Actress Ramya: ನಟಿ ರಮ್ಯಾಗೆ ಅಶ್ಲೀಲ ಕಮೆಂಟ್ ಪ್ರಕರಣ: 380 ಪುಟಗಳ ಚಾರ್ಜ್‌ಶೀಟ್ ಸಲ್ಲಿಕೆ
Actor Darshan: ಆರೋಪಿಗಳ ಮೊಬೈಲ್, ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ ಸ್ಕ್ರೀನ್ ಶಾಟ್, ವಿಡಿಯೋ ಶೇರ್ ಆಗಿರುವ ಲಿಂಕ್‌ಗಳು, ದೂರುದಾರೆ ರಮ್ಯಾ ಸ್ಟೇಟ್‌ಮೆಂಟ್, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಆರೋಪಿಗಳ ಸ್ವ ಇಚ್ಚಾ ಹೇಳಿಕೆ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.

-

ಬೆಂಗಳೂರು: ನಟಿ ರಮ್ಯಾಗೆ (Actress Ramya) ಸೋಶಿಯಲ್ ಮೀಡಿಯಾದಲ್ಲಿ (Social Media) ಅಶ್ಲೀಲ ಕಮೆಂಟ್ ಹಾಕಿದ ದರ್ಶನ್ (Actor Darshan) ಅಭಿಮಾನಿಗಳ ಮೇಲೆ ಸಿಸಿಬಿ (CCB Police) ಸೈಬರ್ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. 11 ಆರೋಪಿಗಳ ಮೇಲೆ 380 ಪುಟಗಳ ಸುದೀರ್ಘ ಚಾರ್ಜ್‌ಶೀಟ್ (Chargesheet) ಸಲ್ಲಿಕೆ ಮಾಡಲಾಗಿದೆ. ಆರೋಪಿಗಳ ಮೊಬೈಲ್, ಸೋಷಿಯಲ್ ಮೀಡಿಯಾದಲ್ಲಿ ಕಮೆಂಟ್ ಹಾಕಿದ ಸ್ಕ್ರೀನ್ ಶಾಟ್, ವಿಡಿಯೋ ಶೇರ್ ಆಗಿರುವ ಲಿಂಕ್‌ಗಳು, ದೂರುದಾರೆ ರಮ್ಯಾ ಸ್ಟೇಟ್‌ಮೆಂಟ್, ವಿಧಿ ವಿಜ್ಞಾನ ಪ್ರಯೋಗಾಲಯದ ವರದಿ, ಆರೋಪಿಗಳ ಸ್ವ ಇಚ್ಚಾ ಹೇಳಿಕೆ ಆಧಾರದಲ್ಲಿ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
ದರ್ಶನ್ ಅವರ ಜಾಮೀನು ರದ್ದುಪಡಿಸುವಂತೆ ಕರ್ನಾಟಕ ಪೊಲೀಸರು ಸುಪ್ರೀಂ ಕೋರ್ಟ್‌ಗೆ ತೆರಳಿದ್ದ ಸಂದರ್ಭದಲ್ಲಿ ನಟಿ ರಮ್ಯಾ ಮಾಡಿದ್ದ ಟ್ವೀಟ್ ವ್ಯಗ್ರಗೊಂಡಿದ್ದ ದರ್ಶನ್ ಅಭಿಮಾನಿಗಳು, ರಮ್ಯಾ ಕುರಿತು ಕೆಟ್ಟದಾಗಿ ಹಾಗೂ ಅವಹೇಳನಕಾರಿಯಾಗಿ ಕಮೆಂಟ್ ಮಾಡಿದ್ದರಲ್ಲದೆ, ಸೋಶಿಯಲ್ ಮೀಡಿಯಾದಲ್ಲಿ ರಮ್ಯಾ ವಿರುದ್ಧ ಅಭಿಯಾನವನ್ನೇ ಕೈಗೊಂಡಿದ್ದರು. ಇದರ ವಿರುದ್ಧ ರಮ್ಯಾ ಪೊಲೀಸರ ಮೊರೆ ಹೋಗಿದ್ದರು. ಹಲವಾರು ಮಂದಿಯನ್ನು ಬಂಧಿಸಲಾಗಿತ್ತು.
ಇದನ್ನೂ ಓದಿ: Ramya and Vinay Rajkumar: ನಟ ವಿನಯ್ ರಾಜ್‌ಕುಮಾರ್ ಜೊತೆ ರಮ್ಯಾ ಡೇಟಿಂಗ್? ಏನಿದು ರೂಮರ್ಸ್?
60 ದಿನಗಳ ಡೆಡ್ ಲೈನ್ ಮುಗಿಯುತ್ತಾ ಬಂದ ಹಿನ್ನೆಲೆಯಲ್ಲಿ ದೋಷಾರೋಪಣ ಪಟ್ಟಿ ಸಲ್ಲಿಕೆ ಮಾಡಲಾಗಿದೆ. ಅಶ್ಲೀಲ ಕಮೆಂಟ್ ಹಾಕಿದ ಇನ್ನೂ 6 ಆರೋಪಿಗಳು ಪೊಲೀಸರಿಗೆ ಸಿಕ್ಕಿಲ್ಲ. ಆ ಆರೋಪಿಗಳು ಸಿಕ್ಕ ಬಳಿಕ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಲಿದ್ದಾರೆ. ಅಶ್ಲೀಲ ಕಮೆಂಟ್ ಹಾಕಿದ ಇನ್ನೂ ನಾಲ್ವರು ಆರೋಪಿಗಳಿಗೆ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಚಾರ್ಜ್ ಶೀಟ್ ಬೆನ್ನಲ್ಲೇ ಶೀಘ್ರದಲ್ಲೇ ಟ್ರಯಲ್ ಆರಂಭವಾಗಲಿದೆ.