ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Self Harming: ಸಂಬಳ ಸಿಗದೆ ಓಲಾ ಕಂಪನಿ ಸಿಬ್ಬಂದಿ ಆತ್ಮಹತ್ಯೆ, ಸಿಇಒ ಮೇಲೆ ದೂರು

Bengaluru: ಮೃತ ಅರವಿಂದ್ ರೂಮಿನಲ್ಲಿ 28 ಪುಟಗಳ ಡೆತ್ ನೋಟ್ ಪತ್ತೆಯಾಗಿದ್ದು, ಆಗ ಕಂಪನಿಯ ವಂಚನೆ ಬಯಲಾಗಿದೆ. ಇದೀಗ ಓಲಾ ಸಂಸ್ಥೆಯ ಸಿಇಒ ಭವೇಶ್ ಅಗರ್ವಾಲ್ ಮತ್ತು ಹಿರಿಯ ಸಿಬ್ಬಂದಿ ಸುಬ್ರತ್ ಕುಮಾರ್ ದಾಸ್ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಳ ಸಿಗದೆ ಓಲಾ ಕಂಪನಿ ಸಿಬ್ಬಂದಿ ಆತ್ಮಹತ್ಯೆ, ಸಿಇಒ ಮೇಲೆ ದೂರು

ಓಲಾ ಸಿಇಒ ಭವೇಶ್‌ ಅಗರ್‌ವಾಲ್ -

ಹರೀಶ್‌ ಕೇರ ಹರೀಶ್‌ ಕೇರ Oct 20, 2025 2:34 PM

ಬೆಂಗಳೂರು: ವೇತನ ನೀಡದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಓಲಾ ಕಂಪನಿಯ ಸಿಬ್ಬಂದಿಯೊಬ್ಬರು (Ola employee) ಆತ್ಮಹತ್ಯೆಗೆ (Self Harming) ಶರಣಾಗಿದ್ದು, ಕಂಪನಿಯ ಸಿಇಓ ವಿರುದ್ಧ ಎಫ್‌ಐಆರ್‌ (FIR) ದಾಖಲಾಗಿದೆ. ಕಂಪನಿಯ ಇಂಜಿನಿಯರ್ ಆಗಿದ್ದ ಕೆ. ಅರವಿಂದ್ ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಭತ್ಯೆ ಹಾಗೂ ವೇತನ ನೀಡದೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಡೆತ್‌ ನೋಟ್‌ ಬರೆದಿಟ್ಟ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಓಲಾ ಕಂಪನಿಯ ಹೋಮೋಲೋಗೇಶನ್ ಇಂಜಿನಿಯರಿಂಗ್ ವಿಭಾಗದಲ್ಲಿ ಕೆ. ಅರವಿಂದ್ ಕಾರ್ಯನಿರ್ವಹಿಸುತ್ತಿದ್ದರು. ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೆ. ಅರವಿಂದ್ ಆತ್ಮಹತ್ಯೆ ಮಾಡಿಕೊಂಡ ಎರಡು ದಿನಗಳ ನಂತರ ಅಕೌಂಟಿಗೆ ಹಣ ಬಂದಿದೆ. 30ನೇ ತಾರೀಕು 17 ಲಕ್ಷ 46 ಸಾವಿರ ಹಣ ಅಕೌಂಟಿಗೆ ಬಂದಿತ್ತು. ಕಂಪನಿಯಿಂದ ಅರವಿಂದ್ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು.

ಇದನ್ನು ಓದಿ: ಜಿಟಿ ಮಾಲ್‌ನ ಮೂರನೇ ಮಹಡಿಯಿಂದ ಕೆಳಬಿದ್ದು ಯುವಕ ಸಾವು

ಅನುಮಾನದಿಂದ ಕುಟುಂಬದವರು ಕಂಪನಿಯವರನ್ನು ಪ್ರಶ್ನೆ ಮಾಡಿದ್ದಾರೆ. ಕಂಪನಿಯ ಹೆಚ್.ಆರ್. ಮತ್ತು ಸಿಬ್ಬಂದಿಯಿಂದ ಅಸ್ಪಷ್ಟ ಮಾಹಿತಿ ಸಿಕ್ಕಿದೆ. ಬಳಿಕ ಅರವಿಂದ್ ರೂಮಿನಲ್ಲಿ 28 ಪುಟಗಳ ಡೆತ್ ನೋಟ್ ಪತ್ತೆಯಾಗಿದ್ದು, ಆಗ ಕಂಪನಿಯ ವಂಚನೆ ಬಯಲಾಗಿದೆ. ಇದೀಗ ಓಲಾ ಸಂಸ್ಥೆಯ ಸಿಇಒ ಭವೇಶ್ ಅಗರ್ವಾಲ್ ಮತ್ತು ಹಿರಿಯ ಸಿಬ್ಬಂದಿ ಸುಬ್ರತ್ ಕುಮಾರ್ ದಾಸ್ ವಿರುದ್ಧ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಿವಿಸಿ ಪೈಪ್‌ನಿಂದ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿತ, ಶಿಕ್ಷಕಿ, ಪ್ರಾಂಶುಪಾಲರ ಮೇಲೆ ಎಫ್‌ಐಆರ್

ಬೆಂಗಳೂರು: ಬೆಂಗಳೂರಿನ ಪ್ರೌಢಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಗೆ ಪಿವಿಸಿ ಪೈಪ್‌ನಿಂದ ಬಾಸುಂಡೆ ಬರುವಂತೆ ಥಳಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಸುಂಕದಕಟ್ಟೆಯ ಖಾಸಗಿ ಶಾಲೆಯಲ್ಲಿ ಪಿವಿಸಿ ಪೈಪ್‌ನಿಂದ 9ನೇ ತರಗತಿ ವಿದ್ಯಾರ್ಥಿಗೆ ಬಾಸುಂಡೆ ಬರುವಂತೆ ಥಳಿಸಲಾಗಿದೆ. ಎರಡು ದಿನ ಶಾಲೆಗೆ ಬರದಿದ್ದಕ್ಕೆ ಪಿವಿಸಿ ಪೈಪ್ ಬಳಶೀ ಈ ಪರಿಯಲ್ಲಿ ಹಲ್ಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

9ನೇ ತರಗತಿ ವಿದ್ಯಾರ್ಥಿ ಎರಡು ದಿನ ಶಾಲೆಗೆ ಬಂದಿರಲಿಲ್ಲ. ಮಾರನೆ ದಿನ ಶಾಲೆಗೆ ಹೋಗುತ್ತಿದ್ದಂತೆ ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿದ್ಯಾರ್ಥಿಯನ್ನು ಪಿವಿಸಿ ಪೈಪ್‌ನಿಂದ ಹೊಡೆದಿದ್ದು, ಗಂಭೀರವಾಗಿ ಹಲ್ಲೆಗೊಳಗಾಗಿರುವ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲಾಗಿದ್ದಾನೆ. ವಿದ್ಯಾರ್ಥಿ ಸ್ಥಿತಿ ಗಂಭೀರವಾಗಿದೆ. ಈ ಬಗ್ಗೆ ವಿದ್ಯಾರ್ಥಿಯ ತಾಯಿ ಕಾಮಾಕ್ಷಿಪಾಳ್ಯ ಠಾಣೆಯಲ್ಲಿ ದೂರು ನೀಡಿದ್ದಾರೆ. ಶಿಕ್ಷಕಿ ಹಾಗೂ ಪ್ರಾಂಶುಪಾಲ ರಾಕೇಶ್ ಕುಮಾರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಘಟನೆ ಸಂಬಂಧ ಪ್ರಕರಣ ದಾಖಲಾಗಿದೆ.