ಹುಂಡಿ ಒಡೆದು 50 ಸಾವಿರಕ್ಕೂ ಅಧಿಕ ಹಣ ಕಳವು
ರಾತ್ರಿ ವೇಳೆ ದೇವಾಲಯದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ಕದ್ದಿದ್ದಾರೆ. ಬೆಳಗ್ಗೆ ದೇವಾಲಯಕ್ಕೆ ಬಂದ ಸ್ಥಳೀಯರು ಕಳ್ಳತನ ನಡೆದಿರುವು ದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪಿಎಸ್ಐ ಸುನೀಲ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಗಗನಸಿಂಧು ಕೂಡ ಸ್ಥಳಕ್ಕೆ ಭೇಟಿ ನೀಡಿ ದೇವಾಲಯದ ಪರಿಸ್ಥಿತಿಯನ್ನು ಪರಿಶೀಲಿಸಿದರು.
-
ಶಿಡ್ಲಘಟ್ಟ: ತಾಲೂಕಿನ ಚಿಕ್ಕದಾಸರಹಳ್ಳಿ ಗ್ರಾಮದ ಗುಡ್ಡದ ಮೇಲಿರುವ ಬ್ಯಾಟರಾಯಸ್ವಾಮಿ ದೇವಾಲಯದಲ್ಲಿ ಕಳ್ಳತನ ನಡೆದಿದ್ದು, ಹುಂಡಿ ಒಡೆದು 50 ಸಾವಿರಕ್ಕೂ ಅಧಿಕ ಹಣವನ್ನು ಕಳ್ಳರು ದೋಚಿಕೊಂಡು ಪರಾರಿಯಾಗಿದ್ದಾರೆ.
ರಾತ್ರಿ ವೇಳೆ ದೇವಾಲಯದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ಹುಂಡಿಯನ್ನು ಒಡೆದು ಅದರಲ್ಲಿದ್ದ ಹಣವನ್ನು ಕದ್ದಿದ್ದಾರೆ. ಬೆಳಗ್ಗೆ ದೇವಾಲಯಕ್ಕೆ ಬಂದ ಸ್ಥಳೀಯರು ಕಳ್ಳತನ ನಡೆದಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಶಿಡ್ಲಘಟ್ಟ ಗ್ರಾಮಾಂತರ ಠಾಣೆಯ ಪಿಎಸ್ಐ ಸುನೀಲ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಗಗನಸಿಂಧು ಕೂಡ ಸ್ಥಳಕ್ಕೆ ಭೇಟಿ ನೀಡಿ ದೇವಾಲಯದ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಇದನ್ನೂ ಓದಿ: Shidlaghatt Crime: ಪೊಲೀಸರ ಚುರುಕಿನ ಕಾರ್ಯಾಚರಣೆಗೆ ಸಿಕ್ಕಿಬಿದ್ದ ವಾಹನ ಕಳ್ಳ ಕಳುವಾಗಿದ್ದ 5 ವಾಹನಗಳ ಜಪ್ತಿ
ಪದೇಪದೇ ಕಳ್ಳತನ: ಗ್ರಾಮಸ್ಥರ ಆಕ್ರೋಶ
ಬ್ಯಾಟರಾಯಸ್ವಾಮಿ ದೇವಾಲಯದಲ್ಲಿ ಈ ಹಿಂದೆಯೂ ಹಲವು ಬಾರಿ ಕಳ್ಳತನ ನಡೆದಿದ್ದರೂ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸದಿರುವ ಬಗ್ಗೆ ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇವಾಲಯದ ಸುತ್ತಮುತ್ತ ಸಿಸಿ ಕ್ಯಾಮೆರಾ ಅಳವಡಿಸಿ, ರಾತ್ರಿ ವೇಳೆ ಭದ್ರತಾ ವ್ಯವಸ್ಥೆ ಕಲ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.
ದೇವಾಲಯದಲ್ಲಿ ಈ ಹಿಂದೆಯೂ ಕಳ್ಳತನ ನಡೆದಿರುವ ಬಗ್ಗೆ ಮಾಹಿತಿ ಇದೆ. ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಲಾಗಿದೆ. ಮುಂದಿನ ದಿನಗಳಲ್ಲಿ ಕಳ್ಳತನ ಮರುಕಳಿಸದಂತೆ ಸಿಸಿ ಕ್ಯಾಮೆರಾ ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಹಸೀಲ್ದಾರ್ ಗಗನಸಿಂಧು ತಿಳಿಸಿದ್ದಾರೆ.
ಘಟನೆ ಸಂಬಂಧ ಶಿಡ್ಲಘಟ್ಟ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳ್ಳರ ಸುಳಿವಿಗಾಗಿ ಪರಿಶೀಲನೆ ನಡೆಸಲಾಗುತ್ತಿದೆ.