ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಬೀದಿ ನಾಯಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕನಿಗೆ ತಕ್ಕ ಪಾಠ: ಅಟ್ಟಾಡಿಸಿ ಹೊಡೆದ ಸ್ಥಳೀಯರು

Viral Vide: ಕಾಮುಕ ಬೀದಿ ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು ಇಡೀ ಸಮಾಜವೇ ತಲೆ ತಗ್ಗಿಸುವಂತಾಗಿದೆ. ಆರೋಪಿಯನ್ನು ಪೊಲೀಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು ಔಪಚಾರಿಕ ದೂರು ದಾಖಲಿಸಲಾಗಿದೆ. ಈ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದಂತೆ ಮರುದಿನವೇ ಸಾರ್ವಜನಿಕರು ಆರೋಪಿಯನ್ನು ಹಿಡಿದು ತೀವ್ರವಾಗಿ ಥಳಿಸಿದ್ದಾರೆ..

ಬೀದಿ ನಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಪಾಠ ಕಲಿಸಿದ ಸ್ಥಳೀಯರು

ಬೀದಿ ನಾಯಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ -

Profile
Pushpa Kumari May 16, 2026 4:28 PM

ನವದೆಹಲಿ, ಮೇ 16: ಇತ್ತೀಚೆಗೆ ದೆಹಲಿಯಲ್ಲಿ ಆತಂಕಕಾರಿ ಘಟನೆಯೊಂದು ನಡೆದಿದೆ. ಕಾಮುಕನೋರ್ವ ಬೀದಿ ನಾಯಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗುವ ಮೂಲಕ ಇಡೀ ಸಮಾಜವೇ ತಲೆ ತಗ್ಗಿಸುವಂತೆ ಮಾಡಿದ್ದಾನೆ. ಆರೋಪಿಯನ್ನು ಪೊಲೀಸ್ ಅಧಿಕಾರಿಗಳಿಗೆ ಹಸ್ತಾಂತರಿಸಲಾಗಿದ್ದು ಔಪಚಾರಿಕ ದೂರು ದಾಖಲಿಸಲಾಗಿದೆ. ಈ ಘಟನೆಯ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ವೈರಲ್ (Viral News) ಆಗುತ್ತಿದ್ದಂತೆ ಮರುದಿನವೇ ಸಾರ್ವಜನಿಕರು ಆರೋಪಿಯನ್ನು ಹಿಡಿದು ತೀವ್ರವಾಗಿ ಥಳಿಸಿದ್ದಾರೆ.

ದೆಹಲಿಯ ಶಹದಾರಾ ಪ್ರದೇಶದಲ್ಲಿ ಬೀದಿ ನಾಯಿಯೊಂದರ ಮೇಲೆ ವ್ಯಕ್ತಿಯೊಬ್ಬ ಕ್ರೂರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಪ್ರಾಣಿ ಕಾರ್ಯಕರ್ತೆ ರೇಣು ಕೌರ್ ಇನ್‌ಸ್ಟಾಗ್ರಾಮ್‌ನಲ್ಲಿ ಈ ವಿಡಿಯೊ ಶೇರ್ ಮಾಡಿದ್ದಾರೆ. ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು ಕಿಡಿಕಾರಿದ್ದು, ಕಠಿಣ ಶಿಕ್ಷೆ ವಿಧಿಸ ಬೇಕೆಂದು ಆಗ್ರಹಿಸಿದ್ದಾರೆ.

ವಿಡಿಯೊ ನೋಡಿ:

ತಡರಾತ್ರಿ ಕಾಮುಕನು ಈ ಕೃತ್ಯ ಎಸಗಿದ್ದಾನೆ. ರಾತ್ರಿ ರಸ್ತೆ ನಿರ್ಜನವಾಗಿದ್ದ ಸಮಯದಲ್ಲಿ ಮೂಕ ಪ್ರಾಣಿಯ ಮೇಲೆ ಅಮಾನವೀಯವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಆರೋಪಿ ಈ ಹಿಂದೆಯೂ ಇದೇ ರೀತಿಯ ಕೃತ್ಯದಲ್ಲಿ ಭಾಗಿಯಾಗಿದ್ದ. ಅಷ್ಟೇ ಅಲ್ಲದೆ ಆ ಪ್ರದೇಶದಲ್ಲಿ ಹೋಗುತ್ತಿದ್ದ ಯುವತಿ ಹಾಗೂ ಮಹಿಳೆಯರನ್ನು ಕರೆಯುತ್ತಿದ್ದ ಎನ್ನುವ ಆರೋಪಗಳು ಕೂಡ ಇವೆ‌.

ಚಲಿಸುತ್ತಿದ್ದ ರೈಲಿನಿಂದ ಬಿದ್ದ ಮಹಿಳೆ; ಮುಂದೇನಾಯ್ತು? ಇಲ್ಲಿದೆ ವಿಡಿಯೊ

ಅನೇಕ ಸಾಮಾಜಿಕ ಮಾಧ್ಯಮ ಬಳಕೆದಾರರು‌ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿದರೆ, ಇತರರು ಈ ಕೃತ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಈ ವಿಚಾರ ತಿಳಿಯುತ್ತಿದ್ದಂತೆ ಅಲ್ಲಿನ ಸ್ಥಳೀಯರು ಆರೋಪಿಯನ್ನು ಪತ್ತೆ ಹಚ್ಚಿ ತೀವ್ರವಾಗಿ ಥಳಿಸಿದ್ದಾರೆ‌. ಆತನನ್ನು ಅರೆಬೆತ್ತಲೆಯಾಗಿ ರಸ್ತೆಯಲ್ಲಿ ಮೆರವಣಿಗೆ ನಡೆಸಿದ್ದಾರೆ.‌ ಬಳಿಕ ಆರೋಪಿಯನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು, ಆತನ ವಿರುದ್ಧ ದೂರು ದಾಖಲಿಸಲಾಗಿದೆ. ಈ ಘಟನೆಯು ಪ್ರಾಣಿ ಹಿಂಸೆ ಕಾನೂನುಗಳು ಮತ್ತು ಸಾರ್ವಜನಿಕ ಹೊಣೆಗಾರಿಕೆಯ ಬಗ್ಗೆ ಚರ್ಚೆ ಎಸಗುವಂತೆ ಮಾಡಿದೆ.

ತನಿಖೆ ಮುಂದುವರಿದಂತೆ, ಅನೇಕರು ನ್ಯಾಯಕ್ಕಾಗಿ ಒತ್ತಾಯಿಸುತ್ತಿದ್ದಾರೆ. ಬಳಕೆದಾರರೊಬ್ಬರು ಇಂತಹ ರಾಕ್ಷಸರಿಗೆ ಮರಣದಂಡನೆಯಂತಹ ಕಠಿಣ ಶಿಕ್ಷೆ ಆಗಬೇಕು ಎಂದು ಬರೆದಿದ್ದಾರೆ. ಮತ್ತೊಬ್ಬರು ಇಂತಹ ಕಾಮುಕರು ಸಮಾಜಕ್ಕೆ ಮಾರಕ ಎಂದು ಬರೆದಿದ್ದಾರೆ.