Pahalgam terror Attack: ಪಹಲ್ಗಾಂ ದಾಳಿ ಸಮರ್ಥಿಸಿಕೊಂಡ ಮಂಗಳೂರಿನ ವ್ಯಕ್ತಿಯ ಬಂಧನ
ನಿಚ್ಚು ಮಂಗಳೂರು ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಇಂಥ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಉಳ್ಳಾಲ ತಾಲೂಕಿನ ಉಳ್ಳಾಲತ್ತಿ ನಿವಾಸಿ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಯ ಕುರಿತು ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಲಾಗಿದೆ ಎಂದು ದೂರಲಾಗಿದೆ.

ನಿಚ್ಚು ಮಂಗಳೂರು ಆಕ್ಷೇಪಾರ್ಹ ಪೋಸ್ಟ್

ಮಂಗಳೂರು: ಹಿಂದಿನ ಅಪರಾಧ ಕೃತ್ಯವೊಂದನ್ನು ಉಲ್ಲೇಖಿಸಿ ಪಹಲ್ಗಾಂ ಭಯೋತ್ಪಾದಕ ದಾಳಿಯನ್ನು (Pahalgam terror Attack) ಸಮರ್ಥಿಸಿಕೊಂಡಿದ್ದ ಮಂಗಳೂರಿನ (Mangaluru) ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೆ ನಿಲ್ದಾಣದಲ್ಲಿ ಮೂವರು ಮುಸ್ಲಿಮರನ್ನು ಹತ್ಯೆ ಮಾಡಿದ್ದ ಚೇತನ್ ಸಿಂಗ್ ಎಂಬಾತನಿಗೆ ಶಿಕ್ಷೆಯಾಗಿದ್ದರೆ ಇಂದು ಕಾಶ್ಮೀರದಲ್ಲಿ ಇಂತಹ ಕೃತ್ಯ ನಡೆಯುತ್ತಿರಲಿಲ್ಲ ಎಂದು ಪ್ರಚೋದನಕಾರಿಯಾಗಿ ಪೋಸ್ಟ್ (provocative post) ಮಾಡುವ ಮೂಲಕ ಪಹಲ್ಗಾಮ್ ಉಗ್ರ ದಾಳಿಯನ್ನು ಈತ ಸಮರ್ಥಿಸಿಕೊಂಡಿದ್ದ.
ನಿಚ್ಚು ಮಂಗಳೂರು ಎಂಬ ಬಳಕೆದಾರ ಫೇಸ್‌ಬುಕ್‌ನಲ್ಲಿ ಇಂಥ ಪ್ರಚೋದನಕಾರಿ ಪೋಸ್ಟ್ ಹಾಕಿದ್ದಕ್ಕಾಗಿ ಉಳ್ಳಾಲ ತಾಲೂಕಿನ ಉಳ್ಳಾಲತ್ತಿ ನಿವಾಸಿ ಸತೀಶ್ ಕುಮಾರ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಾರ್ವಜನಿಕ ಶಾಂತಿಗೆ ಭಂಗ ತರುವ ಉದ್ದೇಶದಿಂದ ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕ ಘಟನೆಯ ಕುರಿತು ಪ್ರಚೋದನಕಾರಿ ಮತ್ತು ಆಕ್ಷೇಪಾರ್ಹ ಹೇಳಿಕೆ ನೀಡಲಾಗಿದೆ ಎಂದು ದೂರಲಾಗಿದೆ. ದೂರುದಾರರು ಪೋಸ್ಟ್‌ನ ಸ್ಕ್ರೀನ್‌ಶಾಟ್‌ಗಳನ್ನು ಮತ್ತು ಬಳಕೆದಾರರ ಪ್ರೊಫೈಲ್ ಅನ್ನು ಸಾಕ್ಷ್ಯಕ್ಕಾಗಿ ಸಲ್ಲಿಸಿದ್ದಾರೆ. ಭಾರತೀಯ ನ್ಯಾಯ ಸಂಹಿತಾ (BNS), 2023 ರ ಸೆಕ್ಷನ್ 192 ಮತ್ತು 353(1)(b) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಮುಂದುವರೆದಿದೆ.
"2023ರಲ್ಲಿ ಮಹಾರಾಷ್ಟ್ರದ ಪಾಲ್ಗರ್ ರೈಲ್ವೇ ಸ್ಟೇಷನ್‌ನಲ್ಲಿ ಚೇತನ್ ಸಿಂಗ್ ಎಂಬ ಷಂಡಪರಿವಾರದ ಭಯೋತ್ಪಾದಕ ನೀವು ಮುಸ್ಲಿಮಾ ಅಂತ ಕೇಳಿ ಮೂರು ಮಂದಿ ಮುಸ್ಲಿಮರನ್ನ ಹತ್ಯೆ ಮಾಡಿರುವುದನ್ನೂ ಷಂಡಪೀತ ಮಾಧ್ಯಮಗಳು ನೆನಪಿಸಬೇಕು. ಆವತ್ತು ಆ ಭಯೋತ್ಪಾದಕ ಷಂಡನನ್ನ ಸಾರ್ವಜನಿಕವಾಗ ಕುತ್ತಿಗೆಗೆ ಹಗ್ಗ ಹಾಕ್ತಿದ್ರೆ ಇಂದು ಶ್ರೀನಗರದಲ್ಲೂ ಇಂತಹಾ ಕೃತ್ಯ ನಡೆಯುತ್ತಿರಲಿಲ್ಲ" ಎಂದು ನಿಚ್ಚು ಮಂಗಳೂರು ಬರೆದುಕೊಂಡಿದ್ದಾನೆ.
ಇದನ್ನೂ ಓದಿ: Pahalgam Terror Attack: ಪಹಲ್ಗಾಮ್ ದಾಳಿ ಬಳಿಕ ಪಾಕಿಸ್ತಾನಿಯರು ಗೂಗಲ್‌ನಲ್ಲಿ ಹುಡುಕಿದ್ದು ಏನು ಗೊತ್ತೇ ?