ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸೇನೆ, ಗಡಿ ಭದ್ರತಾ ಪಡೆ, ರೈಲ್ವೆ ಬಗ್ಗೆ ಬೇಹುಗಾರಿಕೆ: ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನದ ವ್ಯಕ್ತಿಯ ಬಂಧನ

ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ ಜೊತೆ ಸಂಪರ್ಕ ಹೊಂದಿದ್ದ ಪಾಕಿಸ್ತಾನ ಮೂಲದ ವ್ಯಕ್ತಿಯೊಬ್ಬನನ್ನು ಪಶ್ಚಿಮ ಬಂಗಾಳದಲ್ಲಿ ವಿಶೇಷ ಕಾರ್ಯಪಡೆ ಅಧಿಕಾರಿಗಳು ಬಂಧಿಸಿದ್ದಾರೆ. ನಕಲಿ ದಾಖಲೆಗಳನ್ನು ಬಳಸಿ ಆತ ಭಾರತದಲ್ಲಿ ಹಲವು ವರ್ಷಗಳಿಂದ ಸೇನೆ, ಗಡಿ ಭದ್ರತಾ ಪಡೆ, ರೈಲ್ವೆ ಬಗ್ಗೆ ಬೇಹುಗಾರಿಕೆ ನಡೆಸುತ್ತಿದ್ದ ಎನ್ನಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನ ಪ್ರಜೆಯ ಬಂಧನ

ಸಂಗ್ರಹ ಚಿತ್ರ -

ಕೋಲ್ಕತ್ತಾ: ಭಾರತೀಯ ಸೇನೆ (indian Army), ಗಡಿ ಭದ್ರತಾ ಪಡೆ (india Border Security Force) ಮತ್ತು ರೈಲ್ವೆ (indian Railways) ಕುರಿತು ಬೇಹುಗಾರಿಕೆ (Spy) ನಡೆಸುತ್ತಿದ್ದ ಪಾಕಿಸ್ತಾನದ ಪ್ರಜೆಯೊಬ್ಬನನ್ನು (Pakistan nationals) ಪಶ್ಚಿಮ ಬಂಗಾಳದಲ್ಲಿ (west bengal) ಬಂಧಿಸಲಾಗಿದೆ. ಆರೋಪಿಯನ್ನು ಪಾಕಿಸ್ತಾನದ ಫೈಸಲಾಬಾದ್ ನಿವಾಸಿ ರಾಣಾ ರೌಫ್ ಎಂದು ಗುರುತಿಸಲಾಗಿದೆ. ಈತ ನಕಲಿ ದಾಖಲೆಗಳನ್ನು ತಯಾರಿಸಿ ಭಾರತದಲ್ಲಿ ಕಳೆದ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದನು. ಇಂಟರ್-ಸರ್ವೀಸಸ್ ಇಂಟೆಲಿಜೆನ್ಸ್ (ISI) ಜೊತೆ ನೇರ ಸಂಪರ್ಕ ಹೊಂದಿದ್ದ ಈತನನ್ನು ಪಶ್ಚಿಮ ಬಂಗಾಳದ ವಿಶೇಷ ಕಾರ್ಯಪಡೆ (STF) ಬಂಧಿಸಿದೆ.

ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ ಜೊತೆ ನೇರ ಸಂಪರ್ಕ ಹೊಂದಿರುವ ಶಂಕೆಯ ಮೇರೆಗೆ ಪಾಕಿಸ್ತಾನಿ ಗೂಢಚಾರನನ್ನು ಪಶ್ಚಿಮ ಬಂಗಾಳದ ವಿಶೇಷ ಕಾರ್ಯಪಡೆ ಬಂಧಿಸಿದೆ. ಇಟ ಭಾರತೀಯ ಸೇನೆ, ಗಡಿ ಭದ್ರತಾ ಪಡೆ ಮತ್ತು ರೈಲ್ವೆಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸುತ್ತಿದ್ದ ಎಂದು ಆರೋಪಿಸಲಾಗಿದೆ.

FCRA ತಿದ್ದುಪಡಿ ಮಸೂದೆ ಸಂಸತ್ತಿನ ಜಂಟಿ ಸಮಿತಿಗೆ ವಹಿಸಿದ ಕೇಂದ್ರ: ಪ್ರತಿಪಕ್ಷದ ವಿರೋಧದ ನಡುವೆ ಲೋಕಸಭೆಯಲ್ಲಿ ಧ್ವನಿಮತದಿಂದ ಅಂಗೀಕಾರ

2012ರಿಂದ ಭಾರತದಲ್ಲಿ ನೆಲೆಯಾಗಿರುವ ಪಾಕಿಸ್ತಾನದ ಫೈಸಲಾಬಾದ್ ನಿವಾಸಿ ರಾಣಾ ರೌಫ್ ನನ್ನು ಐಎಸ್‌ಐ ನೇರವಾಗಿ ನೇಮಕ ಮಾಡಿದೆ. ಈತನ ಬಳಿ ನಕಲಿ ಭಾರತೀಯ ದಾಖಲೆಗಳು ಕಂಡು ಬಂದಿದ್ದು, ಈ ಕುರಿತು ವಿಚಾರಣೆ ನಡೆಸಲಾಗುತ್ತಿದೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.

ರಾಣಾ ರೌಫ್ 2012ರಿಂದ ನೇಪಾಳದಲ್ಲಿ ನೆಲೆಸಿದ್ದು, ಅಕ್ರಮವಾಗಿ ಗಡಿ ದಾಟಿ ಭಾರತಕ್ಕೆ ಬಂದಿದ್ದನು. ಆತ ಪಶ್ಚಿಮ ಬಂಗಾಳಕ್ಕೆ ಬಂದು ಬಳಿಕ ಕೋಲ್ಕತ್ತಾದಲ್ಲಿ ಶಾಶ್ವತ ಗುರುತು ಪಡೆಯಲು ಪ್ರಯತ್ನಿಸಿದ್ದನು. ರೌಫ್ ವಹ್ಫ್ ಎಂಬ ಹೆಸರಿನಲ್ಲಿ ಕೋಲ್ಕತ್ತಾದ ಟೋಪ್ಸಿಯಾದಲ್ಲಿ ನಕಲಿ ವಿಳಾಸ ಪಡೆದು ಭಾರತೀಯ ಗುರುತಿನ ದಾಖಲೆಗಳನ್ನು ಮದುಕೊಂಡಿದ್ದಾನೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.



ರೌಫ್ ಕೋಲ್ಕತ್ತಾದಲ್ಲಿ ಸೇನೆಯ ಪೂರ್ವ ಕಮಾಂಡ್, ಬಿಎಸ್‌ಎಫ್ ಚಲನೆ ಮತ್ತು ರೈಲ್ವೆ ಮೂಲಸೌಕರ್ಯಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಯನ್ನು ಸಂಗ್ರಹಿಸುತ್ತಿದ್ದನು. ನೇಪಾಳದಲ್ಲಿ ವಾಸಿಸುವ ಭಾರತೀಯ ಪ್ರಜೆಗಳನ್ನು ತನ್ನ ಬೇಹುಗಾರಿಕೆ ಜಾಲಕ್ಕೆ ಸೇರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.

ನರೇಂದ್ರ ಮೋದಿ–ಮಲ್ಲಿಕಾರ್ಜುನ ಖರ್ಗೆ ಹಾಸ್ಯ ಚಟಾಕಿ: ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡ ರಾಜಕೀಯ ವೈರಿಗಳ ಅಪರೂಪದ ಕ್ಷಣ ವೈರಲ್

ರೌಫ್ ಬಾಂಗ್ಲಾದೇಶದ ಮೂಲಕ ಪಾಕಿಸ್ತಾನಕ್ಕೆ ಪ್ರಯಾಣಿಸಲು ತಯಾರಿ ನಡೆಸುತ್ತಿದ್ದನು. ಆತನ ಜೊತೆ ಸಂಬಂಧ ಹೊಂದಿದ್ದ ಇನ್ನೊಬ್ಬ ವ್ಯಕ್ತಿಯನ್ನು ಕೂಡ ಬಂಧಿಸಲಾಗಿದೆ. ಅವರ ಯೋಜನೆಗಳ ಬಗ್ಗೆ ತನಿಖೆ ಮುಂದುವರಿಸಲಾಗಿದೆ ಎಂದು ತನಿಖಾಧಿಕಾರಿಗಳು ಹೇಳಿದ್ದಾರೆ.