Bomb threat: ನಿನ್ನೆ ವಿದ್ಯಾರ್ಥಿನಿಗೆ ಪ್ರೊಫೆಸರ್ ಪ್ರಪೋಸ್ ಮಾಡಿ ಏಟು ತಿಂದ ಕಾಲೇಜಿಗೆ ಇಂದು ಬಾಂಬ್ ಬೆದರಿಕೆ!
ಬಾಂಬ್ ಬೆದರಿಕೆ ಈ ಹಿಂದಿನ ಘಟನೆಯೊಂದಿಗೆ ಸಂಬಂಧ ಹೊಂದಿದೆ ಎಂಬ ಬಗ್ಗೆ ಅನುಮಾನ ಮೂಡಿಲ್ಲವಾದರೂ, ಪೊಲೀಸರು ಎಲ್ಲ ಆಯಾಮಗಳ್ನು ಪರಿಶೀಲಿಸುತ್ತಿದ್ದಾರೆ. ಕಾಲೇಜ್ ಆವರಣದಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳು ತೀವ್ರ ಪರಿಶೀಲನೆ ನಡೆಸುತ್ತಿವೆ. ಪೊಲೀಸರು ಪೂರ್ಣ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಸಿದ್ಧಾರ್ಥ ಮೆಡಿಕಲ್ ಕಾಲೇಜು -
ನೆಲಮಂಗಲ, ಮಾ.27: ಗೃಹಮಂತ್ರಿ ಡಾ.ಜಿ.ಪರಮೇಶ್ವರ್ (Home Minister Dr. G Parameshwar) ಒಡೆತನದ ಮೆಡಿಕಲ್ ಕಾಲೇಜಿಗೆ (Medical College) ಬಾಂಬ್ ಬೆದರಿಕೆ (Bomb Threat) ಹಾಕಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಟಿ. ಬೇಗೂರು ಸಮೀಪದ ಸಿದ್ದಾರ್ಥ ಮೆಡಿಕಲ್ ಕಾಲೇಜಿಗೆ ಇಂದು ಬಾಂಬ್ ಬೆದರಿಕೆ ಬಂದಿದೆ. ಅಪರಿಚಿತ ಇಮೇಲ್ ಮೂಲಕ ಬಂದ ಈ ಬೆದರಿಕೆ ಭಾರೀ ಸಂಚಲನ ಸೃಷ್ಟಿಸಿದ್ದು, ಕಾಲೇಜು ಆವರಣದ ಇಂಚಿಂಚೂ ಪರಿಶೀಲನೆ ಮಾಡಲಾಗುತ್ತಿದೆ.
ಈ ಸಿದ್ದಾರ್ಥ ಕಾಲೇಜು ಕರ್ನಾಟಕ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ಅವರ ಒಡೆತನದಲ್ಲಿದೆ. ಬೆದರಿಕೆ ಬಂದ ತಕ್ಷಣ ಕಾಲೇಜು ಆವರಣಕ್ಕೆ ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಎಸ್‌ಪಿ ಚಂದ್ರಕಾಂತ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೃಹಮಂತ್ರಿ ಜಿ. ಪರಮೇಶ್ವರ್ ಅವರು ಈ ಘಟನೆಯ ಬಗ್ಗೆ ತಿಳಿದ ತಕ್ಷಣ ಖುದ್ದು ಕಾಲೇಜಿಗೆ ತೆರಳಿದ್ದಾರೆ. ಕಾಲೇಜ್ ಅಧಿಕಾರಿಗಳಿಂದ ಸಂಪೂರ್ಣ ವರದಿ ಪಡೆದು, ಘಟನೆಯನ್ನು ವಿವರವಾಗಿ ಪರಿಶೀಲಿಸಲಿದ್ದಾರೆ ಎಂದು ತಿಳಿದುಬಂದಿದೆ.
ಇದೇ ಕಾಲೇಜಿನಲ್ಲಿ ನಿನ್ನೆ ಒಂದು ಗಂಭೀರ ಘಟನೆ ನಡೆದಿತ್ತು. ಕಾಲೇಜಿನ ಮೈಕ್ರೋಬಯಾಲಜಿ ವಿಭಾಗದ ಸಹಾಯಕ ಪ್ರಾಧ್ಯಾಪಕ ಅಬ್ದುಲ್ ಮುಹಮ್ಮದ್ ತರಗತಿಯಲ್ಲಿ ಒಬ್ಬ ವಿದ್ಯಾರ್ಥಿನಿಗೆ ಲವ್ ಪ್ರಪೋಸ್ ಮಾಡಿದ್ದ ಆರೋಪ ಕೇಳಿಬಂದಿತ್ತು. ವಿದ್ಯಾರ್ಥಿನಿಗೆ ಚಾಕಲೇಟ್ ನೀಡಿ ತರಗತಿಯಲ್ಲಿ ಪ್ರಪೋಸ್ ಮಾಡಿದ್ದರಿಂದ ತೀವ್ರ ಆಕ್ರೋಶಗೊಂಡ ವಿದ್ಯಾರ್ಥಿಗಳು ಆತನ ಮೇಲೆ ಹಲ್ಲೆ ಮಾಡಿದ್ದರು. ಕಾಲೇಜ್ ಆಡಳಿತವು ಪ್ರಾಧ್ಯಾಪಕನ ವಿರುದ್ಧ ದೂರು ದಾಖಲಿಸಿದ್ದು, ಪೊಲೀಸರು ಬಿಎನ್‌ಎಸ್ ಕಾನೂನಿನ ಸೆಕ್ಷನ್‌ಗಳಡಿ ಕೇಸು ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ದೆಹಲಿ ವಿಧಾನಸಭಾ ಸ್ಪೀಕರ್‌ಗೆ ಬಾಂಬ್ ಬೆದರಿಕೆ ಇಮೇಲ್; ಸದನ, ಮೆಟ್ರೋ ನಿಲ್ದಾಣ ಸ್ಫೋಟಿಸುವುದಾಗಿ ಮೆಸೇಜ್
ಬಾಂಬ್ ಬೆದರಿಕೆ ಈ ಹಿಂದಿನ ಘಟನೆಯೊಂದಿಗೆ ಸಂಬಂಧ ಹೊಂದಿದೆ ಎಂಬ ಬಗ್ಗೆ ಅನುಮಾನ ಮೂಡಿಲ್ಲವಾದರೂ, ಪೊಲೀಸರು ಎಲ್ಲ ಆಯಾಮಗಳ್ನು ಪರಿಶೀಲಿಸುತ್ತಿದ್ದಾರೆ. ಕಾಲೇಜ್ ಆವರಣದಲ್ಲಿ ಬಾಂಬ್ ಸ್ಕ್ವಾಡ್ ಮತ್ತು ಡಾಗ್ ಸ್ಕ್ವಾಡ್ ತಂಡಗಳು ತೀವ್ರ ಪರಿಶೀಲನೆ ನಡೆಸುತ್ತಿವೆ. ಪೊಲೀಸರು ಪೂರ್ಣ ಭದ್ರತಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಕರ್ನಾಟಕದಲ್ಲಿ ಇತ್ತೀಚಿನ ವರ್ಷಗಳಲ್ಲಿ ಹಲವು ಶಾಲಾ-ಕಾಲೇಜುಗಳಿಗೆ ಬಾಂಬ್ ಬೆದರಿಕೆಗಳು ಬಂದಿವೆ. ವಿದ್ಯಾರ್ಥಿಗಳು ಮತ್ತು ಪೋಷಕರು ಈ ಬೆದರಿಕೆಯಿಂದ ಆತಂಕಗೊಂಡಿದ್ದಾರೆ.
ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕಲೇಟ್ ಕೊಟ್ಟು ಪ್ರಪೋಸ್ ಮಾಡಿದ ಪ್ರೊಫೆಸರ್, ಚಪ್ಪಲಿ ಏಟು!