ಬೆಂಗಳೂರಿನಲ್ಲಿ 15 ದಿನಗಳ ಹಿಂದೆ ಬಿಟೆಕ್ ವಿದ್ಯಾರ್ಥಿ ಆತ್ಮಹತ್ಯೆ, ಇದೀಗ ಅದೇ ಹಾಸ್ಟೆಲ್‌ನಲ್ಲಿ ಎಂಟೆಕ್ ವಿದ್ಯಾರ್ಥಿ ಆತ್ಮಹತ್ಯೆ
MTech student dies by self-harming: ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ)ಯ ತನ್ನ ಹಾಸ್ಟೆಲ್ ಕೋಣೆಯಲ್ಲಿ 22 ವರ್ಷದ ಪ್ರಥಮ ವರ್ಷದ ಎಂಟೆಕ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ ಎಂದು ರಿಜಿಸ್ಟ್ರಾರ್ ಪ್ರೊ. ಡಿ. ನಾಗೇಶ್ ಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಸಾಂದರ್ಭಿಕ ಚಿತ್ರ -
ಬೆಂಗಳೂರು, ಆ.22: ಇಲ್ಲಿನ ಭಾರತೀಯ ವಿಜ್ಞಾನ ಸಂಸ್ಥೆ (IISC)ಯ ತನ್ನ ಹಾಸ್ಟೆಲ್ ಕೋಣೆಯಲ್ಲಿ 22 ವರ್ಷದ ಪ್ರಥಮ ವರ್ಷದ ಎಂಟೆಕ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ (self-harming) ಮಾಡಿಕೊಂಡಿದ್ದಾನೆ. ಕಳೆದ 15 ದಿನಗಳಲ್ಲಿ ಸಂಸ್ಥೆಯಲ್ಲಿ ನಡೆದ ಎರಡನೇ ಘಟನೆ ಇದಾಗಿದೆ. ವಿದ್ಯಾರ್ಥಿಯು ಕಂಪ್ಯೂಟರ್ ಸೈನ್ಸ್ ಮತ್ತು ಆಟೊಮೇಷನ್ (CSA) ವಿಭಾಗದಲ್ಲಿ ಎಂ.ಟೆಕ್ ವ್ಯಾಸಂಗ ಮಾಡುತ್ತಿದ್ದ. ಸ್ನಾತಕೋತ್ತರ ತರಗತಿಗಳಿಗೆ ಹೊಸ ಶೈಕ್ಷಣಿಕ ಅವಧಿ ಪ್ರಾರಂಭವಾದ ಆಗಸ್ಟ್ 3 ರಿಂದ ಅವನು ಕಾಲೇಜಿನ ಕೃತಿಕಾ ಹಾಸ್ಟೆಲ್‌ನಲ್ಲಿ ತಂಗಿದ್ದ.
ವಿದ್ಯಾರ್ಥಿಯ ಸಾವಿನಿಂದ ಸಂಸ್ಥೆಗೆ ಆಘಾತ ತಂದಿದೆ ಮತ್ತು ತುಂಬಾ ದುಃಖಿತವಾಗಿದೆ. ಮೃತರ ಕುಟುಂಬ ಮತ್ತು ಸ್ನೇಹಿತರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ಅನುಗ್ರಹಿಸಲಿ ಎಂದು ರಿಜಿಸ್ಟ್ರಾರ್ ಪ್ರೊ. ಡಿ. ನಾಗೇಶ್ ಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
ಐಐಎಸ್‌ಸಿ (IISc) ಆವರಣವು ಪ್ರತಿಯೊಬ್ಬರಿಗೂ ಸುರಕ್ಷಿತ ಸ್ಥಳವಾಗಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ನಾವು ಬದ್ಧರಾಗಿದ್ದೇವೆ ಎಂದು ಕುಮಾರ್ ಹೇಳಿದ್ದಾರೆ. ಮಾನಸಿಕ ತೊಂದರೆ ಅಥವಾ ಆತಂಕವನ್ನು ಅನುಭವಿಸುತ್ತಿರುವ ವಿದ್ಯಾರ್ಥಿಗಳು ಸಂಸ್ಥೆಯ ವೆಲ್‌ನೆಸ್ ಸೆಂಟರ್ ಮೂಲಕ ಲಭ್ಯವಿರುವ ಮಾನಸಿಕ ಆರೋಗ್ಯ ಬೆಂಬಲ ಸೇವೆಗಳನ್ನು ಬಳಸಿಕೊಳ್ಳುವಂತೆ ಅವರು ಒತ್ತಾಯಿಸಿದ್ದಾರೆ.
ಮಗನನ್ನು ಕಾಪಾಡಲು ಹೋಗಿ ಬೆಟ್ಟದಿಂದ ಕೆಳಗೆ ಬಿದ್ದ ತಂದೆ; ಘಟನೆ ನೋಡಿ ತಾಯಿಯೂ ಆತ್ಮಹತ್ಯೆ!
ಇವುಗಳಲ್ಲಿ 24×7 ತುರ್ತು ಸಮಾಲೋಚನೆ ಸಹಾಯವಾಣಿ, ಆನ್‌ಲೈನ್ ಸಮಾಲೋಚನೆ ಮತ್ತು ಸಲಹೆಗಾರರು ಮತ್ತು ಮನೋವೈದ್ಯರೊಂದಿಗೆ ಸಮಾಲೋಚನೆಗಳು ಸೇರಿವೆ ಎಂದು ರಿಜಿಸ್ಟ್ರಾರ್ ತಿಳಿಸಿದ್ದಾರೆ. ಇನ್ನು ಈ ಸಂಬಂಧ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬಕ್ಕೆ ಮಾಹಿತಿ ನೀಡಿದ್ದೇವೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ನಿವಾಸಿಯಾಗಿದ್ದ 19 ವರ್ಷದ ಬಿಟೆಕ್ ವಿದ್ಯಾರ್ಥಿ ಆಗಸ್ಟ್ 6 ರಂದು ತನ್ನ ಹಾಸ್ಟೆಲ್ ಕೋಣೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಇದಾದ 15 ದಿನಗಳ ನಂತರ ಇದೀಗೆ ಎಂಟೆಕ್ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ.