ಫೋಟೋ ಗ್ಯಾಲರಿ ಬಜೆಟ್​ T20 ವಿಶ್ವಕಪ್​ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ವಿದೇಶ ಕ್ರೈಂ ಧಾರ್ಮಿಕ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

Assault Case: ಪಿಯುಸಿ ಪರೀಕ್ಷೆ ಬರೆಯಲು ಹೋಗದಂತೆ ವಿದ್ಯಾರ್ಥಿನಿ ಮೇಲೆ ಸೋದರಮಾವನ ಹಲ್ಲೆ

ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ (2nd PUC Exam) ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸೋದರ ಮಾವ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನಲೆಯಲ್ಲಿ, ನೀನು ಓದಬಾರದು ಅಂತ ಹಲ್ಲೆ ಮಾಡಿದ್ದಾನೆ.

ಪಿಯುಸಿ ಪರೀಕ್ಷೆ ಬರೆಯಲು ಹೋಗದಂತೆ ವಿದ್ಯಾರ್ಥಿನಿ ಮೇಲೆ ಸೋದರಮಾವನ ಹಲ್ಲೆ

ಆರೋಪಿ ಸೋಮಣ್ಣ -

ಹರೀಶ್‌ ಕೇರ
ಹರೀಶ್‌ ಕೇರ Mar 2, 2026 12:50 PM

ಮೈಸೂರು, ಮಾರ್ಚ್‌ 02: ಹಳೇ ದ್ವೇಷದ ಹಿನ್ನೆಲೆಯಲ್ಲಿ ದ್ವಿತೀಯ ಪಿಯುಸಿ (2nd PUC) ವಿದ್ಯಾರ್ಥಿನಿ (Student) ಮೇಲೆ ಆಕೆಯ ಸೋದರ ಮಾವನೇ (Uncle) ಹಲ್ಲೆ (Assault case) ನಡೆಸಿರುವ ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡು ತಾಲೂಕಿನ ಪಾಳ್ಯಾ ಗ್ರಾಮದಲ್ಲಿ ನಡೆದಿದೆ. ಪರೀಕ್ಷೆ ಬರೆಯಲು ಹೋಗಬಾರದು ಎಂಬ ದುರುಳ ಉದ್ದೇಶವೂ ಈ ಹಲ್ಲೆಯ ಹಿಂದೆ ಇದೆ ಎಂದು ಗೊತ್ತಾಗಿದೆ.

ಪೂರ್ಣಿಮಾ ಹಲ್ಲೆಗೆ ಒಳಗಾದ ವಿದ್ಯಾರ್ಥಿನಿ. ಆಕೆ ಪರೀಕ್ಷೆ (2nd PUC Exam) ಮುಗಿಸಿ ಮನೆಗೆ ಬಂದಾಗ ವಿದ್ಯಾರ್ಥಿನಿಯ ಸೋದರ ಮಾವ ಸೋಮಣ್ಣ ಎಂಬಾತ ಏಕಾಏಕಿ ಮನೆಗೆ ನುಗ್ಗಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾನೆ. ಹಳೇ ದ್ವೇಷದ ಹಿನ್ನಲೆಯಲ್ಲಿ, ನೀನು ಓದಬಾರದು ಅಂತ ಹಲ್ಲೆ ಮಾಡಿದ್ದಾನೆ. ಯುವತಿಯ ನೆರವಿಗೆ ಬಂದ ಕುಟುಂಬಸ್ಥರ ಮೇಲೆಯೂ ಹಲ್ಲೆ ಮಾಡಿದ್ದಾನೆ.

ಸೋದರ ಮಾವ ಸೋಮಣ್ಣನ ಆಶ್ರಯದಲ್ಲಿ ಬೆಳೆಯುತ್ತಿರುವ ಪೂರ್ಣಿಮಾ, ಓದಬಾರದು ಉತ್ತಮ ಭವಿಷ್ಯ ರೂಪಿಸಿಕೊಳ್ಳಬಾರದು ಎಂದು ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸದ್ಯ ಯುವತಿ ಪೂರ್ಣಿಮಾಳನ್ನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೋಮಣ್ಣ ಸೇರಿ 7 ಜನರ ವಿರುದ್ಧ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ (Nanjangud Rural Police Station) ಕೇಸ್ ದಾಖಲಾಗಿದೆ.

Heart Attack: ಪೊಲೀಸ್‌ ಮ್ಯಾರಥಾನ್‌ ವೇಳೆ ಕುಸಿದು ಬಿದ್ದು ಎಸ್‌ಐ ಸಾವು

ಕಾಡಾನೆ ದಾಳಿಯಿಂದ ಯುವತಿ ಸಾವು

ಮಡಿಕೇರಿ: ಕಾಡಾನೆ ದಾಳಿಗೆ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಶನಿವಾರ ಸಂಜೆ ಮಡಿಕೇರಿ (Madikeri News) ತಾಲೂಕಿನ ಬೆಟ್ಟತ್ತೂರು ಗ್ರಾಮದಲ್ಲಿ ನಡೆದಿದೆ. ಮದೆ ಗ್ರಾಮ ಪಂಚಾಯಿತಿಯ ಬೆಟ್ಟತೂರು ಗ್ರಾಮದ ಗಿರೀಶ್ ಅವರ ಪುತ್ರಿ ಪೂಜಾ (17) ಮೃತ ದುರ್ದೈವಿ.

ಮಡಿಕೇರಿಯ ಸಂತ ಮೈಕೆಲ್ ಶಾಲೆಯಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತಿದ್ದ ಪೂಜಾ ನೆನ್ನೆ ಸಂಜೆ 5:30ಕ್ಕೆ ಕಾಲೇಜು ಮುಗಿಸಿ ಮತ್ತೆ ಬೆಟ್ಟತೂರಿಗೆ ಬಂದಿದ್ದಳು. ಬಸ್ಸಿನಿಂದಿಳಿದು ಮನೆಗೆ ಹೋಗುವಾಗ ಏಕಾಏಕಿ ಕಾಡಾನೆ ದಾಳಿ ನಡೆಸಿದೆ. ಇದರಿಂದ ಪೂಜಾ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಯುವತಿಯ ಶವವನ್ನು ಮಡಿಕೇರಿಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.

ಘಟನೆಯನ್ನು ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಆನೆ ದಾಳಿ ತಡೆಯುವಲ್ಲಿ ಅರಣ್ಯ ಇಲಾಖೆ ಸಂಪೂರ್ಣ ವಿಫಲವಾಗಿದೆ. ಆನೆ-ಮಾನವ ಸಂಘರ್ಷ ತಡೆಗೆ ಕ್ರಮ ಕೈಗೊಂಡು, ಮೃತ ಬಾಲಕಿ ಕುಟುಂಬಕ್ಕೆ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.