ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shootout: ರೇಪ್‌ ಕೇಸ್‌ನಲ್ಲಿ ಜೈಲುಪಾಲಾಗಿದ್ದವ ಜಾಮೀನಿನಲ್ಲಿ ಹೊರ ಬಂದು ಸಂತ್ರಸ್ತೆ ಮೇಲೆ ಗುಂಡಿನ ದಾಳಿ

Shooting at physical abuse Survivor:ಕಳೆದ ವರ್ಷ ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ಅಬುಜೈರ್ ಸಫಿ (30) ಎಂಬಾತ ಜೈಲುಪಾಲಾಗಿದ್ದ. ಇದೀಗ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿದ್ದ ಆತನ ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಜೈಲಿನಿಂದ ಹೊರಬಂದು ಅತ್ಯಾಚಾರ ಸಂತ್ರಸ್ತೆ ಮೇಲೆ ಗುಂಡಿನ ದಾಳಿ

Rakshita Karkera Rakshita Karkera Aug 3, 2025 12:37 PM

ನವದೆಹಲಿ: ಕಳೆದ ವರ್ಷ ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಕಿಡಿಗೇಡಿಯೊಬ್ಬ ಜಾಮೀನಿನ ಮೂಲಕ ಹೊರಬಂದು ಸಂತ್ರಸ್ತ ಮಹಿಳೆ ಮೇಲೆ ಗುಂಡಿನ ದಾಳಿ(Shootout) ನಡೆಸಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ವಸಂತ್ ವಿಹಾರ್‌ನಲ್ಲಿ ಈ ಘಟನೆ ನಡೆದಿದ್ದು, ಕಳೆದ ವರ್ಷ ಮಹಿಳೆಯೊಬ್ಬರು ದಾಖಲಿಸಿದ್ದ ಅತ್ಯಾಚಾರ ಪ್ರಕರಣದಲ್ಲಿ ಅಬುಜೈರ್ ಸಫಿ (30) ಎಂಬಾತ ಜೈಲುಪಾಲಾಗಿದ್ದ. ಇದೀಗ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿದ್ದ ಆತನ ಮಹಿಳೆಯ ಮೇಲೆ ಗುಂಡು ಹಾರಿಸಿದ್ದಾನೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.

ಸಲೂನ್‌ವೊಂದರಲ್ಲಿ ಮುಖ್ಯ ವ್ಯವಸ್ಥಾಪಕಿಯಾಗಿದ್ದ ಮಹಿಳೆಯ ಎದೆಗೆ ಗುಂಡು ತಗುಲಿದ್ದು, ಅವರನ್ನು ಪಿಸಿಆರ್ ವ್ಯಾನ್‌ನಲ್ಲಿ ಏಮ್ಸ್ ಟ್ರಾಮಾ ಸೆಂಟರ್‌ಗೆ ಕರೆದೊಯ್ಯಲಾಯಿತು. ಮಹಿಳೆ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನು ಗುಂಡಿನ ದಾಳಿ ನಡೆಸಿದ್ದ ಅಬುಜೈರ್ ಸಫಿ (30) ಮತ್ತು ಅವರ ಸಹಚರ ಅಮನ್ ಶುಖ್ಲಾ ಅವರನ್ನು ಪೊಲೀಸರು ಬಂಧಿಸಲಾಗಿದೆ. ಪೊಲೀಸರ ಪ್ರಕಾರ, ಆಟೋರಿಕ್ಷಾದಲ್ಲಿ ಹೋಗುತ್ತಿದ್ದ ಮಹಿಳೆಯನ್ನು ಕಪ್ಪು ಮೋಟಾರ್‌ಸೈಕಲ್‌ನಲ್ಲಿ ಚೇಸ್‌ ಮಾಡಿದ ಆರೋಪಿಗಳು ಗುಂಡಿನ ದಾಳಿ ನಡೆಸಿದ್ದಾರೆ. ತಕ್ಷಣ ಆಟೋ ಚಾಲಕ ರಂಜೀತ್‌ ಪೊಲೀಸರಿಗೆ ಕರೆ ಮಾಡಿ ವಿಚಾರವನ್ನು ತಿಳಿಸಿದ್ದಾನೆ.

ಮಹಿಳೆಯ ಹೇಳಿಕೆಯ ಆಧಾರದ ಮೇಲೆ ವಸಂತ್ ವಿಹಾರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 109(1) (ಕೊಲೆ ಯತ್ನ) ಮತ್ತು 3(5) (ಸಾಮಾನ್ಯ ಉದ್ದೇಶ) ಮತ್ತು ಶಸ್ತ್ರಾಸ್ತ್ರ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ತನ್ನ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಕ್ಕಾಗಿ ಸಫಿ ಮಹಿಳೆ ಮೇಲೆ ಕೋಪಗೊಂಡಿದ್ದ ಎಂದು ತಿಳಿದುಬಂದಿದೆ. ಅವನು ಅವಳನ್ನು ಹಲವು ಬಾರಿ ಸಂಪರ್ಕಿಸಲು ಪ್ರಯತ್ನಿಸಿದ್ದನು, ಆದರೆ ಅವಳು ಪ್ರತಿಕ್ರಿಯಿಸಲು ನಿರಾಕರಿಸಿದಳು, ಇದು ಅವನ ಕೋಪವನ್ನು ಮತ್ತಷ್ಟು ಹೆಚ್ಚಿಸಿತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Goa Murder Case: ವಿದೇಶಿ ಯುವತಿ ಮೇಲೆ ಅತ್ಯಾಚಾರ-ಕೊಲೆ; ವ್ಯಕ್ತಿಗೆ ಜೀವಾವಧಿ ಶಿಕ್ಷೆ

ಸಿಸಿಟಿವಿ ದೃಶ್ಯಾವಳಿಗಳು, ತಾಂತ್ರಿಕ ಕಣ್ಗಾವಲು ಮತ್ತು ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಂಡು ಸಫಿಯ ಸಹಚರ ಶುಕ್ಲಾನನ್ನು ಬಂಧಿಸಲಾಯಿತು ಮತ್ತು ಅಪರಾಧದಲ್ಲಿ ಬಳಸಲಾದ ಮೋಟಾರ್ ಸೈಕಲ್ ಅನ್ನು ವಶಪಡಿಸಿಕೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಇನ್ನು ಆರೋಪಿಗಳ ಹಿನ್ನೆಲೆಯನ್ನು ಪರಿಶೀಲಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ಹೇಳಿದರು.