ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಉದ್ವಿಗ್ನಗೊಂಡ ಉತ್ತರಾಖಂಡ: ಗುಂಪು ಘರ್ಷಣೆಯಿಂದ ಓರ್ವ ಸಾವು, ಇಬ್ಬರು ಗಂಭೀರ

ಕ್ಷುಲಕ ಕಾರಣಕ್ಕೆ ಉಂಟಾದ ಜಗಳ ಗುಂಪು ಘರ್ಷಣೆಗೆ ಕಾರಣವಾಗಿ ಉತ್ತರಾಖಂಡ್ ಪಟ್ಟಣ ಉದ್ವಿಗ್ನಗೊಂಡ ಘಟನೆ ನಡೆದಿದೆ. ಘರ್ಷಣೆಯಲ್ಲಿ ಓರ್ವನಿಗೆ ಚಾಕು ಇರಿದಿದ್ದು, ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.ಆತನ ಸಹಚರರಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದರು.

ಗುಂಪು ಘರ್ಷಣೆ ಬಳಿಕ ಉತ್ತರಾಖಂಡ ಉದ್ವಿಗ್ನ

(ಸಂಗ್ರಹ ಚಿತ್ರ) -

ಉತ್ತರಾಖಂಡ: ಗುಂಪು ಘರ್ಷಣೆಯ (Mob clash) ವೇಳೆ ಚಾಕು ಇರಿತದಿಂದ ಓರ್ವ ಸಾವನ್ನಪ್ಪಿದ ಘಟನೆ ಉತ್ತರಾಖಂಡ್ (Uttarakhand) ಪಟ್ಟಣದಲ್ಲಿ ನಡೆದಿದೆ. ಶುಕ್ರವಾರ ರಾತ್ರಿ ಎರಡು ಗುಂಪುಗಳ ಮಧ್ಯೆ ಕ್ಷುಲಕ ಕಾರಣಕ್ಕೆ ಜಗಳ ಪ್ರಾರಂಭವಾಗಿದ್ದು, ಇದರಿಂದ ಓರ್ವ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಸಂಪೂರ್ಣ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಘಟನೆಯಲ್ಲಿ ಹಲವು ಅಂಗಡಿಗಳಿಗೆ ಬೆಂಕಿ ಹಚ್ಚಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ (lathi charge) ನಡೆಸಿದರು.

ಈ ಕುರಿತು ಮಾಹಿತಿ ನೀಡಿದ ಉಧಮ್ ಸಿಂಗ್ ನಗರದ ಹಿರಿಯ ಪೊಲೀಸ್ ಅಧೀಕ್ಷಕ ಮಣಿಕಾಂತ್ ಮಿಶ್ರಾ, ಉತ್ತರಾಖಂಡ್ ಪಟ್ಟಣದಲ್ಲಿ ಶುಕ್ರವಾರ ರಾತ್ರಿ ಎರಡು ಗುಂಪುಗಳ ಮಧ್ಯೆ ಕ್ಷುಲಕ ಕಾರಣಕ್ಕೆ ಜಗಳವಾಗಿದ್ದು, ಗುಂಪು ಘರ್ಷಣೆಗೆ ಕಾರಣವಾಗಿದೆ. ಘಟನೆಯಲ್ಲಿ ತುಷಾರ್ ಶರ್ಮಾ ಎಂಬಾತನನ್ನು ಚಾಕುವಿನಿಂದ ಇರಿದು ಕೊಲ್ಲಲಾಗಿದೆ. ಆತನ ಇಬ್ಬರು ಸಹಚರರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ತಾಳಿ ಕಟ್ಟುವ ವೇಳೆ ಬ್ರೆಝಾ ಕಾರು, 20 ಲಕ್ಷ ರೂ. ವರದಕ್ಷಿಣೆಗೆ ಬೇಡಿಕೆ; ಮದುವೆಯನ್ನೇ ರದ್ದುಗೊಳಿಸಿ ಮಾದರಿಯಾದ ವಧು

ಹಾಶಿಮ್ ಮತ್ತು ಆತನ ಸಹಚರರು ಗಲಭೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಸಿಸಿಟಿವಿ ದೃಶ್ಯಗಳು ನೀಡಿರುವ ಸುಳಿವಿನ ಮೇರೆಗೆ ಪೊಲೀಸ್ ತಂಡವು ಝಂಝಾಟ್‌ನ ಇಟ್ಟಿಗೆ ಗೂಡು ಬಳಿ ಹಾಶಿಮ್‌ನಿಗೆ ಶರಣಾಗುವಂತೆ ಕೇಳಲಾಯಿತು. ಆದರೆ ಆತ ಮತ್ತು ಆತನ ಸಹಚರರು ಗುಂಡಿನ ದಾಳಿ ನಡೆಸಲು ಪ್ರಾರಂಭಿಸಿದರು. ಇದರಿಂದ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹರಿಸಿದ್ದಾರೆ. ಇದರಿಂದ ಗಾಯಗೊಂಡ ಆತನನ್ನು ಬಳಿಕ ಬಂಧಿಸಲಾಯಿತು ಎಂದು ಹೇಳಿದರು.



ಆರೋಪಿಯಿಂದ 315 ಬೋರ್ ಪಿಸ್ತೂಲ್ ಮತ್ತು ಎರಡು ಲೈವ್ ಕಾರ್ಟ್ರಿಡ್ಜ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಗೆ ಪ್ರಥಮ ಚಿಕಿತ್ಸೆ ನೀಡಿ ನಾನಕ್‌ಮಟ್ಟ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ರುದ್ರಪುರದ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿಸಿದರು.

ಮಹಿಳೆಗೆ ವಂಚನೆ, ಲೈಂಗಿಕ ಕಿರುಕುಳ ಆರೋಪ; ಬ್ರಹ್ಮಾನಂದ ಗುರೂಜಿ ವಿರುದ್ಧ ಎಫ್‌ಐಆರ್‌

ಆರೋಪಿಯ ಸಹಚರರನ್ನು ಗುರುತಿಸಲಾಗಿದ್ದು, ಬಂಧನಕ್ಕೆ ಕ್ರಮಕೈಗೊಳ್ಳಲಾಗಿದೆ. ಈ ಘಟನೆಯ ಬಳಿಕ ಶನಿವಾರ ಬಜರಂಗದಳದ ನೇತೃತ್ವದ ಗುಂಪು ಆರೋಪಿಗಳಿಗೆ ಸೇರಿದ ಅಂಗಡಿಗೆ ಬೆಂಕಿ ಹಚ್ಚಿದೆ. ಇದರಿಂದ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರು ಲಾಠಿ ಪ್ರಹಾರ ನಡೆಸಿ ಪರಿಸ್ಥಿತಿಯನ್ನು ನಿಯಂತ್ರಿಸಿದ್ದಾರೆ.