ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Theft Case: ಅಪಘಾತವಾಗಿ ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ರೂ. ಎಗರಿಸಿದ ಖದೀಮರು!

ಮೈಸೂರು ತಾಲೂಕಿನ ಕಡಕೊಳದ ಬಳಿ ಡಿ.19 ರಂದು ಗಣೇಶ್ ಎಂಬವರು ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಬಂದ ರಮೇಶ ಮತ್ತು ಮನು, ಗಣೇಶ್ ಮೊಬೈಲ್ ತೆಗೆದುಕೊಂಡು ಯುಪಿಐ (UPI) ಮೂಲಕ 80 ಸಾವಿರ ರೂ. ಹಣ ವರ್ಗಾವಣೆ ಮಾಡಿಕೊಂಡು ಆಸ್ಪತ್ರೆಗೆ ಸೇರಿಸದೇ ಪರಾರಿ ಆಗಿದ್ದರು.

ಅಪಘಾತವಾಗಿ ಬಿದ್ದ ವ್ಯಕ್ತಿ ಮೊಬೈಲ್‌ನಿಂದ 80,000 ರೂ. ಎಗರಿಸಿದ ಖದೀಮರು!

ಆರೋಪಿಗಳಾದ ರಮೇಶ ಮತ್ತು ಮನು -

ಹರೀಶ್‌ ಕೇರ
ಹರೀಶ್‌ ಕೇರ Dec 23, 2025 1:02 PM

ಮೈಸೂರು, ಡಿ.23: ಅಪಘಾತವಾಗಿ (Accident) ಬಿದ್ದಿದ್ದ ವ್ಯಕ್ತಿಯ ಮೊಬೈಲ್‌ನಿಂದ 80,000 ಸಾವಿರ ರೂ. ಹಣ ಕದ್ದಿದ್ದ (Theft Case) ಆರೋಪಿಗಳನ್ನು ಮೈಸೂರು (Mysuru crime news) ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ರಮೇಶ್ ಮತ್ತು ಮನು ಎಂದು ಗುರುತಿಸಲಾಗಿದೆ.

ಮೈಸೂರು ತಾಲೂಕಿನ ಕಡಕೊಳದ ಬಳಿ ಡಿ.19 ರಂದು ಗಣೇಶ್ ಎಂಬವರು ಫ್ಯಾಕ್ಟರಿಯಲ್ಲಿ ಕೆಲಸ ಮುಗಿಸಿ ಮಧ್ಯರಾತ್ರಿ ಮನೆಗೆ ಬರುವಾಗ ಅಪಘಾತವಾಗಿತ್ತು. ಆಸ್ಪತ್ರೆಗೆ ಸೇರಿಸುವ ನೆಪದಲ್ಲಿ ಬಂದ ರಮೇಶ ಮತ್ತು ಮನು, ಗಣೇಶ್ ಮೊಬೈಲ್ ತೆಗೆದುಕೊಂಡು ಯುಪಿಐ (UPI) ಮೂಲಕ 80 ಸಾವಿರ ರೂ. ಹಣ ವರ್ಗಾವಣೆ ಮಾಡಿಕೊಂಡು ಆಸ್ಪತ್ರೆಗೆ ಸೇರಿಸದೇ ಪರಾರಿ ಆಗಿದ್ದರು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗಣೇಶ್ ಸಹೋದರ ಅಂಕನಾಯಕ, ಗಣೇಶರನ್ನು ಆಸ್ಪತ್ರೆಗೆ ಸೇರಿಸಿ ಸಿಇಎನ್ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದರು. ಹಣ ವರ್ಗಾವಣೆ ಮಾಹಿತಿ ಸಂಗ್ರಹಿಸಿ, ಮೈಸೂರಿನ ಮಹದೇವಪುರದ ನಿವಾಸಿಗಳಾದ ರಮೇಶ ಮತ್ತು ಮನುರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಬಂಧಿತರಿಂದ 80 ಸಾವಿರ ಹಣ ಹಾಗೂ ಎರಡು ಮೊಬೈಲ್ ವಶಕ್ಕೆ ಪಡೆಯಲಾಗಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಮೇಲೆ ಪೈಲಟ್‌ನಿಂದ ಹಲ್ಲೆ; ಕರ್ತವ್ಯದಿಂದ ಅಮಾನತು

ಅಂಗಡಿಗೆ ನುಗ್ಗಿ ಚಾಕುವಿನಿಂದ ಇರಿತ

ಶಿವಮೊಗ್ಗ: ಜಿಲ್ಲೆಯಲ್ಲಿ ಬೆಚ್ಚಿ ಬೀಳಿಸೋ ಘಟನೆಯೊಂದು ನಡೆದಿದೆ. ಮೊಬೈಲ್ ಅಂಗಡಿಗೆ ನುಗ್ಗಿ ಚಾಕುವಿನಿಂದ ಇರಿದಿರುವಂತ ಘಟನೆ ನಡೆದಿದೆ. ಶಿವಮೊಗ್ಗದ ಅಮೀರ್ ಅಹ್ಮದ್ ಸರ್ಕಲ್‌ನಲ್ಲಿರುವ ಅಂಗಡಿಗೆ ನುಗ್ಗಿ ಮಾಲೀಕ ಸೈಯದ್ ಬರ್ಕತ್ (32) ಎಂಬವರಿಗೆ ಚಾಕುವಿನಿಂದ ಇರಿಯಲಾಗಿದೆ. ಹಳೆಯ ದ್ವೇಷದ ಹಿನ್ನಲೆಯಲ್ಲಿ ಸೈಯದ್ ಗೆ ಚಾಕುವಿನಿಂದ ಇರಿದಿರುವ ಶಂಕೆ ವ್ಯಕ್ತವಾಗಿದೆ. ಚಾಕು ಇರಿತಕ್ಕೆ ಒಳಗಾದ ಸೈಯದ್‌ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.