ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Accident at Chikkanayakanahalli: ಬಸ್ ಪಲ್ಟಿಯಾಗಿ ಹಲವರಿಗೆ ಗಾಯ

ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳಿಯರು ನೆರವಿಗೆ ಧಾವಿಸಿದ್ದು, ಗಾಯಗೊಂಡವರನ್ನು ರಸ್ತೆ ಯಲ್ಲಿ ಹಾದುಹೋಗುತ್ತಿದ್ದ ವಾಹನಗಳ ಮೂಲಕ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಕೆಲವೇ ಕ್ಷಣಗಳಲ್ಲಿ ಅಂಬುಲೆನ್ಸ್ಗಳು ಕೂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ ಕಾರ್ಯ ನಡೆಸಿದವು.

ಬಸ್ ಪಲ್ಟಿಯಾಗಿ ಹಲವರಿಗೆ ಗಾಯ

Profile Ashok Nayak Jul 3, 2025 4:01 PM

ಚಿಕ್ಕನಾಯಕನಹಳ್ಳಿ : ಚಿತ್ರದುರ್ಗದಿಂದ ಮೈಸೂರಿಗೆ ಹೊರಟಿದ್ದ ರಾಜ್ಯ ಸಾರಿಗೆ ಸಂಸ್ಥೆಯ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಆಲದಕಟ್ಟೆ ಗ್ರಾಮದ ಸಮೀಪದ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಬುಧವಾರ ಮಧ್ಯಾಹ್ನ ಪಲ್ಟಿಯಾಗಿದೆ. ಈ ಅಪಘಾತದಲ್ಲಿ ೪೦ ರಿಂದ ೪೫ ಪ್ರಯಾಣಿಕರು ಗಾಯಗೊಂಡಿದ್ದು ಒರ್ವ ಮಹಿಳೆಯ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳಿಯರು ನೆರವಿಗೆ ಧಾವಿಸಿದ್ದು, ಗಾಯಗೊಂಡವರನ್ನು ರಸ್ತೆ ಯಲ್ಲಿ ಹಾದುಹೋಗುತ್ತಿದ್ದ ವಾಹನಗಳ ಮೂಲಕ ಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲು ನೆರವಾದರು. ಕೆಲವೇ ಕ್ಷಣಗಳಲ್ಲಿ ಅಂಬುಲೆನ್ಸ್ಗಳು ಕೂಡ ಸ್ಥಳಕ್ಕೆ ಆಗಮಿಸಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸುವ ಕಾರ್ಯ ನಡೆಸಿದವು.

ಇದನ್ನೂ ಓದಿ: Chikkanayakanahalli (Tumkur) News: ಹೇಮಾವತಿ ನಾಲಾ ಕಾಮಗಾರಿ 2026ರ ಜೂನ್‌ ವೇಳೆಗೆ ಪೂರ್ಣ: ಶಾಸಕ ಸಿ.ಬಿ.ಸುರೇಶ್‌ಬಾಬು ಭರವಸೆ

ಈ ಪೈಕಿ ಒಬ್ಬ ಮಹಿಳೆ ಸ್ಥಿತಿ ವಿಷಮ ಸ್ಥಿತಿಯಲ್ಲಿದೆ. ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವೈದ್ಯರು ತಿಳಿಸಿದ್ದು ಹೆಚ್ಚಿನ ಚಿಕಿತ್ಸೆಗೆ ರವಾನಿಸಲಾಗಿದೆ. ಅಪಘಾತಕ್ಕೆ ನಿಖರವಾದ ಕಾರಣ ಇನ್ನೂ ತಿಳಿದು ಬಂದಿಲ್ಲ. ಆದರೆ ಪ್ರಾಥಮಿಕ ಅಂದಾಜಿನ ಪ್ರಕಾರ ಬಸ್ ಚಾಲಕನ ಅತಿ ವೇಗದ ಚಾಲನೆ ಅಥವಾ ವಾಹನದ ತಾಂತ್ರಿಕ ದೋಷವೇ ಈ ದುರಂತಕ್ಕೆ ಕಾರಣವಾಗಿರಬಹುದು ಎಂದು ಊಹಿಸಲಾಗಿದೆ. ಬಸ್ ಬಹುತೇಕ ಭರ್ತಿಯಾಗಿದ್ದರಿಂದ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರಿಗೆ ಗಾಯಗಳಾಗಿವೆ. ಎಂದು ಹೇಳಲಾಗುತ್ತಿದೆ.

ಅವೈಜ್ಞಾನಿಕ ರಸ್ತೆ ನಿರ್ಮಾಣದ ಆರೋಪ

ಅಪಘಾತ ಸಂಭವಿಸಿದ ಸ್ಥಳದಲ್ಲಿ ರಸ್ತೆ ನಿರ್ಮಾಣ ಕಾರ್ಯ ಅವೈಜ್ಞಾನಿಕವಾಗಿ ನಡೆದಿದೆ ಎಂದು ಸ್ಥಳಿಯರು ತೀವ್ರ ಆಕ್ರೋಷ ವ್ಯಕ್ತಪಡಿಸಿದ್ದಾರೆ. ಈ ಭಾಗದಲ್ಲಿ ಆಗಾಗ ಅಪಘಾತಗಳು ಸಂಭವಿಸು ತ್ತಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತೆ ವಹಿಸಿ ನಾಮಫಲಕ ಅಳವಡಿಸಬೇಕು. ಜತೆಗೆ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಕೂಡ ತುಂಬಾ ಜಾಗರೂಕತೆಯಿಂದ ಸಂಚರಿಸ ಬೇಕು ಎಂದು ಸ್ಥಳಿಯರು ಮನವಿ ಮಾಡಿದ್ದಾರೆ. ಡಿವೈಎಸ್‌ಪಿ ವಿನಾಯಕ ಶೆಟಗೇರಿ, ಸಿಪಿಐ ನಢಾಫ್, ಪಿಎಸ್‌ಐ ದ್ರಾಕ್ಷಾಯಿಣಿ, ಯತೀಷ್ ಆಸ್ಪತ್ರೆಗೆ ಭೇಟಿ ನೀಡಿದ್ದರು.