Physical Assault: ವಿದ್ಯಾರ್ಥಿನಿಯನ್ನು ಹೊತ್ತೊಯ್ದು ಅತ್ಯಾಚಾರವೆಸಗಿದ ಪಿಜಿ ಮಾಲೀಕ
ರಾಜ್ಯದಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಪಿ.ಜಿ ಮಾಲೀಕನೊಬ್ಬ ಪಿಜಿಗೆ ಸೇರಿಕೊಂಡಿದ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿ ಅಶ್ರಫ್‌ನನ್ನು ಬಂಧಿಸಲಾಗಿದೆ.


ಬೆಂಗಳೂರು: ರಾಜ್ಯದಲ್ಲಿ ಪೈಶಾಚಿಕ ಕೃತ್ಯ ನಡೆದಿದ್ದು, ಪಿ.ಜಿ (Physical Assault) ಮಾಲೀಕನೊಬ್ಬ ಪಿಜಿಗೆ ಸೇರಿಕೊಂಡಿದ ವಿದ್ಯಾರ್ಥಿನಿಯನ್ನು ಕಾರಿನಲ್ಲಿ ಹೊತ್ತೊಯ್ದು ಅತ್ಯಾಚಾರ ಎಸಗಿರುವ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಸೋಲದೇವನಹಳ್ಳಿ ಠಾಣೆಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿ ಅಶ್ರಫ್‌ನನ್ನು ಪೊಲೀಸರು ಬಂಧಿಸಿದ್ದಾರೆ. ವಿದ್ಯಾರ್ಥಿನಿ ಕಳೆದ 10 ದಿನಗಳ ಹಿಂದೆ ಪಿಜಿಗೆ ಬಂದು ಸೇರಿದ್ದಳು. ಶನಿವಾರ ತಡರಾತ್ರಿ ಕಾರಿನಲ್ಲಿ ವಿದ್ಯಾರ್ಥಿನಿಯನ್ನು ಪಿಜಿ ಮಾಲೀಕ ಅಶ್ರಫ್ ನಿರ್ಜನ ಪ್ರದೇಶಕ್ಕೆ ಹೊತ್ತೊಯ್ದು ಅತ್ಯಾಚಾರವೆಸಗಿದ್ದಾನೆ.
ಸದ್ಯ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆರೋಪಿ ಅಶ್ರಫ್‌ನನ್ನು ಬಂಧಿಸಲಾಗಿದೆ. ಕಳೆದ ವಾರ ಮತ್ತೊಂದು ನೀಚ ಕೃತ್ಯ ನಡೆದಿದ್ದು, ಶಿಕ್ಷಕರೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ಇಬ್ಬರು ಉಪನ್ಯಾಸಕರು ಹಾಗೂ ಅವರ ಸ್ನೇಹಿತ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಂಬಂಧ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ ನೋಟ್ಸ್ ನೀಡುವ ನೆಪದಲ್ಲಿ ವಿದ್ಯಾರ್ಥಿನಿ ಜತೆ ಸಲುಗೆ ಬೆಳೆಸಿಕೊಂಡಿದ್ದ. ಬಳಿಕ ವಾಟ್ಸಾಪ್ ನಲ್ಲಿ ಚಾಟ್ ಮಾಡುತ್ತಿದ್ದ, ವಿದ್ಯಾರ್ಥಿನಿ ನಂಬಿ ಆಗಾಗ ಉಪನ್ಯಾಸಕನಿಂದ ನೋಟ್ಸ್ ಪಡೆಯುತ್ತಿದ್ದ ಆಕೆ ಬೆಂಗಳೂರಿಗೆ ಬಂದ ನಂತರವೂ ಚಾಟ್ ಮಾಡುವುದು, ನೋಟ್ಸ್ ನೀಡುವುದನ್ನು ಮುಂದುವರಿಸಿದ್ದ.
ಈ ಸುದ್ದಿಯನ್ನೂ ಓದಿ: Physical Assault: ಸಿಂಗಾಪುರದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ; ಭಾರತೀಯನಿಗೆ 14 ವರ್ಷ ಜೈಲು ಶಿಕ್ಷೆ
ಅದೇ ನೆಪದಲ್ಲಿ ಮಾರತಹಳ್ಳಿಯ ಗೆಳೆಯನ ರೂಮ್ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿ ವಿಚಾರ ಯಾರಿಗೂ ತಿಳಿಸದಂತೆ ಬೆದರಿಕೆ ಹಾಕಿದ್ದ ಎಂದು ತಿಳಿದು ಬಂದಿದೆ. , ಉಪನ್ಯಾಸಕರಿಂದಲೇ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ, ಪೋಷಕರಿಗೆ ತಿಳಿಸಿದ್ದಳು. ಅಲ್ಲದೇ, ಬೆಂಗಳೂರಲ್ಲಿ ಮಹಿಳಾ ಆಯೋಗಕ್ಕೂ ದೂರು ನೀಡಿದ್ದಳು. ಸಂತ್ರಸ್ತೆಯ ದೂರಿನ ಮೇರೆಗೆ ಮಾರತ್ತಹಳ್ಳಿ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಸದ್ಯ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.