ಬಾಲಕಿಯರ ಮೇಲಿನ ದೌರ್ಜನ್ಯಕ್ಕೆ ಬೀಳುತ್ತಿಲ್ಲ ಬ್ರೇಕ್; ಲಿಫ್ಟ್ ಕೊಡುವುದಾಗಿ ನಂಬಿಸಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ
Physical Abuse: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಲಿಫ್ಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಿಹಾರ ಮೂಲದ ವ್ಯಕ್ತಿ ಹಾಗೂ ಆತನ ಸ್ನೇಹಿತನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಸ್ತುತ ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಇಬ್ಬರೂ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಸಾಂದರ್ಭಿಕ ಚಿತ್ರ -
ಪಾಟ್ನಾ, ಸೆ. 26: ಬಿಹಾರದ ದರ್ಭಂಗಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ಪರೀಕ್ಷಾ ಕೇಂದ್ರದಿಂದ ಮನೆಗೆ ತೆರಳಲು ವಾಹನಕ್ಕಾಗಿ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಗೆ ಲಿಫ್ಟ್ ಕೊಡುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ (Physical Abuse). ಸಂತ್ರಸ್ತೆ ನೀಡಿದ ದೂರಿನ ಆಧಾರದ ಮೇಲೆ ತನಿಖೆ ನಡೆಸಿದ ಬಿರಾವುಲ್ ಠಾಣೆ ಪೊಲೀಸರು ಬಿಹಾರ ಮೂಲದ ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಆರೋಪಿಗಳನ್ನು ಬಿಹಾರ ಮೂಲದ ಅನಿಲ್ ಕುಮಾರ್ ಮತ್ತು ಆತನ ಸ್ನೇಹಿತ ಎಂದು ಗುರುತಿಸಲಾಗಿದೆ. ಸಂತ್ರಸ್ತ ಬಾಲಕಿಯು ಸೆಪ್ಟೆಂಬರ್ 23ರಂದು ಪರೀಕ್ಷೆ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ.
ಲಿಫ್ಟ್ ನೆಪದಲ್ಲಿ ವಂಚನೆ
ಸಂತ್ರಸ್ತ ಬಾಲಕಿಯು ಮನೆಗೆ ತೆರಳಲು ವಾಹನಕ್ಕಾಗಿ ಕಾಯುತ್ತಿದ್ದ ವೇಳೆ, ಬೈಕ್‌ನಲ್ಲಿ ಬಂದ ಆರೋಪಿ ಅನಿಲ್ ಕುಮಾರ್ ತಾನು ಸುರಕ್ಷಿತವಾಗಿ ಮನೆಗೆ ತಲುಪಿಸುವುದಾಗಿ ನಂಬಿಸಿ ಲಿಫ್ಟ್ ನೀಡಿದ್ದಾನೆ. ಪರಿಚಯದವನೆಂದು ಭಾವಿಸಿ ಬೈಕ್ ಏರಿದ ಬಾಲಕಿಯನ್ನು ಆತ ಆಕೆಯ ಹಳ್ಳಿಗೆ ತಲುಪಿಸುವ ಬದಲು ತನ್ನ ಮನೆಗೆ ಕರೆದೊಯ್ದಿದ್ದಾನೆ. ಬಾಲಕಿಯನ್ನು ಮನೆಗೆ ಕರೆತಂದ ಅನಿಲ್, ತನ್ನ ಸ್ನೇಹಿತನನ್ನು ಅಲ್ಲಿಗೆ ಕರೆಸಿಕೊಂಡಿದ್ದಾನೆ. ಬಳಿಕ ಇಬ್ಬರೂ ಸೇರಿ ಬಾಲಕಿಯನ್ನು ಬೆದರಿಸಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಘಟನೆಯ ಕುರಿತು ಯಾರಿಗಾದರೂ ತಿಳಿಸಿದರೆ ಭೀಕರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.
13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಮಾರಣಾಂತಿಕ ಹಲ್ಲೆ ನಡೆಸಿ ಮನೆ ಹೊರಗೆ ಎಸೆದು ಹೋದ ದುಷ್ಕರ್ಮಿಗಳು
ಆರೋಪಿಗಳ ಬಂಧನದಿಂದ ಹೇಗೋ ತಪ್ಪಿಸಿಕೊಂಡು ಮನೆಗೆ ಬಂದ ಬಾಲಕಿ, ಘಟನೆಯನ್ನು ತನ್ನ ಪೋಷಕರಿಗೆ ವಿವರಿಸಿದ್ದಾಳೆ. ತಕ್ಷಣವೇ ಪೋಷಕರು ಬಾಲಕಿಯನ್ನು ಕರೆದುಕೊಂಡು ಹತ್ತಿರದ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.
ಕೃತ್ಯಕ್ಕೆ ಬಳಸಲಾದ ಬೈಕ್ ಅನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಧಿತ ಆರೋಪಿಯು ನೀಡಿದ ಹೇಳಿಕೆಯ ಆಧಾರದ ಮೇಲೆ, ಈ ಘಟನೆಯ ಹಿಂದೆ ಪ್ರೇಮ ಸಂಬಂಧವೇನಾದರೂ ಇದೆಯೇ ಎಂಬ ಕೋನದಲ್ಲೂ ತನಿಖೆ ನಡೆಯುತ್ತಿದೆ. ಎಲ್ಲ ಆರೋಪಗಳು ಮತ್ತು ಸನ್ನಿವೇಶಗಳ ಸತ್ಯಾಸತ್ಯತೆಯನ್ನು ಇನ್ನೂ ತನಿಖೆ ಮಾಡಲಾಗುತ್ತಿದ್ದು, ತನಿಖೆಯಲ್ಲಿ ಹೊರಬರುವ ಸತ್ಯಾಂಶಗಳ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಬಿಹಾರದಲ್ಲಿ ಹೆಣ್ಮಕ್ಕಳಿಗೆ ರಕ್ಷಣೆಯೇ ಇಲ್ಲ: ಯುವತಿ ಮೇಲೆ ಮತ್ತೆ ಯುವಕರ ಗುಂಪಿನಿಂದ ಹಲ್ಲೆ
ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು
ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಪೊಲೀಸರು, ಘಟನೆಯನ್ನು ದೃಢಪಡಿಸಿಕೊಂಡಿದ್ದಾರೆ. ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ತೀವ್ರ ತರದ ಲೈಂಗಿಕ ಕಿರುಕುಳ ವಿಭಾಗಗಳು ಹಾಗೂ ಅಪ್ರಾಪ್ತರ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಾದ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಲೈಂಗಿಕ ಕಿರುಕುಳಕ್ಕೊಳಗಾದ ಮಕ್ಕಳ ಹಕ್ಕುಗಳ ರಕ್ಷಣಾ ಕಾಯ್ದೆಯ ಪ್ರಕಾರ ಸಂತ್ರಸ್ತ ಅಪ್ರಾಪ್ತ ಬಾಲಕಿಯ ಹೆಸರನ್ನು ಬಹಿರಂಗಪಡಿಸಲಾಗಿಲ್ಲ.
ಕ್ರೈಂ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್ ಮಾಡಿ.