Murder Case: ನೈಜೀರಿಯದ ಮಹಿಳೆ ಬೆಂಗಳೂರಿನಲ್ಲಿ ಬರ್ಬರ ಕೊಲೆ, ಡ್ರಗ್ಸ್ ಜಾಲದ ಶಂಕೆ
ಬೆಂಗಳೂರಿನಲ್ಲಿ ನೈಜೀರಿಯದ ಅನೇಕ ಮಂದಿ ವಾಸ್ತವ್ಯವಾಗಿದ್ದು, ಡ್ರಗ್ಸ್ ಪ್ರಕರಣಗಳಲ್ಲಿ ಇವರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಸಿಕ್ಕಿಬೀಳುತ್ತಿದ್ದಾರೆ. ಸೈಬರ್ ಕ್ರೈಮ್ ಪ್ರಕರಣಗಳಲ್ಲಿಯೂ ಇವರ ಕೈವಾಡ ಆಗಾಗ ಕಂಡುಬರುತ್ತಿದೆ. ಈ ಎಲ್ಲದರ ಹಿನ್ನೆಲೆಯಲ್ಲಿ, ಡ್ರಗ್ಸ್ ಅಪರಾಧ ಜಾಲದ ಹಿನ್ನೆಲೆಯೂ ಈ ಕೊಲೆ (Murder Case) ಪ್ರಕರಣದ ಹಿಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.

ಸಾಂದರ್ಭಿಕ ಚಿತ್ರ

ಬೆಂಗಳೂರು: ಬೆಂಗಳೂರಿನಲ್ಲಿ (Bengaluru crime news) ಮತ್ತೊಂದು ಬರ್ಬರ ಹತ್ಯೆಯಾಗಿದ್ದು, ನೈಜೀರಿಯನ್ ಮಹಿಳೆಯನ್ನು ಭೀಕರವಾಗಿ ಹತ್ಯೆ (murder case) ಮಾಡಿರುವ ಘಟನೆ ನಡೆದಿದೆ. ಬೆಂಗಳೂರಿನ ಚಿಕ್ಕಜಾಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ. ಮಹಿಳೆಯನ್ನು (Nigerian woman) ಬೇರೆಡೆ ಕೊಲೆ (killed) ಮಾಡಿ ಇಲ್ಲಿಗೆ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಬೆಂಗಳೂರಿನಲ್ಲಿ ನೈಜೀರಿಯದ ಅನೇಕ ಮಂದಿ ವಾಸ್ತವ್ಯವಾಗಿದ್ದು, ಡ್ರಗ್ಸ್ ಪ್ರಕರಣಗಳಲ್ಲಿ ಇವರು ಅತ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಸಿಕ್ಕಿಬೀಳುತ್ತಿದ್ದಾರೆ. ಸೈಬರ್ ಕ್ರೈಮ್ ಪ್ರಕರಣಗಳಲ್ಲಿಯೂ ಇವರ ಕೈವಾಡ ಆಗಾಗ ಕಂಡುಬರುತ್ತಿದೆ. ಡ್ರಗ್ಸ್ ಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಬಂಧಿಸಲು ಪೊಲೀಸರ ಮೇಲೆಯೇ ಪುಂಡಾಟ ಮಾಡಿ ದಾಂಧಲೆ ನಡೆಸಿದ ಘಟನೆಗಳೂ ನಡೆದಿದ್ದವು. ಈ ಎಲ್ಲದರ ಹಿನ್ನೆಲೆಯಲ್ಲಿ, ಡ್ರಗ್ಸ್ ಅಪರಾಧ ಜಾಲದ ಹಿನ್ನೆಲೆಯೂ ಈ ಕೊಲೆ ಪ್ರಕರಣದ ಹಿಂದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಮಗುವಿನ ಮುಂದೆಯೇ ದಂಪತಿಯನ್ನು ಇರಿದು ಕೊಂದರು
ಬೀದರ್: ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ದಂಪತಿಯನ್ನು ಬರ್ಬರವಾಗಿ ಹತ್ಯೆ (Murder Case) ಮಾಡಿರುವುದು ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಕೊಹಿನೂರು ಪಹಾಡ ಬಳಿ ಮಂಗಳವಾರ ನಡೆದಿದೆ. ತಾಲೂಕಿನ ಜಾಫರವಾಡಿ ನಿವಾಸಿ ರಾಜು ಕಾಂತಪ್ಪ ಕೊಳಸೂರೆ (28) ಹಾಗೂ ಪತ್ನಿ ಶಾರದಾ (24) ಕೊಲೆಯಾದ ದಂಪತಿ. ತಾಲೂಕಿನ ಯರಂಡಗಿ ಗ್ರಾಮದ ದತ್ತಾತ್ರೇಯ ವಾಲೆ ಹಾಗೂ ತುಕಾರಾಮ ಚಿಟಂಪಲ್ಲೆ ಕೊಲೆ ಆರೋಪಿಗಳು. ಕೊಲೆಯಾದ ರಾಜು ಆರೋಪಿ ದತ್ತಾತ್ರೇಯನ ಸಹೋದರಿಯ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎನ್ನುವ ಸಂಶಯದ ಮೇಲೆ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
ಪತ್ನಿಯೊಂದಿಗೆ ಮುಂಬೈಗೆ ತೆರಳಿದ್ದ ರಾಜುನನ್ನು ಕೊಲೆ ಮಾಡಲು ಸಂಚು ರೂಪಿಸಿದ ಆರೋಪಿಗಳು, ಯುವತಿ ಕಡೆಯಿಂದ ಮೊಬೈಲ್ ಕರೆ ಮಾಡಿಸಿ ಆತನನ್ನು ಕರೆಸಿಕೊಂಡಿದ್ದಾರೆ. ಬಳಿಕ ದಂಪತಿಯನ್ನು ಕೊಹಿನೂರು ಪಹಾಡ ಬಳಿ ಮಾರ್ಗದ ಮಧ್ಯೆ ಮಾತನಾಡುವ ನೆಪದಲ್ಲಿ ಗ್ರಾಮದ ಹೊರವಲಯಕ್ಕೆ ಕರೆದುಕೊಂಡು ಹೋಗಿ ಮಚ್ಚಿನಿಂದ ಕತ್ತು ಸೀಳಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ಇಬ್ಬರು ಯುವಕರು ಹಾಗೂ ಆರೋಪಿಯ ಸಹೋದರಿ ಸೇರಿ ಮೂವರ ವಿರುದ್ದ ಪ್ರಕರಣ ದಾಖಲಾಗಿದೆ.
ಕೊಲೆಯಾದ ದಂಪತಿಗೆ ಮೂರು ವರ್ಷದ ಪುಟ್ಟ ಮಗುವಿದೆ. ಏನೂ ಅರಿಯದ ಮಗುವಿನ ಮುಂದೆಯೇ ಪಾಲಕರನ್ನು ಕೊಲೆ ಮಾಡಲಾಗಿದೆ. ತಂದೆ, ತಾಯಿಯನ್ನು ಕಳೆದುಕೊಂಡ ಮಗು ಕೊಲೆಯಾದ ಸ್ಥಳದಲ್ಲಿ ಅನಾಥವಾಗಿ ಕುಳಿತಿದ್ದ ದೃಶ್ಯ ನೋಡುಗರ ಮನಕಲಕುವಂತಿತ್ತು. ಘಟನಾ ಸ್ಥಳಕ್ಕೆ ಎಸ್ಪಿ ಪ್ರದೀಪ್ ಗುಂಟಿ, ಡಿವೈಎಸ್ಪಿ ಜೆ.ಎಸ್. ನ್ಯಾಮಗೌಡರ್, ಸಿಪಿಐ ಕೃಷ್ಣಕುಮಾರ ಪಾಟೀಲ್, ಪಿಎಸ್ಐ ಸುವರ್ಣ ಮಲಶೆಟ್ಟಿ ಇತರರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಇದನ್ನೂ ಓದಿ: Honor killing: ಬೇರೆ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಲೆಗೈದು ನದಿಗೆ ಶವ ಎಸೆದ ತಂದೆ!