದುವೆ ಮಾಡಿದ್ದಾನೆ. ಸಾಲದ ಹಣವನ್ನು ವಾಪಸ್ ನೀಡಲು ಆತನಿಗೆ ಆದಾಯ ಮೂಲ ಇಲ್ಲ. ಹೀಗಾಗಿ, ಪ್ರಭಾಕರ್‌ನನ್ನು ಕೊಲೆ ಮಾಡುತ್ತೇನೆ' ಎಂದು ಅದೇ ಇ-ಮೇಲ್‌ನಲ್ಲಿ ಉಲ್ಲೇಖಿಸಿದ್ದಾನೆ.
ಇದನ್ನೂ ಓದಿ: CM Siddaramaiah: ರಾಜ್ಯದಲ್ಲಿ ಹಿಂದಿ ಹೇರಿಕೆಗೆ ಅವಕಾಶ ನೀಡುವುದಿಲ್ಲ: ಸಿಎಂ ಸಿದ್ದರಾಮಯ್ಯ