ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ್​ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Operation Sindoor: ಪಾಕಿಸ್ತಾನ್ ಮುರ್ದಾಬಾದ್ ಎಂದ ಬಾಲಕನಿಗೆ ಇರಿದ ದುಷ್ಕರ್ಮಿಗಳು

Miscreants stabbed a boy :ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಶಿಬಿರಗಳ ಮೇಲೆ ನಡೆಸಿರುವ ವಾಯುದಾಳಿಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಎಂಟು ವರ್ಷದ ಬಾಲಕನೊಬ್ಬನಿಗೆ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದಾರೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿ ಈ ಪ್ರದೇಶದಲ್ಲಿ ಕೋಮು ಗಲಭೆಯ ಆತಂಕವನ್ನು ಉಂಟು ಮಾಡಿತ್ತು.

ಪಾಕಿಸ್ತಾನ್ ಮುರ್ದಾಬಾದ್ ಎಂದ  ಬಾಲಕನಿಗೆ ಇರಿದ ದುಷ್ಕರ್ಮಿಗಳು

ಉತ್ತರಪ್ರದೇಶ: ಹಿಂದೂಸ್ತಾನ್ ಜಿಂದಾಬಾದ್ ಪಾಕಿಸ್ತಾನ್ ಮುರ್ದಾಬಾದ್ ( Hindustan Zindabad Pakistan Murdabad) ಎನ್ನುವ ಘೋಷಣೆ ಕೂಗುತ್ತಿದ್ದ ಎಂಟು ವರ್ಷದ ಬಾಲಕನಿಗೆ ಇಬ್ಬರು ದುಷ್ಕರ್ಮಿಗಳು ಇರಿದಿರುವ ಘಟನೆ ಉತ್ತರ ಪ್ರದೇಶದ (Uttarpradesh) ಶಹಜಹಾನ್‌ಪುರ (Shahjahanpur) ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ನಡೆದಿದೆ. ಇದು ಆಕ್ರೋಶಕ್ಕೆ ಕಾರಣವಾಗಿ ಕೋಮುಗಲಭೆಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಭಾರತೀಯ ಸೇನೆ ಬುಧವಾರ ಮುಂಜಾನೆ ನಡೆಸಿದ ಆಪರೇಷನ್ ಸಿಂದೂರ್ (Operation Sindoor) ಕಾರ್ಯಾಚರಣೆಯ ಬಗ್ಗೆ ಸಂತೋಷ ವ್ಯಕ್ತಪಡಿಸಿ ಬಾಲಕ ಈ ರೀತಿ ಘೋಷಣೆಗಳನ್ನು ಕೂಗಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪಹಲ್ಗಾಮ್ ಭಯೋತ್ಪಾದನಾ ದಾಳಿಗೆ ಪ್ರತಿಯಾಗಿ ಭಾರತೀಯ ಸೈನ್ಯವು ಪಾಕಿಸ್ತಾನದಲ್ಲಿನ ಭಯೋತ್ಪಾದಕ ಕೇಂದ್ರಗಳ ಮೇಲೆ ಆಪರೇಷನ್ ಸಿಂದೂರ್‌ ವೈಮಾನಿಕ ದಾಳಿಯನ್ನು ನಡೆಸಿತ್ತು. ಇದರ ಬಳಿಕ ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಒಂದು ಸಣ್ಣ ಹಳ್ಳಿಯಲ್ಲಿ ಕೋಮು ಗಲಭೆಗೆ ಕಾರಣವಾದ ಆತಂಕಕಾರಿ ಘಟನೆ ನಡೆದಿದೆ.

ಪಾಕಿಸ್ತಾನದಲ್ಲಿರುವ ಭಯೋತ್ಪಾದಕರ ಶಿಬಿರಗಳ ಮೇಲೆ ನಡೆಸಿರುವ ವಾಯುದಾಳಿಯ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಎಂಟು ವರ್ಷದ ಬಾಲಕನೊಬ್ಬನಿಗೆ ಇಬ್ಬರು ವ್ಯಕ್ತಿಗಳು ಚಾಕುವಿನಿಂದ ಇರಿದಿದ್ದಾರೆ. ಇದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿ ಈ ಪ್ರದೇಶದಲ್ಲಿ ಕೋಮು ಗಲಭೆಯ ಆತಂಕವನ್ನು ಉಂಟು ಮಾಡಿತ್ತು. ಆಪರೇಷನ್ ಸಿಂದೂರ್‌ ಕಾರ್ಯಾಚರಣೆಯನ್ನು ದೇಶಾದ್ಯಂತ ವ್ಯಾಪಕವಾಗಿ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದಕರು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ 26 ಪ್ರವಾಸಿಗರನ್ನು ಕೊಂದ ಬಳಿಕ ಕೇವಲ ಎರಡು ವಾರಗಳಲ್ಲಿ ನಾಗರಿಕರು ಬೀದಿಯಲ್ಲಿ ಪಟಾಕಿಗಳನ್ನು ಸಿಡಿಸಿ ಸಿಹಿತಿಂಡಿಗಳನ್ನು ವಿತರಿಸಿದರು.

ದೇಶಾದ್ಯಂತ ಈ ಆಚರಣೆಗಳು ನಡೆಯುತ್ತಿದ್ದಾಗಉತ್ತರಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಧರ್ಮಗಡಾಪುರ ಗ್ರಾಮದಲ್ಲಿ ಹಿಂಸಾಚಾರ ಭುಗಿಲೆದ್ದಿದೆ. ಸುರ್ಜೀತ್ ಎಂಬ ಎಂಟು ವರ್ಷದ ಬಾಲಕ ಹಿಂದೂಸ್ತಾನ್ ಜಿಂದಾಬಾದ್ ಮತ್ತು ಪಾಕಿಸ್ತಾನ್ ಮುರ್ದಾಬಾದ್ ಎಂಬ ಘೋಷಣೆಗಳನ್ನು ಕೂಗಿದ್ದು, ಆಗ ಮೊಹಿದ್ ಖಾನ್ ಮತ್ತು ಅವನ ಸಹಚರ ವಾಸಿಮ್ ಎಂಬಾತ ಬಾಲಕನಿಗೆ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಘಟನೆ ಸ್ಥಳದಲ್ಲಿ ಗಲಭೆಗೆ ಕಾರಣವಾಯಿತು. ಬಾಲಕನ ಮೇಲಿನ ಹಿಂಸಾಚಾರಕ್ಕೆ ಕೋಪಗೊಂಡ ಸ್ಥಳೀಯರು ದುಷ್ಕರ್ಮಿಗಳನ್ನು ಹಿಡಿದು ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Karan Johar: ನೆಪೋಟಿಸಂ ಬ್ರ್ಯಾಂಡ್ ಅಂಬಾಸಿಡರ್ ಎಂದವರಿಗೆ ಕರಣ್ ಜೋಹರ್ ಠಕ್ಕರ್‌ ಹೇಗಿತ್ತು ಗೊತ್ತಾ?

ಬಾಲಕ ಸುರ್ಜೀತ್ ನನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದ್ದು, ಆತನ ಅರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ಶಹಜಹಾನ್‌ಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಬಂಧಿಸಲಾಗಿದ್ದು, ಘಟನೆಯ ಹಿಂದಿನ ಉದ್ದೇಶದ ಬಗ್ಗೆ ತಿಳಿಯಲು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯ ಅನಂತರ ಉದ್ವಿಗ್ನಗೊಂಡಿರುವ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.