Byrati Basavaraj: ಶಾಸಕ ಬೈರತಿ ಬಸವರಾಜ್ ಮತ್ತೆ ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ
ಸದ್ಯ ಫೆ.26ರವರೆಗೆ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲಿ ಮುಂದುವರೆಸಲು ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕೂಡ ಡಯೆಟ್ ಪ್ಲಾನ್ ಪ್ರಕಾರವೇ ಊಟ ನೀಡಲು ನ್ಯಾಯಾಲಯ ಸೂಚಿಸಿದೆ.
ಬೈರತಿ ಬಸವರಾಜ್ -
ಬೆಂಗಳೂರು, ಫೆ.21: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ (Rowdy Sheeter Biklu Shiva Murder Case) ಶಾಸಕ ಬೈರತಿ ಬಸವರಾಜ್‌ರನ್ನು (Byrati Basavaraj) ಫೆ.26ರವರೆಗೆ ನ್ಯಾಯಾಂಗ ಬಂಧನಕ್ಕೆ (Judicial Custody) ನೀಡಿ ಜನಪ್ರತಿನಿಧಿಗಳ ಕೋರ್ಟ್ ಆದೇಶ ಹೊರಡಿಸಿದೆ. ಬಿಕ್ಲು ಶಿವ ಕೊಲೆ ಕೇಸಲ್ಲಿ ಬೈರತಿ ಬಸವರಾಜ್ ಐದನೇ ಆರೋಪಿಯಾಗಿದ್ದಾರೆ.
ಇಂದು (ಫೆ.21) ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಿಐಡಿ ಪೊಲೀಸರು, ಮತ್ತೆ ಪೊಲೀಸ್ ಕಸ್ಟಡಿಗೆ ನೀಡವಂತೆ ಮನವಿ ಮಾಡಿದರು. ವೈದ್ಯಕೀಯ ವರದಿ ಆಧರಿಸಿ ಜೈಲಿಗೆ ಕಳುಹಿಸುವಂತೆ ಬೈರತಿ ಪರ ವಕೀಲರು ಮನವಿ ಮಾಡಿದ್ದರು.
ಸದ್ಯ ಫೆ.26ರವರೆಗೆ ಬೈರತಿ ಬಸವರಾಜ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಜಯದೇವ ಆಸ್ಪತ್ರೆಯಲ್ಲಿ ನೀಡಿರುವ ಡಯೆಟ್ ಪ್ಲಾನ್ ಅನ್ನು ಜೈಲಿನಲ್ಲಿ ಮುಂದುವರೆಸಲು ಕೋರ್ಟ್ ಸೂಚನೆ ನೀಡಿದೆ. ಜೈಲಿನಲ್ಲಿ ಕೂಡ ಡಯೆಟ್ ಪ್ಲಾನ್ ಪ್ರಕಾರವೇ ಊಟ ನೀಡಲು ನ್ಯಾಯಾಲಯ ಸೂಚಿಸಿದೆ.
Byrati Basavaraj: ರೌಡಿಶೀಟರ್ ಹತ್ಯೆ, ಇಂದು ವಿಚಾರಣೆಗೆ ಶಾಸಕ ಬೈರತಿ ಬಸವರಾಜ್ ಹಾಜರು
ಫೆ.12 ರಂದು ಅಹಮದಾಬಾದ್‌ನಿಂದ ಬೆಂಗಳೂರಿಗೆ ಆಗಮಿಸಿದ್ದ ಬೈರತಿ ಬಸವರಾಜ್ ಅವರನ್ನು ಪೊಲೀಸರು ಬಂಧಿಸಿದ್ದರು. ಮರುದಿನ ಆರೋಗ್ಯ ತಪಾಸಣೆ ನಡೆಸಿದ್ದ ವೇಳೆ ಅವರಿಗೆ ಇಸಿಜಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿತ್ತು. ಬಳಿಕ ಅವರಿಗೆ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಮ್ ಮಾಡಿಸಲಾಗಿತ್ತು. ಅವರನ್ನು ಒಂದು ದಿನ ಆಸ್ಪತ್ರೆಯಲ್ಲಿ ನಿಗಾದಲ್ಲಿ ಇಡಲಾಗಿತ್ತು.
ಏನಿದು ಪ್ರಕರಣ?
ಶಾಸಕರಾಗಿ ಆಯ್ಕೆಯಾದ ಬೈರತಿ ಬಸವರಾಜು ಅವರಿಗೆ 2025ರ ಜುಲೈನಲ್ಲಿ ನಡೆದ ರೌಡಿಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್ ಕೊಲೆ ಪ್ರಕರಣ ಥಳುಕು ಹಾಕಿಕೊಂಡಿದೆ. ಹಲಸೂರು ಕೆರೆ ಸಮೀಪ 2025ರ ಜುಲೈ 15ರಂದು ರೌಡಿ ಶೀಟರ್ ಬಿಕ್ಲು ಶಿವ ಅಲಿಯಾಸ್ ಶಿವಪ್ರಕಾಶ್‌ನ ಕೊಲೆ ಆಗಿತ್ತು. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಕೊಲೆ ನಡೆದಿದೆ ಎನ್ನಲಾಗಿದೆ. ಕೊಲೆ ಆರೋಪದ ಮೇರೆಗೆ ಜಗದೀಶ್, ಕಿರಣ್, ವಿಮಲ್, ಅನಿಲ್ ಮತ್ತು ಬೈರತಿ ಬಸವರಾಜ್ ವಿರುದ್ಧ ಭಾರತೀನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಕೊಲೆಯಾದ ಶಿವಪ್ರಕಾಶ್‌ನ ತಾಯಿ ವಿಜಯಲಕ್ಷ್ಮೀ ನೀಡಿದ ದೂರಿನ ಮೇರೆಗೆ ಸಿಐಡಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣದಲ್ಲಿ ಬೈರತಿ 5ನೇ ಆರೋಪಿ. ವಿಚಾರಣೆ ವೇಳೆ ತಮಗೆ ಪ್ರಥಮ ಆರೋಪಿ ಜಗದೀಶ್ ಗೊತ್ತೇ ಇಲ್ಲ ಎಂದು ಬೈರತಿ ವಾದಿಸಿದ್ದರು. ಬಳಿಕ ಈ ವಾದ ಸುಳ್ಳು ಎನ್ನುವುದು ಸಾಬೀತಾಗಿತ್ತು.